Viral News: ಕೃಷ್ಣನ ವಿಗ್ರಹದ ಮುರಿದ ಕೈಗೆ ಬ್ಯಾಂಡೇಜ್ ಹಾಕಿ; ಅರ್ಚಕನ ಬೇಡಿಕೆಗೆ ವೈದ್ಯರು ಶಾಕ್!

ನನ್ನ ಕೃಷ್ಣನಿಗೆ ನೀವು ಬ್ಯಾಂಡೇಜ್ ಹಾಕುವವರೆಗೂ ನಾವು ಇಲ್ಲಿಂದ ಹೋಗುವುದಿಲ್ಲ. ಇವತ್ತು ಬೆಳಗ್ಗೆ ಕೃಷ್ಣನ ವಿಗ್ರಹಕ್ಕೆ ಸ್ನಾನ ಮಾಡಿಸುವಾಗ ಆಕಸ್ಮಿಕವಾಗಿ ಕೈ ಮುರಿದು ಹೋಗಿದೆ. ಈ ಕೈಯನ್ನು ಜೋಡಿಸಿಕೊಡಿ ಎಂದು ವೈದ್ಯರ ಬಳಿ ಅರ್ಚಕ ಹಠ ಹಿಡಿದಿದ್ದಾರೆ.

Viral News: ಕೃಷ್ಣನ ವಿಗ್ರಹದ ಮುರಿದ ಕೈಗೆ ಬ್ಯಾಂಡೇಜ್ ಹಾಕಿ; ಅರ್ಚಕನ ಬೇಡಿಕೆಗೆ ವೈದ್ಯರು ಶಾಕ್!
ದೇವರ ವಿಗ್ರಹಕ್ಕೆ ಬ್ಯಾಂಡೇಜ್ ಹಾಕುತ್ತಿರುವ ವೈದ್ಯರು
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 19, 2021 | 7:26 PM

ಆಗ್ರಾ: ಮನುಷ್ಯರನ್ನು ದೇವರೆಂದು ಪೂಜಿಸುವವರು ಕೆಲವರಾದರೆ ದೇವರನ್ನು ಕೂಡ ಮನುಷ್ಯರಂತೆ ಪರಿಗಣಿಸುವವರು ಇನ್ನು ಕೆಲವರು. ಉತ್ತರ ಪ್ರದೇಶದ ಆಗ್ರಾದ ಜಿಲ್ಲಾ ಆಸ್ಪತ್ರೆಗೆ ಇಂದು ಅರ್ಚಕರೊಬ್ಬರು ಕೃಷ್ಣನ ವಿಗ್ರಹವನ್ನು ಹೊತ್ತು ಬಂದಿದ್ದರು. ನನ್ನ ಕೃಷ್ಣನ ಕೈ ಮುರಿದು ಹೋಗಿದೆ. ಇದಕ್ಕೆ ಬ್ಯಾಂಡೇಜ್ ಹಾಕಿ ಎಂದು ವೈದ್ಯರ ಬಳಿ ಮನವಿ ಮಾಡಿದರು. ಅರ್ಚಕರ ಮಾತನ್ನು ಕೇಳಿ ವೈದ್ಯರು ಶಾಕ್ ಆದರು. ಆದರೆ, ಕೃಷ್ಣನ ವಿಗ್ರಹಕ್ಕೆ ಬ್ಯಾಂಡೇಜ್ ಹಾಕದೆ ಆತ ಹೋಗುವ ಲಕ್ಷಣಗಳು ಕಾಣದ ಹಿನ್ನೆಲೆಯಲ್ಲಿ ಆ ವಿಗ್ರಹದ ತೋಳಿಗೆ ಬ್ಯಾಂಡೇಜ್ ಹಾಕಿ ಕಳುಹಿಸಿದ್ದಾರೆ!

ಇಂಥವರೂ ಇರುತ್ತಾರಾ? ಎಂದು ನಿಮಗೆ ಆಶ್ಚರ್ಯವಾಗಬಹುದು. ಆದರೆ, ಇದು ಇಂದು ನಡೆದಿರುವ ಸತ್ಯವಾದ ಘಟನೆ. ದೇವರ ವಿಗ್ರಹವನ್ನು ಹೊತ್ತು ಬಂದ ಅರ್ಚಕ ವೈದ್ಯರ ಮುಂದೆ ಪಟ್ಟು ಹಿಡಿದು ಕುಳಿತಿದ್ದರು. ನನ್ನ ಕೃಷ್ಣನಿಗೆ ನೀವು ಬ್ಯಾಂಡೇಜ್ ಹಾಕುವವರೆಗೂ ನಾವು ಇಲ್ಲಿಂದ ಹೋಗುವುದಿಲ್ಲ. ಇವತ್ತು ಬೆಳಗ್ಗೆ ಕೃಷ್ಣನ ವಿಗ್ರಹಕ್ಕೆ ಸ್ನಾನ ಮಾಡಿಸುವಾಗ ಆಕಸ್ಮಿಕವಾಗಿ ಕೈ ಮುರಿದು ಹೋಗಿದೆ. ಈ ಕೈಯನ್ನು ಜೋಡಿಸಿಕೊಡಿ ಎಂದು ವೈದ್ಯರ ಬಳಿ ಅರ್ಚಕ ಹಠ ಹಿಡಿದಿದ್ದಾರೆ.

ಇದರಿಂದ ಏನು ಮಾಡುವುದು ಎಂದು ತೋಚದ ಆಸ್ಪತ್ರೆ ಸಿಬ್ಬಂದಿ ಕೊನೆಗೆ ‘ಶ್ರೀ ಕೃಷ್ಣ’ ಎಂಬ ಹೆಸರಿನಲ್ಲಿ ನೋಂದಣಿ ಮಾಡಿಕೊಂಡು, ಕೃಷ್ಣನ ವಿಗ್ರಹದ ತೋಳಿಗೆ ಬ್ಯಾಂಡೇಜ್ ಮಾಡಿದ್ದಾರೆ. ಬಾಲ ಕೃಷ್ಣನ ವಿಗ್ರಹಕ್ಕೆ ವೈದ್ಯರು ಬ್ಯಾಂಡೇಜ್ ಹಾಕುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಈ ವಿಗ್ರಹವನ್ನು ಹೊತ್ತು ಬಂದ ಲೇಖ್ ಸಿಂಗ್ ಅವರು ಕಳೆದ 30 ವರ್ಷಗಳಿಂದ ಅರ್ಜುನ್ ನಗರದ ಖೇರಿಯಾ ಮೋಡ್‌ನಲ್ಲಿರುವ ಪತ್ವಾರಿ ದೇವಸ್ಥಾನದಲ್ಲಿ ಅರ್ಚಕರಾಗಿದ್ದಾರೆ. ಆಸ್ಪತ್ರೆಯಲ್ಲಿ ಮೊದಲು ನನ್ನ ವಿನಂತಿಯನ್ನು ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಇದರಿಂದ ಬೇಸರವಾಗಿ ನಾನು ದೇವರ ವಿಗ್ರಹವನ್ನು ಹಿಡಿದು ಅಳಲು ಪ್ರಾರಂಭಿಸಿದೆ. ಆಮೇಲೆ ಅವರು ಕೃಷ್ಣನಿಗೆ ಬ್ಯಾಂಡೇಜ್ ಹಾಕಿದರು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಚಾರಕ್ಕಾಗಿ ಜನ ಹೀಗೆ ಮಾಡ್ತಾರೆ; ಶಿಶುಪಾಲನಿಗೆ ಕೃಷ್ಣನೇ ಶಾಸ್ತಿ ಮಾಡಿದ್ದ -ಹಂಸಲೇಖ ಟೀಕೆಗೆ ವಿಶ್ವಪ್ರಸನ್ನ ತೀರ್ಥಶ್ರೀ ಉತ್ತರ

Shocking Video: ಪಟಾಕಿಯಿದ್ದ ಸ್ಕೂಟರ್ ಸ್ಫೋಟಗೊಂಡು ಅಪ್ಪ-ಮಗನ ದೇಹ ಛಿದ್ರ; ಶಾಕಿಂಗ್ ವಿಡಿಯೋ ವೈರಲ್

Published On - 7:24 pm, Fri, 19 November 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್