Viral Video: ಝೊಮ್ಯಾಟೋ ಡೆಲಿವರಿ ಏಜೆಂಟ್​ನನ್ನು ಥಳಿಸಿದ ಮಹಿಳೆ ವಿರುದ್ಧ ನೆಟ್ಟಿಗರ ಆಕ್ರೋಶ

Zomato : ಈ ಆರ್ಡರ್ ನಿಮ್ಮದಲ್ಲ ಎಂದು ಹೇಳಿದರೂ ಈ ಮಹಿಳೆ ಆತನನನ್ನು ಚಪ್ಪಲಿಯಿಂದ ಹೊಡೆಯಲು ಶುರು ಮಾಡಿದ್ದಾರೆ.

Viral Video: ಝೊಮ್ಯಾಟೋ ಡೆಲಿವರಿ ಏಜೆಂಟ್​ನನ್ನು ಥಳಿಸಿದ ಮಹಿಳೆ ವಿರುದ್ಧ ನೆಟ್ಟಿಗರ ಆಕ್ರೋಶ
ಡೆಲಿವರಿ ಏಜೆಂಟ್​ನಿಗೆ ಚಪ್ಪಲಿಯೇಟು ಕೊಡುತ್ತಿರುವ ಮಹಿಳೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 24, 2022 | 12:26 PM

Zomato Delivery Agent : ಮಹಿಳೆಯೊಬ್ಬಳು ಝೊಮ್ಯಾಟೋ ಡೆಲಿವರಿ ಸಿಬ್ಬಂದಿಯನ್ನು ಸಾರ್ವಜನಿಕವಾಗಿ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆದ ಈ ವಿಡಿಯೋಗೆ ಝೊಮ್ಯಾಟೋ, ‘ಈ ಪ್ರಕರಣವನ್ನು ಪರಿಶೀಲಿಸುತ್ತಿದ್ದೇವೆ. ಡೆಲಿವರಿ ಸಿಬ್ಬಂದಿಯನ್ನು ಸಂಪರ್ಕಿಸಲಾಗುವುದು’ ಎಂದು ಟ್ವಿಟರ್​ನಲ್ಲಿ ತಿಳಿಸಿದೆ. ಆದದ್ದು ಇಷ್ಟೇ. ಝೊಮ್ಯಾಟೋ ಆರ್ಡರ್ ಮನೆಗೆ ತಲುಪಿಸಲು ಹೋದಾಗ ಡೆಲಿವರಿ ಏಜೆಂಟ್​ನನ್ನು ಮಹಿಳೆಯೊಬ್ಬಳು ಸಾರ್ವಜನಿಕವಾಗಿ ಚಪ್ಪಲಿಯೇಟಿನಿಂದ ಥಳಿಸಿದ್ದಾರೆ.

ಡಿಜೆ ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈ ಘಟನೆ ನಡೆಯುತ್ತಿದ್ದಾಗ ಅಲ್ಲಿಯೇ ಇದ್ದ ಸಾರ್ವಜನಿಕರು ಈ ವಿಡಿಯೋ ಚಿತ್ರೀಕರಿಸಿದ್ದಾರೆ. ಏಜೆಂಟ್​ನಿಂದ ಆರ್ಡರ್​ ಪಡೆದುಕೊಂಡು ನಂತರ ಅವನಿಗೆ ಚಪ್ಪಲಿಯಿಂದ ಹೀಗೆ ಒಂದೇ ಸಮ ಮಹಿಳೆ ಹೊಡೆಯಲು ಆರಂಭಿಸಿದಳು. ಗಾಬರಿ ಮತ್ತು ಅವಮಾನಕ್ಕೀಡಾದ ಏಜೆಂಟ್ ತನ್ನ ಕೆಲಸ ಕಳೆದುಕೊಳ್ಳುವ ಭಯಕ್ಕೆ ಬಿದ್ದಿದ್ಧಾನೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಆಗಸ್ಟ್ 16 ರಂದು ಈ ವಿಡಿಯೋ ಪೋಸ್ಟ್ ಆಗಿದೆ. ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂಬ ಉಲ್ಲೇಖವಿಲ್ಲ. ಇದು ನಿಮ್ಮ ಆರ್ಡರ್​ ಅಲ್ಲ. ನಿಮ್ಮದೇ ಎಂದು ಖಚಿತಪಡಿಸಿಕೊಳ್ಳಲು ಪಾವತಿ ತೋರಿಸಿ ಎಂದು ಮಹಿಳೆಗೆ ಡೆಲಿವರಿ ಎಂಜೆಂಟ್ ಕೇಳಿದಾಗ ಆಕೆ ಹೊಡೆಯಲು ಪ್ರಾರಂಭಿಸಿದ್ದಾಳೆ.

ಈ ಮಧ್ಯೆ ಈ ವಿಡಿಯೋಗೆ ಮಿಶ್ರಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ‘ಬೇರೆಯವರ ಆರ್ಡರ್​ ಅನ್ನು ನೀವು ಸ್ವೀಕರಿಸಿ ಮತ್ತೆ ಹೀಗೆ ಹಲ್ಲೆ ಮಾಡಿರುವ ನಡೆವಳಿಕೆ ಸೂಕ್ತವಲ್ಲ. ಅದೂ ಒಬ್ಬ ಮಹಿಳೆಯಾಗಿ ನಾಚಿಕೆಗೀಡು ಮಾಡುವ ಪ್ರಸಂಗ. ಈ ಮಹಿಳೆಯ ವಿರುದ್ಧ ದೂರ ದಾಖಲಿಸಬೇಕು. ಡೆಲಿವರಿ ಏಜೆಂಟ್​ನನ್ನು ಬೆಂಬಲಿಸಬೇಕು’ ಎಂದು ನೆಟ್ಟಿಗರೊಬ್ಬರು ಅಭಿಪ್ರಾಯಿಸಿದ್ದಾರೆ.

ಮತ್ತೊಬ್ಬರು, ‘ಈ ಡೆಲಿವರಿ ಏಜೆಂಟ್​ಗಳು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಹೀಗೆ ಅವರನ್ನು ನಡೆಸಿಕೊಳ್ಳುವುದು ಸರಿಯಲ್ಲ. ಗ್ರಾಹಕಸೇವೆಯನ್ನು ಇವರು ಬಹಳ ಉತ್ತಮ ರೀತಿಯಲ್ಲಿ ಒದಗಿಸುತ್ತಾರೆ. ಹಿಂಸಾತ್ಮಕ ನಡೆವಳಿಕೆ ಸಲ್ಲದು. ಹೀಗೆ ಹಲ್ಲೆ ಮಾಡಿದ ಮಹಿಳೆಯನ್ನು ಬ್ಲ್ಯಾಕ್​ ಲಿಸ್ಟ್​ಗೆ ಸೇರಿಸಬೇಕು’ ಎಂದು ಸಲಹೆ ನೀಡಿದ್ಧಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:51 am, Wed, 24 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ