AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವೇದಿಕೆಯಲ್ಲಿ ಮೈಮರೆತು ನೃತ್ಯ ಮಾಡುತ್ತಿದ್ದ ಪ್ರೇಮಿಗಳು​, ಹುಡುಗಿ ಅಣ್ಣನಿಂದ ಯುವಕನಿಗೆ ಕಪಾಳಮೋಕ್ಷ

ಮೈಮರೆತು ಪ್ರೇಮಿಗಳಿಬ್ಬರು ನೃತ್ಯ ಮಾಡುತ್ತಿದ್ದ ವೇಳೆ ಎಲ್ಲಿಂದಲೋ ಪ್ರತ್ಯಕ್ಷನಾದ ಹುಡುಗಿಯ ಅಣ್ಣ ಯುವಕನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರೂ ಹಳದಿ ಬಟ್ಟೆಯನ್ನು ತೊಟ್ಟು ವೇದಿಕೆಯ ಮೇಲೆ ಹಾಡೊಂದಕ್ಕೆ ನೃತ್ಯ ಮಾಡುತ್ತಿದ್ದರು. ಇದೇ ವೇಳೆ ವೇದಿಕೆಯಲ್ಲಿ ಪ್ರತ್ಯಕ್ಷವಾದ ಹುಡುಗಿಯ ಅಣ್ಣ, ಆಕೆಯನ್ನು ಹೊರಗೆ ಹೋಗುವಂತೆ ಹೇಳಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದು ಆತ ಕೂಡಲೇ ನೆಲಕ್ಕೆ ಕುಸಿದು ಬಿದ್ದಿರುವ ದೃಶ್ಯವನ್ನು ಕಾಣಬಹುದು.

Viral: ವೇದಿಕೆಯಲ್ಲಿ ಮೈಮರೆತು ನೃತ್ಯ ಮಾಡುತ್ತಿದ್ದ ಪ್ರೇಮಿಗಳು​, ಹುಡುಗಿ ಅಣ್ಣನಿಂದ ಯುವಕನಿಗೆ ಕಪಾಳಮೋಕ್ಷ
ಪ್ರೇಮಿಗಳ ನೃತ್ಯ
ನಯನಾ ರಾಜೀವ್
|

Updated on: Feb 20, 2025 | 9:36 AM

Share

ವೇದಿಕೆಯಲ್ಲಿ ಮೈಮರೆತು ಪ್ರೇಮಿಗಳಿಬ್ಬರು ನೃತ್ಯ ಮಾಡುತ್ತಿದ್ದ ವೇಳೆ ಎಲ್ಲಿಂದಲೋ ಪ್ರತ್ಯಕ್ಷನಾದ ಹುಡುಗಿಯ ಅಣ್ಣ ಯುವಕನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರೂ ಹಳದಿ ಬಟ್ಟೆಯನ್ನು ತೊಟ್ಟು ವೇದಿಕೆಯ ಮೇಲೆ ಹಾಡೊಂದಕ್ಕೆ ನೃತ್ಯ ಮಾಡುತ್ತಿದ್ದರು.

ಇದೇ ವೇಳೆ ವೇದಿಕೆಯಲ್ಲಿ ಪ್ರತ್ಯಕ್ಷವಾದ ಹುಡುಗಿಯ ಅಣ್ಣ, ಆಕೆಯನ್ನು ಹೊರಗೆ ಹೋಗುವಂತೆ ಹೇಳಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದು ಆತ ಕೂಡಲೇ ನೆಲಕ್ಕೆ ಕುಸಿದು ಬಿದ್ದಿರುವ ದೃಶ್ಯವನ್ನು ಕಾಣಬಹುದು.

ಅಪ್​ಲೋಡ್ ಮಾಡಿದ ಕೇವಲ ಮೂರು ದಿನಗಳಲ್ಲಿ 35,000ಕ್ಕೂ ಹೆಚ್ಚು ಲೈಕ್​ಗಳನ್ನು ಪಡೆದಿದೆ. ಈ ಕ್ಲಿಪ್ ಯಾವುದೋ ಮದುವೆಯ ಕಾರ್ಯಕ್ರಮದ್ದಿದ್ದಂತಿದೆ. ಏಕೆಂದರೆ ಎಲ್ಲರೂ ಹಳದಿ ಬಟ್ಟೆಗಳನ್ನೇ ಧರಿಸಿದ್ದರು.

ವೇದಿಕೆಯಲ್ಲಿ ಈ ಇಬ್ಬರು ಮಾತ್ರವಲ್ಲದೆ ಸಾಕಷ್ಟು ಮಂದಿ ಅಲ್ಲಿದ್ದರು. ಈ ವೈರಲ್ ವಿಡಿಯೋ ವೀಕ್ಷಕರಿಂದ ಭಾರಿ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ. ಇದನ್ನು ಕೇವಲ ವಿಡಿಯೋಗಾಗಿ ಮಾಡಿದ್ದೋ ಅಥವಾ ನಿಜವಾಗಿಯೂ ನಡೆದ ಘಟನೆಯೋ ಎಂಬುದು ಸ್ಪಷ್ಟವಾಗಿಲ್ಲ. ಹಾಗೂ ಘಟನೆ ಎಲ್ಲಿ ನಡೆದಿದ್ದು ಎಂಬುದು ತಿಳಿದುಬಂದಿಲ್ಲ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ