AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹಲ್ಲುಜ್ಜುತ್ತಿರುವಾಗ ಗಂಟಲಲ್ಲಿ ಸಿಕ್ಕಿಕೊಂಡ ಬ್ರಷ್​​; ಮುಂದೇನಾಯಿತು ಗೊತ್ತಾ?

ಗಂಟಲಲ್ಲಿ ಏನೋ ಆಹಾರ ಸಿಕ್ಕಿಕೊಂಡಿದೆ ಎಂದು ಯುವತಿಯೊಬ್ಬಳು ಹಲ್ಲುಜ್ಜುತ್ತಿರುವಾಗ ಬ್ರಷ್​​ನ ಸಹಾಯದಿಂದ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ ಹಲ್ಲುಜ್ಜುವ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಮುಂದೇನಾಯಿತು ಗೊತ್ತಾ?

Viral: ಹಲ್ಲುಜ್ಜುತ್ತಿರುವಾಗ ಗಂಟಲಲ್ಲಿ ಸಿಕ್ಕಿಕೊಂಡ ಬ್ರಷ್​​; ಮುಂದೇನಾಯಿತು ಗೊತ್ತಾ?
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Dec 06, 2023 | 11:18 AM

Share

ಸ್ಪೇನ್‌ನ ಗಾಲ್ಡಕಾವೊದ 21 ವರ್ಷದ ಯುವತಿಯೊಬ್ಬಳ ಗಂಟಲಿನಲ್ಲಿ ರಾತ್ರಿ ತಿಂದ ಆಹಾರ ಸಿಕ್ಕಿಕೊಂಡಿದೆ. ಗಂಟಲು ನೋವಿನಿಂದಾಗಿ ಬೆಳಿಗ್ಗೆ ಹಲ್ಲುಜ್ಜುವ ಸಮಯದಲ್ಲಿ ಬ್ರಷ್​​​ ಸಹಾಯದಿಂದ ಸಿಕ್ಕಿಕೊಂಡಿರುವ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ ಹಲ್ಲುಜ್ಜುವ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಈ ಸಮಯದಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು,ತಕ್ಷಣ ಆಕೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು ಮೂರ್ನಾಲ್ಕು ಗಂಟೆಗಳ ವೈದ್ಯರ ಹರಸಾಹಸದ ನಂತರ ಬ್ರಷ್​​ ಹೊರಕ್ಕೆ ತೆಗೆಯಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಗಂಟಲಲ್ಲಿ ಸಿಲುಕಿಕೊಂಡ 8 ಇಂಚಿನ ಬ್ರಷ್:

ವರದಿಗಳ ಪ್ರಕಾರ ನವೆಂಬರ್ 29 ರಂದು ಈ ಘಟನೆ ನಡೆದಿದೆ. ಯುವತಿ ರಾತ್ರಿ ಊಟದ ವೇಳೆ ಮಾಂಸವನ್ನು ತಿಂದಿದ್ದಳು. ಆದರೆ ಮಾಂಸದ ಮೂಳೆ ಗಂಟಲಿಗೆ ಸಿಲುಕಿಕೊಂಡಿದ್ದು,ಉಸಿರಾಡಲು ಕಷ್ಟ ಪಡುವಂತಾಗಿದೆ. ಆದರೆ ಬೆಳಿಗ್ಗೆ ಹಲ್ಲುಜ್ಜುವ ಸಮಯದಲ್ಲಿ ಬ್ರಷ್​​​​ ಬಳಸಿ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ 8 ಇಂಚಿನ ಟೂತ್ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಆಕೆಯ ಒದ್ದಾಟ ಕಂಡು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ವೈದ್ಯರು ಕೂಡ ಅವರ ಸ್ಥಿತಿಯನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ.

ಇದನ್ನೂ ಓದಿ: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಚಿಕನ್ ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ

ಅಂತಿಮವಾಗಿ, ಮೂರು ಗಂಟೆಗಳ ಪರೀಕ್ಷೆ ಮತ್ತು 40 ನಿಮಿಷಗಳ ಪ್ರಯತ್ನದ ನಂತರ, ವೈದ್ಯರು ಆಕೆಯ ಗಂಟಲಲ್ಲಿ ಸಿಲುಕಿಕೊಂಡಿದ್ದ ಬ್ರಷ್ ಅನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಗಂಟಲಿನ ಶಸ್ತ್ರಚಿಕಿತ್ಸೆಗೆ ಇಲ್ಲದೆ ಶಸ್ತ್ರಚಿಕಿತ್ಸಾ ಉಪಕರಣದ ಸಹಾಯದಿಂದ ವೈದ್ಯರು ಬ್ರಷ್ ಅನ್ನು ಹೊರತೆಗೆದರು. ಕೆಲ ಹೊತ್ತಿನ ಬಳಿಕ ಮಹಿಳೆಗೆ ಪ್ರಜ್ಞೆ ಬಂದಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್