Viral Video: ಪ್ರಯಾಣಿಕರೊಬ್ಬರಿಗೆ ಅತಿಸಾರ; ಇದು ಜೈವಿಕ ಅಪಾಯ ಎಂದು ವಿಮಾನವನ್ನೇ ಯೂಟರ್ನ್ ಮಾಡಿದ ಪೈಲಟ್

Pilot: ವಿಮಾನವು ಅಟ್ಲಂಟಾದಿಂದ ಹೊರಟ ಎರಡು ಗಂಟೆಗಳ ನಂತರ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಅತಿಸಾರದಿಂದ ಬಳಲುತ್ತಿರುವ ವಿಷಯ ತಿಳಿದುಬಂದಿದೆ. ಪ್ರಯಾಣಿಕರ ಇಚ್ಛೆಯಂತೆ ಅಟ್ಲಾಂಟಾಗೆ ವಿಮಾನವನ್ನು ತಿರುಗಿಸುವ ತುರ್ತು ಉಂಟಾಗಿದೆ. ಈ ವಿಷಯವನ್ನು ಪೈಲಟ್​ ಏರ್​ ಟ್ರಾಫಿಕ್​ ಕಂಟ್ರೋಲರ್​ಗೆ ತಿಳಿಸಿದ ಆಡಿಯೋ ಇದೀಗ ವೈರಲ್ ಆಗಿದೆ.

Viral Video: ಪ್ರಯಾಣಿಕರೊಬ್ಬರಿಗೆ ಅತಿಸಾರ; ಇದು ಜೈವಿಕ ಅಪಾಯ ಎಂದು ವಿಮಾನವನ್ನೇ ಯೂಟರ್ನ್ ಮಾಡಿದ ಪೈಲಟ್
ಡೆಲ್ಟಾ ಏರ್​ಲೈನ್​ನ ವಿಮಾನ (ಪ್ರಾತಿನಿಧಿಕ ಚಿತ್ರ)
Follow us
|

Updated on:Sep 05, 2023 | 5:18 PM

America: ಅನೇಕ ಕಾರಣಗಳಿಂದ ವಿಮಾನಗಳು ರದ್ದಾಗುತ್ತವೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ರದ್ದುಮಾಡುತ್ತಾರೆ. ಆದರೆ ಇದೀಗ ಪೈಲಟ್​ ಪ್ರಯಾಣಿಕರಿಗಾಗಿ ವಿಮಾನವನ್ನೇ ಯೂಟರ್ನ್​ ಮಾಡಿದ ಅಪರೂಪದ ಘಟನೆ ನಡೆದಿದೆ. ವಿಮಾನದಲ್ಲಿರುವ ಪ್ರಯಾಣಿಕರೊಬ್ಬರು ಅತಿಸಾರದಿಂದ (Diarrhea) ಬಳಲುತ್ತಿದ್ದಾರೆ ಎನ್ನುವ ವಿಷಯ ತಿಳಿಯುತ್ತಿದ್ದಂತೆ ಡೆಲ್ಟಾ ಏರ್​​ಲೈನ್ಸ್​ನ ಪೈಲಟ್​ ವಿಮಾನವನ್ನು ಯೂ ಟರ್ನ್ ತೆಗೆದುಕೊಂಡಿದ್ದಾರೆ. ಇಷ್ಟೇ ಅಲ್ಲ, ಇದೊಂದು ಜೈವಿಕ ಅಪಾಯ ಎಂದೂ ಹೇಳಿದ್ದಾರೆ. ಜಾರ್ಜಿಯಾದ ಅಟ್ಲಾಂಟಾದಿಂದ ಸ್ಪೇನ್‌ನ ಬಾರ್ಸಿಲೋನಾ ತಲುಪಲು ಎಂಟು ಗಂಟೆಗಳ ಕಾಲ ಪ್ರಯಾಣಿಸಬೇಕಾಗುತ್ತದೆ. ಆದರೆ ಮಾರ್ಗಮಧ್ಯೆ ಸಮಸ್ಯೆ ಉದ್ಭವಿಸಿದ್ದರಿಂದ ಪೈಲಟ್ ಈ ನಿರ್ಧಾರ ತೆಗೆದುಕೊಂಡು ಒಟ್ಟಾರೆ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸಿದ್ದಾರೆ.

ಇದನ್ನೂ ಓದಿ : Viral Video: ಸಪ್ತಸಾಗರದಾಚೆ ಎಲ್ಲೋ; ಸುನಿಧಿ ಗಣೇಶ್ ಹಾಡಿರುವ ಟೈಟಲ್ ಟ್ರ್ಯಾಕ್​ ವೈರಲ್ 

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ಈ ವಿಮಾನವು ಟೇಕ್​ಆಫ್ ಆದ ಎರಡು ಗಂಟೆಗಳ ನಂತರ ಯೂಟೂರ್ನ್ ತೆಗೆದುಕೊಂಡಿದೆ. ಈ ನಿರ್ಧಾರದ ಹಿಂದಿನ ಕಾರಣವನ್ನು ಪೈಲಟ್​ ಫ್ಲೈಟ್ ಡೆಕ್‌ನಿಂದ ಏರ್ ಟ್ರಾಫಿಕ್ ಕಂಟ್ರೋಲ್​ಗೆ ತಲುಪಿಸುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪೈಲಟ್​ನ ಆಡಿಯೋ ಇಲ್ಲಿ ಕೇಳಿ

ವಿಮಾನವು ಅಟ್ಲಾಂಟಾಗೆ ಹಿಂದಿರುಗಿದ ನಂತರ ಎಲ್ಲ ಪ್ರಯಾಣಿಕರನ್ನು ಮತ್ತೊಂದು ವಿಮಾನದ ಮೂಲಕ ಬಾರ್ಸಿಲೋನಾಗೆ ತಲುಪಿಸಲಾಯಿತು. ಅವರೆಲ್ಲರೂ ಸುಮಾರು ಎಂಟು ಗಂಟೆ ತಡವಾಗಿ ಬಾರ್ಸಿಲೋನಾ ತಲುಪಿದರು. ತುರ್ತು ವೈದ್ಯಕೀಯ ಕಾರಣಗಳಿಗಾಗಿ ಈ ತೀರ್ಮಾನ ಕೈಗೊಳ್ಳಬೇಕಾಯಿತೆಂದು ಏರ್​​ಲೈನ್ಸ್​ನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಂತರ ವಿಮಾನವನ್ನು ಶುಚಿಗೊಳಿಸಲಾಗಿದೆ. ಆದರೆ, ಅತಿಸಾರದಿಂದ ಬಳಲುತ್ತಿದ್ದ ಪ್ರಯಾಣಿಕರ ವಿವರವನ್ನು ಅವರು ಗೌಪ್ಯವಾಗಿರಿಸಿದ್ದಾರೆ. ಉಳಿದ ಪ್ರಯಾಣಿಕರಿಗೆ ಉಂಟಾದ ತೊಂದರೆಗಾಗಿ ಕ್ಷಮೆ ಕೇಳಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:17 pm, Tue, 5 September 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ