Viral: ಜೇಬಿನಲ್ಲಿ ಲಕ್ಷ ಲಕ್ಷ ದುಡ್ಡಿಟ್ಟುಕೊಂಡಿದ್ದರೂ, ಹಸಿವಿನಿಂದ ಸಾವನ್ನಪಿದ್ದ ಭಿಕ್ಷುಕ

ಈತ ಯಾರೆಂದು ಜಗತ್ತಿಗೆ ತಿಳಿದಿಲ್ಲ, ಆದರೆ ಈತನ ಸಾವು ಪೊಲೀಸರಿಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. 50 ವರ್ಷದ ಭಿಕ್ಷುಕನ ಬಳಿ ಲಕ್ಷಗಟ್ಟಲೆ ಹಣ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇಷ್ಟು ಹಣವಿದ್ದರೂ ಹಸಿವಿನಿಂದ ಸಾಯಲು ಕಾರಣವೇನು? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

Viral: ಜೇಬಿನಲ್ಲಿ ಲಕ್ಷ ಲಕ್ಷ ದುಡ್ಡಿಟ್ಟುಕೊಂಡಿದ್ದರೂ, ಹಸಿವಿನಿಂದ ಸಾವನ್ನಪಿದ್ದ ಭಿಕ್ಷುಕ
Viral NewsImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Dec 06, 2023 | 5:14 PM

ಸೂರತ್, ಡಿಸೆಂಬರ್ 5: ಕಳೆದ ಎರಡು ದಿನಗಳಿಂದ ಗಾಂಧಿ ಗ್ರಂಥಾಲಯದ ಬಳಿ ಭಿಕ್ಷುಕನೊಬ್ಬ ರಸ್ತೆಬದಿ ಬಿದ್ದಿರುವುದನ್ನು ಅಂಗಡಿ ಮಾಲೀಕರು ಗಮನಿಸಿ, 108ಕ್ಕೆ ಕರೆ ಮಾಡಿ ವೃದ್ಧೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಭಿಕ್ಷುಕ ಸಾವನ್ನಪ್ಪಿದ್ದಾನೆ. ಕಳೆದ ಎರಡು ದಿನಗಳಿಂದ ಏನನ್ನೂ ತಿನ್ನದೇ ಹಸಿವಿನಿಂದ ಸಾವನ್ನಪ್ಪಿರುವುದಾಗಿ ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಈತನ ಸಾವು ಪೊಲೀಸರಿಗೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತನಿಖೆಯ ವೇಳೆ ಮೃತ ಭಿಕ್ಷುಕನ ಜೇಬಿನಲ್ಲಿ ಲಕ್ಷಗಟ್ಟಲೆ ಹಣ ಪತ್ತೆಯಾಗಿದ್ದು, ಇಷ್ಟು ಹಣವಿದ್ದರೂ ಹಸಿವಿನಿಂದ ಸಾಯಲು ಕಾರಣವೇನು? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ತುರ್ತು ವೈದ್ಯಕೀಯ ವಿಭಾಗದ ಡಾ.ಭಾವೇಶ್ ಪಟೇಲ್ ಅವರು ಹೇಳುವಂತೆ ‘ ಮೃತ ಭಿಕ್ಷುಕ ಗುಜರಾತಿ ಮಾತನಾಡುತ್ತಿದ್ದರು, ಕಳೆದ ಎರಡು ದಿನಗಳಿಂದ ಯಾವುದೇ ಚಲನವಲನ ಇಲ್ಲದ ಕಾರಣ ಪಕ್ಕದ ಅಂಗಡಿಯವರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಭಿಕ್ಷುಕ ಮೃತಪಟ್ಟಿದ್ದಾನೆ. ಪ್ರಾಥಮಿಕ ಪರೀಕ್ಷೆಯ ನಂತರ ಅವರನ್ನು ಚಿಕಿತ್ಸೆಗಾಗಿ ಸಿವಿಲ್ ಆಸ್ಪತ್ರೆಗೆ ಸಿವಿಲ್ ಆಸ್ಪತ್ರೆಗೆ ಕರೆದೊಯ್ದಾಗ ಭಿಕ್ಷುಕನ ಬಳಿ ರೂ.1.14 ಲಕ್ಷ ನಗದು ಪತ್ತೆಯಾಗಿದೆ. 10- 20ರೂಪಾಯಿಯಿಂದ ಹಿಡಿದು ಸಾಕಷ್ಟು ನೋಟುಗಳನ್ನು ಸಣ್ಣ ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿ ಪ್ಯಾಂಟ್ ಜೇಬಿನಲ್ಲಿ ಇರಿಸಲಾಗಿತ್ತು. ಈ ಹಣವನ್ನು ವಲ್ಸಾದ್ ಪಟ್ಟಣದ ಪೊಲೀಸರಿಗೆ ಹಸ್ತಾಂತರಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಲ್ಲುಜ್ಜುತ್ತಿರುವಾಗ ಗಂಟಲಲ್ಲಿ ಸಿಕ್ಕಿಕೊಂಡ ಬ್ರಷ್​​; ಮುಂದೇನಾಯಿತು ಗೊತ್ತಾ?

ವರದಿಗಳ ಪ್ರಕಾರ,ವೃದ್ಧನನ್ನು ಆಸ್ಪತ್ರೆಗೆ ಕರೆತಂದಾಗ ಚಹಾ ಕೊಡಿ ಎಂದು ಕೇಳಿದರು. ಆತ ಹಸಿದ್ದಿದ್ದ ಮತ್ತು ಅವನ ರಕ್ತದಲ್ಲಿನ ಸಕ್ಕರೆ ಮಟ್ಟವು ಕಡಿಮೆಯಾಗಿತ್ತು.ಆದರೆ ಒಂದು ಗಂಟೆಯ ನಂತರ ಭಿಕ್ಷುಕ ಸಾವನ್ನಪ್ಪಿದ್ದಾನೆ. ಕಳೆದ ಎರಡು ದಿನಗಳಿಂದ ಏನನ್ನೂ ತಿನ್ನದೇ ಹಸಿವಿನಿಂದ ಸಾವನ್ನಪ್ಪಿರುವುದಾಗಿ ಎಂದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಭಿಕ್ಷುಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಆತನ ಫೋಟೋ ತೆಗೆದು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ  ಇಲ್ಲಿ ಕ್ಲಿಕ್​ ಮಾಡಿ: 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ