AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆಯ ದಿನ ನೆಂಟರಿಷ್ಟರನ್ನು ಬರೀ ನೀರು ಕುಡಿಸಿ ಉಪಚರಿಸಿದ ವಧು

ಹೌದು ಮದುವೆ ಏನಾದರೇನೇ ಹಾಗೇ ಸಾಕಷ್ಟು ಖರ್ಚು ವೆಚ್ಚಗಳಿರುತ್ತದೆ. ಆದರೆ ಇಲ್ಲೊಂದು ಮದುಮೆಯಲ್ಲಿ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಆಲ್ಕೋಹಾಲ್​​​, ಯಾವುದೇ ಪಾನೀಯಗಳ ಬದಲಾಗಿ ಬಂದ ಅತಿಥಿಗಳಿಗೆ ನೀರು ನೀಡಿ ಮದುವೆ ಕಾರ್ಯಕ್ರಮದಲ್ಲಿ ಉಪಚರಿಸಿದ್ದಾರೆ.

Viral News: ಮದುವೆಯ ದಿನ ನೆಂಟರಿಷ್ಟರನ್ನು ಬರೀ ನೀರು ಕುಡಿಸಿ ಉಪಚರಿಸಿದ ವಧು
ಅಕ್ಷತಾ ವರ್ಕಾಡಿ
|

Updated on:Mar 23, 2023 | 6:58 PM

Share

ಮದುವೆ ಪ್ರತಿಯೊಬ್ಬರ ಜೀವನದಲ್ಲಿಯೂ ಒಂದು ವಿಶೇಷ ದಿನ. ಈ ವಿಶೇಷ ದಿನದಂದು ವಧು ವರರ ಬಟ್ಟೆಯಿಂದ ಹಿಡಿದು ಊಟ ಉಪಚಾರಗಳೆಲ್ಲಾವೂ ಯಾವುದೇ ಕುಂದು ಕೊರತೆಗಳಿಲ್ಲದೇ ಅದ್ಧೂರಿಯಿಂದ ನಡೆಯಬೇಕು ಎಂಬುದು ಪ್ರತಿಯೊಬ್ಬರ ಕನಸು. ಜೊತೆಗೆ ಇದಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡುವುದುಂಟು. ಆದರೆ ಇಲ್ಲೊಂದು ಖರ್ಚು ಕಡಿಮೆ ಮಾಡಿ ಮದುವೆ ನಡೆಸುವ ಉದ್ದೇಶದಿಂದ ಒಂದು ಒಳ್ಳೆಯ ಪ್ಲಾನ್​ ಮಾಡಿದ್ದಾರೆ.

ಹೌದು ಮದುವೆ ಏನಾದರೇನೇ ಹಾಗೇ ಸಾಕಷ್ಟು ಖರ್ಚು ವೆಚ್ಚಗಳಿರುತ್ತದೆ. ಆದರೆ ಇಲ್ಲೊಂದು ಮದುಮೆಯಲ್ಲಿ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಆಲ್ಕೋಹಾಲ್​​​, ಯಾವುದೇ ಪಾನೀಯಗಳ ಬದಲಾಗಿ ಬಂದ ಅತಿಥಿಗಳಿಗೆ ನೀರು ನೀಡಿ ಮದುವೆ ಕಾರ್ಯಕ್ರಮದಲ್ಲಿ ಉಪಚರಿಸಿದ್ದಾರೆ. ಮದುವೆಗೆ ಬಂದ ಅತಿಥಿಗಳಿಗೆ ಬರೀ ನೀರು ನೀಡಿರುವುದು, ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಸಾಮಾನ್ಯವಾಗಿ ಮದುವೆ ಎಂದಾಕ್ಷಣ ಪಾರ್ಟಿಗಳಿರುತ್ತದೆ. ಈ ಸಂದರ್ಭದಲ್ಲಿ ದುಬಾರಿ ಬೆಲೆಯ ಸಾಕಷ್ಟು ಆಲ್ಕೋಹಾಲ್​​, ಪಾನೀಯಗಳನ್ನು ನೀಡಲಾಗುತ್ತದೆ. ಆದರೆ ಈ ಮದುವೆ ಕಾರ್ಯಕ್ರಮದಲ್ಲಿ ದುಬಾರಿ ಪಾನೀಯಗಳ ಬದಲಾಗಿ ಕಡಿಮೆ ವೆಚ್ಚ ಭರಿಸುವ ನೀರಿನ ಬಾಟಲಿಯನ್ನು ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಂಬದಿಯಿಂದ ಬಂದು ಪಾದಚಾರಿಗಳನ್ನು ಭಯಗೊಳಿಸುವ ಬೈಕ್ ಸವಾರರು! ಇಬ್ಬರು ಅರೆಸ್ಟ್

ನಮ್ಮ ಮದುವೆಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಿದ್ದೇವೆ. ಆದರೆ ಮದುವೆಯಲ್ಲೂ ಹಣವನ್ನು ಉಳಿಸಲು ಹಲವಾರು ಮಾರ್ಗಗಳಿವೆ. ಆದ್ದರಿಂದ ದುಬಾರಿ ಪಾನೀಯಗಳಿಗೆ ಹಣವನ್ನು ಖರ್ಚು ಮಾಡುವ ಬದಲಿಗೆ ನಾವು ನೀರನ್ನು ನೀಡಿ ಹಣ ಉಳಿಸಿದ್ದೇವೆ ಎಂದು ವಧು ಹೇಳಿರುವುದು ಬಾರೀ ಚರ್ಚೆಯಾಗುತ್ತಿದೆ. ನಾನು ಮತ್ತು ನನ್ನ ಸಂಗಾತಿ ಆಲ್ಕೋಹಾಲ್ ಕುಡಿಯುವುದಿಲ್ಲ. ಆದ್ದರಿಂದ ನಮ್ಮ ಮದುವೆಯಲ್ಲಿ ಯಾವುದೇ ರೀತಿಯ ಮದ್ಯ ಇರುವುದಿಲ್ಲ ಎಂದು ಮದುವೆಮನೆಯಲ್ಲಿ ವಧು ಬಹಿರಂಗವಾಗಿ ಹೇಳಿಕೊಂಡಿದ್ದು, ಟೈಮ್ಸ್​​ ನೌ ನ್ಯೂಸ್​​ನಲ್ಲಿ ವರದಿಯಾಗಿದೆ. ಆದರೆ ಈ ವಿವಾಹ ನಡೆದಿದ್ದು ಎಲ್ಲಿ ಎಂಬುದರ ಬಗ್ಗೆ ಸೂಕ್ತ ಮಾಹಿತಿ ಇಲ್ಲ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:58 pm, Thu, 23 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ