AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟ್ಟ ಕಂದಮ್ಮನನ್ನು ಹುಲ್ಲಿನ ಹೊರೆಯಲ್ಲಿ ಕಟ್ಟಿ ತಲೆ ಮೇಲೆ ಹೊತ್ತು ಸಾಗಿದ ಹೆತ್ತಮ್ಮ

ಹಳ್ಳಿಯಲ್ಲಿ ಬೆಳೆಯುವ ಮಕ್ಕಳಿಗೆ ಕೇಳಿದ್ದೆಲ್ಲವು ಸಿಗುವುದಿಲ್ಲ. ಆದರೆ ನಗರ ಪ್ರದೇಶದ ಮಕ್ಕಳಿಗೆ ಏನು ಕೊರತೆಯಾಗದಂತೆ ಹೆತ್ತವರು ನೋಡಿಕೊಳ್ಳುತ್ತಾರೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಕೂಡ ಹಾಗೆ ಅನಿಸುತ್ತದೆ. ಹೌದು, ಮೇವಿನ ಹೊರೆಯ ಜತೆಗೆ ಮಗನನ್ನು ಕಟ್ಟಿ ತನ್ನ ತಲೆಯ ಮೇಲಿಟ್ಟು ಸಾಗುತ್ತಿರುವ ತಾಯಿಯ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರ ಕಣ್ಣು ಒದ್ದೆಯಾಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪುಟ್ಟ ಕಂದಮ್ಮನನ್ನು ಹುಲ್ಲಿನ ಹೊರೆಯಲ್ಲಿ ಕಟ್ಟಿ ತಲೆ ಮೇಲೆ ಹೊತ್ತು ಸಾಗಿದ ಹೆತ್ತಮ್ಮ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Feb 23, 2026 | 2:20 PM

Share

ತಾಯಿ (mother) ಪ್ರೀತಿಯೇ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಮಕ್ಕಳ ಲಾಲನೆ ಪಾಲನೆ ಮಾಡುತ್ತಾ ಮಕ್ಕಳಿಗೆ ಸದಾ ನೆರಳಾಗಿರುವ ಜೀವವೇ ಈ ಅಮ್ಮ. ಆದರೆ ನಗರದಲ್ಲಿ ತಾಯಂದಿರು ತಮ್ಮ ಮಕ್ಕಳನ್ನು ಬೆಳೆಯುವ ರೀತಿಗೂ ಹಳ್ಳಿಯಲ್ಲಿ ಮಕ್ಕಳು ಬೆಳೆಯುವ ರೀತಿಗೆ ಸಾಕಷ್ಟು ವ್ಯತ್ಯಾಸವಿದೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಇಲ್ಲೊಬ್ಬಳು ತಾಯಿ ಕೆಲಸದ ನಡುವೆಯೂ ತನ್ನ ಮಗನ ಬಗ್ಗೆ ಕಾಳಜಿ ವಹಿಸಿದ್ದಾಳೆ. ಹುಲ್ಲಿನ ಹೊರೆಯೊಂದರಲ್ಲಿ ಪುಟ್ಟ ಮಗುವನ್ನು ಸೇರಿಸಿ ಕಟ್ಟಿ ತಾಯಿಯೊಬ್ಬಳು ಹೊತ್ತುಕೊಂಡು ಸಾಗಿದ್ದಾಳೆ . ಈ ವಿಡಿಯೋ ನೋಡಿದ ನೆಟ್ಟಿಗರು ತಾಯಿ ಪ್ರೀತಿ ಎಂದೆಂದಿಗೂ ಶಾಶ್ವತ ಎಂದು ಕಾಮೆಂಟ್ ಮಾಡಿದ್ದಾರೆ.

ರೋಶಿ (Rosy) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಹಳ್ಳಿಯ ಮಹಿಳೆಯೊಬ್ಬಳು ಮೇವಿನ ಹೊರೆಯಲ್ಲಿ ತನ್ನ ಪುಟ್ಟ ಕಂದಮ್ಮನನ್ನು ಸೇರಿ ಕಟ್ಟಿ ಹೊತ್ತುಕೊಂಡು ಹೋಗುತ್ತಿರುವುದನ್ನು ಕಾಣಬಹುದು.

ವೈರಲ್‌ ಪೋಸ್ಟ್‌ ಇಲ್ಲಿದೆ ನೋಡಿ

ಇದನ್ನೂ ಓದಿ: ಕರುವನ್ನು ಕಂಡೊಡನೆ ಓಡೋಡಿ ಬಂದು ಮುದ್ದಿಸಿದ ಹಸು

ಈ ವಿಡಿಯೋ ಎರಡು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನನ್ನ ಬಾಲ್ಯವನ್ನು ನೆನಪಿಸಿದ ವಿಡಿಯೋ, ನನ್ನ ತಾಯಿ ಹೀಗೆಯೇ ಕಟ್ಟಿ ಹೊತ್ತುಕೊಂಡು ಹೋಗುತ್ತಿದ್ದರು ಎಂದು ಹೇಳಿದ್ದಾರೆ. ಮತ್ತೊಬ್ಬರು, ತಾಯಿ ಪ್ರೀತಿ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಹಳ್ಳಿಯಲ್ಲಿ ಬೆಳೆದ ಮಕ್ಕಳಿಗೂ ಮಾತ್ರ ಇಂತಹ ಅನುಭವವಾಗಲು ಸಾಧ್ಯ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ