Viral: ಮುರ್ಷಿದಾಬಾದ್​; ಮಟಮಟ ಮಧ್ಯಾಹ್ನ ನಡುರಸ್ತೆಯಲ್ಲಿ 18 ಲಕ್ಷ ನಗದು ದೋಚಿದ ಕಳ್ಳರು

Crime: ಮುರ್ಷಿದಾಬಾದ್​ನ ವಿರಾಜ ಜಂಕ್ಷನ್​ ಬಳಿ ವ್ಯಕ್ತಿಯೊಬ್ಬರು ಬಸ್ಸಿನಿಂದ ಇಳಿಯುತ್ತಿದ್ದ ಸಂದರ್ಭದಲ್ಲಿ ಬೈಕ್​ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪಿಸ್ತೂಲ್​ ತೋರಿಸಿ ಹೆದರಿಸಿದ್ದಾರೆ. ಆ ನಂತರ ಪಾಯಿಂಟ್ ಬ್ಲಾಂಕ್ ರೇಂಜ್​ನಲ್ಲಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಆ ವ್ಯಕ್ತಿಯಿಂದ 18 ಲಕ್ಷ ರೂಪಾಯಿ ನಗದು ತುಂಬಿದ್ದ ಬ್ಯಾಗ್ ಅನ್ನು ಕದ್ದು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. 

Viral: ಮುರ್ಷಿದಾಬಾದ್​; ಮಟಮಟ ಮಧ್ಯಾಹ್ನ ನಡುರಸ್ತೆಯಲ್ಲಿ 18 ಲಕ್ಷ ನಗದು ದೋಚಿದ ಕಳ್ಳರು
ಸೌಜನ್ಯ : ಬಾಂಗ್ಲಾ ಟಿವಿ9
Follow us
ಶ್ರೀದೇವಿ ಕಳಸದ
|

Updated on:Oct 31, 2023 | 3:21 PM

Murshidabad : ಮುರ್ಷಿದಾಬಾದ್‌ನ ಬಹರಂಪುರ ಪೊಲೀಸ್ ಠಾಣೆ (Police Station) ವ್ಯಾಪ್ತಿಯ ಘುರ್ನಿಯಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಸಾಲ ಮರುಪಾವತಿಸಲು ಹಾಗೂ ಉಳಿತಾಯ ಖಾತೆಗೆ ಹಣ ಜಮಾ ಮಾಡಲು ಬ್ಯಾಂಕ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಇದು ನಡೆದಿದೆ. ಸರ್ಕಲ್​ನಲ್ಲಿ ವ್ಯಕ್ತಿಯೊಬ್ಬರು ಬಸ್‌ನಿಂದ ಇಳಿದ ತಕ್ಷಣ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ನಿಂತಿದ್ದಾರೆ. ಪಿಸ್ತೂಲ್ ಎತ್ತಿ ವ್ಯಕ್ತಿಯನ್ನು ಹೆದರಿಸಿದ್ದಾರೆ. ಪಾಯಿಂಟ್ ಬ್ಲಾಂಕ್ ರೇಂಜ್ ನಲ್ಲಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಆ ವ್ಯಕ್ತಿಯಿಂದ ರೂ. 18 ಲಕ್ಷ ನಗದು ತುಂಬಿದ್ದ ಬ್ಯಾಗ್ ಅನ್ನು ಅಪಹರಿಸಿಕೊಂಡು ಬೈಕ್​ನಲ್ಲಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: Viral Video: ಬ್ಯಾಂಗ್​ ಬ್ಯಾಂಗ್​​​; ಪ್ರೀ ವೆಡ್ಡಿಂಗ್ ಸಾಂಗ್​​ಗೆ ಪ್ರತಿಕ್ರಿಯಿಸಿದ ಹೃತಿಕ್ ರೋಷನ್

ಪೂಜನ್ ಸಹಾ ಎಂಬಾತ ಇಸ್ಲಾಂಪುರದ ಗೋವಾಸ್ ಪ್ರದೇಶದಿಂದ ಬ್ಯಾಂಕ್‌ಗೆ ಹಣ ಜಮೆ ಮಾಡಲು ಬರುತ್ತಿದ್ದ. ಬಹರಂಪುರದ ಬಳಿ ಬಸ್​ ಇಳಿದು ಬ್ಯಾಂಕ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಂತೆ ಎದುರಿಗೆ ಮೂವರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದರು. ಜನಸಂಚಾರ ಕಡಿಮೆ ಇದ್ದ ಆ ರಸ್ತೆಯಲ್ಲಿ ವ್ಯಕ್ತಿಯನ್ನು ಪೂಜನ್​ನನ್ನು ಸಮೀಪಿಸಿ ಪಾಯಿಂಟ್ ಬ್ಲಾಂಕ್ ರೇಂಜ್ ನಲ್ಲಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಭಾರೀ ಮೊತ್ತದ ಬ್ಯಾಗ್​ ಅನ್ನು ದೋಚಿಕೊಂಡು ಹೋದರು. ಗುಂಡಿನ  ಸದ್ದು ಕೇಳಿ ಸುತ್ತಮುತ್ತಲಿನವರು ಸ್ಥಳಕ್ಕೆ ಓಡಿ ಬಂದರು. ಆದರೆ ಆ ವೇಳೆಗಾಗಲೇ ದರೋಡೆಕೋರರ ಗುಂಪು ಬೈಕ್‌ನಲ್ಲಿ 18 ಲಕ್ಷ ಹಣದೊಂದಿಗೆ ಪರಾರಿಯಾಗಿತ್ತು.

ಇದನ್ನೂ ಓದಿ : Viral: ಪನೀರ್​ ಪ್ರಿಯರಿಗಾಗಿ ಇಲ್ಲಿದೆ ವಿಶೇಷ ಫೋಟೊ; ಇದನ್ನು ನೋಡಿದ ಮೇಲೆ ನೀವು ಏನು ಹೇಳುತ್ತೀರಿ?

ಏತನ್ಮಧ್ಯೆ, ಸೋಮವಾರ ಮಧ್ಯಾಹ್ನ ನಡೆದ ಈ ದರೋಡೆಯ ಘಟನೆ ಈಗಾಗಲೇ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಲನ ಮೂಡಿಸಿದೆ. ಬಹರಂಪುರ ಪೊಲೀಸರು ಈ ದರೋಡೆ ಪ್ರಕರಣದ ಕುರಿತು ತನಿಖೆ ನಡೆಸಲು ಆರಂಭಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅವರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಪ್ರಯತ್ನ ನಡೆಸಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 3:19 pm, Tue, 31 October 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ