AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹೆಂಡತಿ ಸ್ನಾನ ಮಾಡಲ್ಲ ಅಂತ ವಿಚ್ಛೇದನ ನೀಡಿದ ಗಂಡ!

Shocking News | ಮುಸ್ಲಿಂ ವ್ಯಕ್ತಿಯೋರ್ವ ತನ್ನ ಹೆಂಡತಿ ದಿನವೂ ಸ್ನಾನ ಮಾಡುವುದಿಲ್ಲ. ಸ್ವಚ್ಛತೆಯ ಬಗ್ಗೆ ಜ್ಞಾನವಿಲ್ಲದ ಆಕೆಯೊಂದಿಗೆ ಸಂಸಾರ ನಡೆಸಲು ಸಾಧ್ಯವಿಲ್ಲ ಎಂದು ತ್ರಿವಳಿ ತಲಾಖ್ ನೀಡಿದ್ದಾರೆ.

Viral News: ಹೆಂಡತಿ ಸ್ನಾನ ಮಾಡಲ್ಲ ಅಂತ ವಿಚ್ಛೇದನ ನೀಡಿದ ಗಂಡ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 24, 2021 | 3:54 PM

Share

ಅಲಿಘಡ: ಮದುವೆಯೆಂದ ಮೇಲೆ ಗಂಡ-ಹೆಂಡತಿ ನಡುವೆ ಹೊಂದಾಣಿಕೆ ಇರಬೇಕಾದುದು ಅನಿವಾರ್ಯ. ಕೆಲವೊಮ್ಮೆ ಕೌಟುಂಬಿಕ, ಮಾನಸಿಕ, ದೈಹಿಕ ಹಿಂಸೆಗಳು ಹೆಚ್ಚಾದಾಗ ತಮಗೆ ಮುಕ್ತಿ ಕೊಡಿಸಬೇಕೆಂದು ಕಾನೂನಿನ ಮೊರೆ ಹೋಗುವುದು ಸಾಮಾನ್ಯ. ಆದರೆ, ಇತ್ತೀಚೆಗೆ ಗೊರಕೆ ಹೊಡೆಯುವುದು, ನಿದ್ರೆಯಲ್ಲಿ ನಡೆಯುತ್ತಾರೆಂದು, ತನ್ನ ಬಗ್ಗೆ ಪ್ರೀತಿ ತೋರಿಸುವುದಿಲ್ಲ ಎಂದು ಹೀಗೆ ನಾನಾ ಕಾರಣಗಳಿಂದ ವಿಚ್ಛೇದನ ಪಡೆದಿರುವ ಘಟನೆಗಳು ನಡೆಯುತ್ತಿವೆ. ಅದೇ ರೀತಿ ಉತ್ತರ ಪ್ರದೇಶದಲ್ಲಿ ತನ್ನ ಹೆಂಡತಿ ದಿನವೂ ಸ್ನಾನ ಮಾಡುವುದಿಲ್ಲ ಎಂಬ ಕಾರಣಕ್ಕೆ ಆಕೆಗೆ ಡೈವೋರ್ಸ್ ನೀಡಿದ್ದಾರೆ.

ಉತ್ತರ ಪ್ರದೇಶದ ಅಲಿಘಡದಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ವ್ಯಕ್ತಿಯೋರ್ವ ತನ್ನ ಹೆಂಡತಿ ದಿನವೂ ಸ್ನಾನ ಮಾಡುವುದಿಲ್ಲ. ಸ್ವಚ್ಛತೆಯ ಬಗ್ಗೆ ಜ್ಞಾನವಿಲ್ಲದ ಆಕೆಯೊಂದಿಗೆ ಸಂಸಾರ ನಡೆಸಲು ಸಾಧ್ಯವಿಲ್ಲ ಎಂದು ತ್ರಿವಳಿ ತಲಾಖ್ ನೀಡಿದ್ದಾರೆ. ತ್ರಿವಳಿ ತಲಾಖ್​ಗೆ ನಿಷೇಧವಿದ್ದರೂ ನನಗೆ ತಲಾಖ್ ನೀಡಿದ್ದಾರೆ ಎಂದು ಆನ ಹೆಂಡತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರಿಂದ ಈ ಘಟನೆ ಬೆಳಕಿಗೆ ಬಂದಿದೆ. ಆ ಗಂಡ-ಹೆಂಡತಿ ಇಬ್ಬರಿಗೂ ಕೌನ್ಸಿಲಿಂಗ್ ನಡೆಸಲಾಗುತ್ತಿದೆ.

ದಿನವೂ ಸ್ನಾನ ಮಾಡುತ್ತಿಲ್ಲ ಎಂಬ ನೆಪವೊಡ್ಡಿ ಗಂಡ ತಲಾಖ್ ನೀಡಿರುವುದಾಗಿ ಮಹಿಳೆ ದೂರು ನೀಡಿದ್ದಾಳೆ. ಆ ದಂಪತಿಗೆ ನಾವೇ ಕೌನ್ಸಿಲಿಂಗ್ ಕೊಡಿಸುತ್ತಿದ್ದೇವೆ. ಅವರ ಪೋಷಕರ ಜೊತೆಯೂ ಈ ಬಗ್ಗೆ ಮಾತನಾಡಿದ್ದೇವೆ. ಆ ಮಹಿಳೆಗೆ ತನ್ನ ಗಂಡನ ಜೊತೆ ಬದುಕಬೇಕೆಂಬ ಆಸೆಯಿದೆ. ಹೀಗಾಗಿ, ಅವರ ಮದುವೆಯನ್ನು ಉಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

2 ವರ್ಷಗಳ ಹಿಂದೆ ಕ್ವಾರ್ಸಿ ಗ್ರಾಮದ ಆ ಮಹಿಳೆ ಚಂದೌಸ್ ಗ್ರಾಮದ ಪುರುಷನೊಂದಿಗೆ ಮದುವೆಯಾಗಿದ್ದಳು. ಸಣ್ಣ ಪುಟ್ಟ ವಿಷಯಕ್ಕೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಅವರಿಬ್ಬರಿಗೂ ಮಗು ಕೂಡ ಇದ್ದು, ವಿಚ್ಛೇದನವಾದರೆ ಆ ಮಗುವಿನ ಭವಿಷ್ಯ ಹಾಳಾಗಲಿದೆ ಎಂದು ಅವರಿಗೆ ಅರ್ಥ ಮಾಡಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Viral News: ಮನೆ ಖರೀದಿಸಲು ಯೋಚಿಸುತ್ತಿದ್ದೀರಾ?; ಈ ಊರಿನಲ್ಲಿ 87 ರೂ.ಗೆ ಮನೆ ಮಾರಾಟಕ್ಕಿದೆ!

Crime News: ಅಕ್ರಮ ಸಂಬಂಧದ ಶಂಕೆ; ಹೆಂಡತಿಯ ಗುಪ್ತಾಂಗಕ್ಕೆ ಹೊಲಿಗೆ ಹಾಕಿ ಮುಚ್ಚಿದ ಪತಿರಾಯ!

(Viral News Aligarh Man Seeks Divorce From Wife Because She Does not Bathe Daily Shocking News)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ