Viral Video: ಲಿಫ್ಟ್ ಒಳಗೆ ಸೆಲ್ಫಿ ತೆಗೆಯುವ ಅಭ್ಯಾಸ ನಿಮಗಿದೆಯಾ? ಹಾಗಿದ್ರೆ ಈ ವಿಡಿಯೋ ನೀವು ನೋಡಲೇ ಬೇಕು

ಯುವತಿಯೊಬ್ಬಳು ಸೆಲ್ಫಿ ಕ್ಲಿಕ್ಕಿಸಲು ಹೋಗಿ ತನ್ನ ಮೊಬೈಲ್​​​ ಫೋನನ್ನೇ ಕಳೆದುಕೊಂಡಿದ್ದಾಳೆ. @crazyclipsonly ಎಂಬ ಟ್ವಿಟರ್​​ ಖಾತೆಯಲ್ಲಿ ಏಪ್ರಿಲ್​​​ 05ರಂದು ಹಂಚಿಕೊಂಡ ವಿಡಿಯೋ ಒಂದೇ ದಿನದಲ್ಲಿ 12.7ಮಿಲಿಯನ್​ ವೀಕ್ಷಣೆಯನ್ನು ಪಡೆದುಕೊಂಡಿದೆ.

ಸಾಕಷ್ಟು ಜನರಿಗೆ ಲಿಫ್ಟ್​​ ಒಳಗೆ ಮಿರರ್​​ನಲ್ಲಿ ಅಥವಾ ಸುಮ್ಮನೆ ಸೆಲ್ಫಿ ತೆಗೆಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದೀಗ ಇಲ್ಲೊಂದು ವಿಡಿಯೋ ವೈರಲ್​​ ಆಗಿದ್ದು, ಯುವತಿಯೊಬ್ಬಳು ಸೆಲ್ಫಿ ಕ್ಲಿಕ್ಕಿಸಲು ಹೋಗಿ ತನ್ನ ಮೊಬೈಲ್​​​ ಫೋನನ್ನೇ ಕಳೆದುಕೊಂಡಿದ್ದಾಳೆ. @crazyclipsonly ಎಂಬ ಟ್ವಿಟರ್​​ ಖಾತೆಯಲ್ಲಿ ಏಪ್ರಿಲ್​​​ 05ರಂದು ಹಂಚಿಕೊಂಡ ವಿಡಿಯೋ ಒಂದೇ ದಿನದಲ್ಲಿ 12.7ಮಿಲಿಯನ್​ ವೀಕ್ಷಣೆಯನ್ನು ಪಡೆದುಕೊಂಡಿದೆ.

ವಿಡಿಯೋದಲ್ಲಿ ಯುವತಿ ಸೆಲ್ಫಿ ತೆಗೆದು ಲಿಫ್ಟ್​​ನಿಂದ ಹೊರ ಬರುವ ವೇಳೆ ಲಿಫ್ಟ್​​ನ ಒಳಗೆ ಬಿದ್ದಿದೆ. ಮೊಬೈಲ್ ಎಲ್ಲಿ ಬಿದ್ದಿದೆ ಎಂದು ನೋಡಲು ಲಿಫ್ಟ್ ಕೆಳಗೆ ನೋಡಲು ಪ್ರಯತ್ನಿಸಿದ್ದು, ಆದರೆ ಯಾವುದೇ ಪ್ರಯೋಜನವಾಗದೇ ಅಳುತ್ತಿರುವುದನ್ನು ಕಾಣಬಹುದು. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಪ್ರತಿಕ್ರಿಯಿಸಿದ್ದು “ನಿಮ್ಮ ಫೋನ್ ಈ ರೀತಿ ಕೆಳಗೆ ಬೀಳುವಂಥ ತಪ್ಪನ್ನು ಎಂದಿಗೂ ಮಾಡಬೇಡಿ, ಬದಲಿಗೆ ನಿಮ್ಮ ಫೋನ್ ಅನ್ನು ನಿಮ್ಮ ಜೇಬಿನಲ್ಲಿ ಇರಿಸಿ” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us