Video Viral: ಮೊಬೈಲ್​​ ಕಿತ್ತುಕೊಳ್ಳಲು ಬಂದ ಯುವಕನಿಗೆ ನಡುರಸ್ತೆಯಲ್ಲೇ ಬಟ್ಟೆಬಿಚ್ಚಿಸಿ ಥಳಿಸಿದ ಮಹಿಳೆ

ಮೀರತ್‌ನಲ್ಲಿ ಫೋನ್ ಕಸಿದುಕೊಳ್ಳಲು ಯತ್ನಿಸಿದ ಯುವಕನನ್ನು ಮಹಿಳೆ ಮತ್ತು ಸ್ಥಳೀಯರು ಅಮಾನುಷವಾಗಿ ಥಳಿಸಿದ ಘಟನೆ ವೈರಲ್ ಆಗಿದೆ. ಮೊಬೈಲ್​​ ಕಸಿಯಲು ಯತ್ನಿಸಿದ ಯುವಕನನ್ನು ಹಿಡಿದು ಮಹಿಳೆ ಅರೆಬೆತ್ತಲೆಯಾಗಿ ವಿವಸ್ತ್ರಗೊಳಿಸಿ ಥಳಿಸಿದ್ದಾಳೆ. ಸ್ಥಳೀಯರೂ ಸೇರಿ ಹೊಡೆದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

Follow us
ಅಕ್ಷತಾ ವರ್ಕಾಡಿ
|

Updated on: Oct 26, 2024 | 10:45 AM

ಉತ್ತರ ಪ್ರದೇಶ: ಮಹಿಳೆಯ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮಹಿಳೆ ಮತ್ತು ಸ್ಥಳೀಯರು ಸೇರಿ ಅರೆಬೆತ್ತಲೆಯಾಗಿ ವಿವಸ್ತ್ರಗೊಳಿಸಿ ಅಮಾನುಷವಾಗಿ ಥಳಿಸಿದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಜನಸಂದಣಿಯಿರುವ ಮಾರ್ಕೆಟ್​​ನಲ್ಲಿ ಯುವಕ ಫೋನ್ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆ ವೇಳೆ ಮಹಿಳೆ ಜೋರಾಗಿ ಕಿರುಚಿದ್ದು ತಕ್ಷಣ ಸ್ಥಳೀಯರು ಆತನನ್ನು ಹಿಡಿದು ಮಹಿಳೆಯ ಕೈಗೊಪ್ಪಿಸಿದ್ದಾರೆ. ಕೋಪಗೊಂಡ ಮಹಿಳೆ ನಡುರಸ್ತೆಯಲ್ಲೇ ಆತನ ಬಟ್ಟೆಬಿಚ್ಚಿಸಿ ಮನಬಂದಂತೆ ಥಳಿಸಿದ್ದಾಳೆ. ಜೊತೆಗೆ ಸ್ಥಳೀಯರೂ ಕೂಡ ಸೇರಿ ಹೊಡೆದಿರುವುದು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಆರೋಪಿಯು ತನಗೆ ಥಳಿಸುವುದನ್ನು ನಿಲ್ಲಿಸುವಂತೆ ಮಹಿಳೆಗೆ ಮನವಿ ಮಾಡುವುದನ್ನು ವೀಡಿಯೊದಲ್ಲಿ ಕಾಣಬಹುದು. ಸ್ಥಳೀಯರು ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಂಪುಲ್ ಬಳಿ ಈ ಘಟನೆ ನಡೆದಿದೆ. ಆರೋಪಿಯನ್ನು ಅರ್ಮಾನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಪ್ರಿಯತಮೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡಿ ಪಿಂಡ ಬಿಟ್ಟ ಪತಿರಾಯ

@ManojSh28986262 ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ಮಹಿಳೆ ಆರೋಪಿಯ ತಲೆಗೂದಲು ಹಿಡಿದು ಆತನ ಮುಖಕ್ಕೆ ಬಾರಿಸಿದ್ದು, ಸ್ಥಳದಲ್ಲಿದ್ದ ಇತರ ಜನರು ಕೂಡ ಆತನಿಗೆ ಒದೆಯುತ್ತಿರುವುದು ಮತ್ತು ಥಳಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಯುವಕ ತನ್ನನ್ನು ಹೊಡೆಯುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದು,”ಮೇಡಂ, ನೀವು ನನ್ನನ್ನು ಎಷ್ಟು ಹೊಡೆಯುತ್ತೀರಿ, ದಯವಿಟ್ಟು ಬಿಟ್ಟುಬಿಡಿ” ಎಂದು ಹೇಳಿದ್ದಾನೆ. ಮಹಿಳೆ ಕರುಣೆ ತೋರದೆ ಆರೋಪಿಯನ್ನು ಹಿಂಬಾಲಿಸಿ ಮನಬಂದಂತೆ ಥಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ