AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿವಿಆರ್ ನಲ್ಲಿ ಸ್ಯಾನಿಟರಿ ಪ್ಯಾಡ್​ ಸಿಗಲಿಲ್ಲ; ಟ್ವಿಟರ್​ನಲ್ಲಿ ಚರ್ಚೆ ಹುಟ್ಟುಹಾಕಿದ ಮಹಿಳೆ

PVR : ‘ಪಿವಿಆರ್​ನ ಶೌಚಾಲಯ ಸಿಬ್ಬಂದಿಗೆ ಈ ವಿಷಯವಾಗಿ ಸಹಾಯ ಕೇಳಿದರೆ, ಅವರು ಸಹಕರಿಸಲಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಆರೋಗ್ಯಸೇವೆಗಳನ್ನು ಗಂಭೀರವಾಗಿ ಪರಿಗಣಿಸಬೇಕಲ್ಲವೆ, ನಾವು ಇನ್ನೂ ಅದೆಷ್ಟು ಹಿಂದುಳಿದಿದ್ದೇವೆ?’

ಪಿವಿಆರ್ ನಲ್ಲಿ ಸ್ಯಾನಿಟರಿ ಪ್ಯಾಡ್​ ಸಿಗಲಿಲ್ಲ; ಟ್ವಿಟರ್​ನಲ್ಲಿ ಚರ್ಚೆ ಹುಟ್ಟುಹಾಕಿದ ಮಹಿಳೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 31, 2023 | 6:32 PM

Share

Viral News : ಪಿವಿಆರ್ ಎಂದಾಕ್ಷಣ ಸಿನೆಮಾದ ಟಿಕೆಟ್​ ದರದ ಜೊತೆ ಅಲ್ಲಿಯ ದುಬಾರಿ ಪಾಪ್​ಕಾರ್ನ್​, ಸಮೋಸಾ, ಚಹಾ, ಕಾಫಿ, ಚಿಪ್ಸ್, ಕೋಲಾ ಥಟ್ಟನೆ ನೆನಪಾಗುತ್ತದೆ ಅಲ್ಲವೆ? ಆದರೆ ಜನರ ತುರ್ತು ಅವಶ್ಯಕತೆಗೆ ಬೇಕಾದ ಸಾಮಾನುಗಳು ಅಲ್ಲಿ ದೊರೆಯುವುದಿಲ್ಲವೆಂಬ ಕೂಗು ಇದ್ದರೂ ಅದನ್ನು ಬಹಿರಂಗಪಡಿಸಿದ್ದು ಕಡಿಮೆ. ಇದೀಗ ವೈರಲ್ ಆಗುತ್ತಿರುವ ಈ ಟ್ವೀಟ್​ ಗಮನಿಸಿ. ‘ಪಿವಿಆರ್​ನಲ್ಲಿ ಸಿನೆಮಾ ನೋಡಲು ಹೋದಾಗ ನನ್ನ ಗೆಳತಿಗೆ ಅಕಸ್ಮಾತ್ ಆಗಿ ಮುಟ್ಟಾಯಿತು. ಆದರೆ ಪಿವಿಆರ್​ನಲ್ಲಿ ಸ್ಯಾನಿಟರಿ ಪ್ಯಾಡ್ ಸಿಗಲಿಲ್ಲ.’ ಎಂದು ಮಹಿಳೆಯೊಬ್ಬರು ಟ್ವೀಟ್​ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಆರೋಗ್ಯಸೇವೆಗಳಿಗೆ ಸಂಬಂಧಿಸಿದ ಸೌಲಭ್ಯ ಕುರಿತು ಚರ್ಚೆಯನ್ನು ಹುಟ್ಟುಹಾಕಿದ್ದಾರೆ.

ಪಿವಿಆರ್​ನ ಶೌಚಾಲಯ ಸಿಬ್ಬಂದಿಗೆ ಈ ವಿಷಯವಾಗಿ ಸಹಾಯ ಮಾಡಬಹುದೇ ಎಂದು ಕೇಳಿದೆವು. ಆದರೆ ಅವರು ಸಹಕರಿಸಲಿಲ್ಲ. ಆರೋಗ್ಯಸೇವೆಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಗಂಭೀರವಾಗಿ ಪರಿಗಣಿಸಬೇಕಲ್ಲವೆ ನಾವು ಇನ್ನೂ ಅದೆಷ್ಟು ಹಿಂದುಳಿದಿದ್ದೇವೆ? ಬದಲಾವಣೆ ಮತ್ತು ಅಭಿವೃದ್ಧಿ ಎನ್ನುವುದು ಸಾರ್ವಜನಿಕ ಆರೋಗ್ಯ ಸೇವೆಗಳಿಗೆ ಯಾಕೆ ಇನ್ನೂ ಮುಕ್ತವಾಗಿ ತೆರೆದುಕೊಂಡಿಲ್ಲ ಎಂದು ಆಕೆ ಕೇಳಿದ್ದಾರೆ. ಈ ಟ್ವೀಟ್​ ಅನ್ನು ಪಿವಿಆರ್​, ಆರೋಗ್ಯ ಸಚಿವಾಲಯ ಮತ್ತ ಆರೋಗ್ಯ ಸಚಿವ ಮನ್ಸುಖ್​ ಮಾಂಡವಿಯಾ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ : ‘ಎಮ್ಮಿಗೆ ತಾ ಭಾರತದಾಗ ಇದ್ದೀನಂತೂ ಗೊತ್ತಿಲ್ಲ, ಭಾರತಕ್ಕ ಸ್ವಾತಂತ್ರ್ಯ ಸಿಕ್ಕದಂತೂ ಗೊತ್ತಿಲ್ಲ’

ನೆಟ್ಟಿಗರನ್ನು ಈ ಪೋಸ್ಟ್​ ಬಹುವಾಗಿ ಗಮನ ಸೆಳೆದಿದೆ. ನೂರಾರು ಜನರು ಇದಕ್ಕೆ ಸಂಬಂಧಿಸಿ ತಮ್ಮ ಅನುಭವ, ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಸಾಕಷ್ಟು ವಿಮಾನ ನಿಲ್ದಾಣಗಳಲ್ಲಿಯೂ ಕೆಲ ಸ್ಥಳಗಳಲ್ಲಿ ಆರೋಗ್ಯ ಸೇವೆಗಳ ವ್ಯವಸ್ಥೆಯೇ ಇಲ್ಲ ಎಂದು ಒಬ್ಬರು ಹೇಳಿದ್ದಾರೆ. ಇನ್ನೊಬ್ಬರು, ಪಿವಿಆರ್​ನಲ್ಲಿ ಸೇಬು ಕತ್ತರಿಸಲು ಚಾಕೂ ಸಿಗಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

ನಮ್ಮ ದೇಶದಲ್ಲಿ ಹೆಣ್ಣುಮಕ್ಕಳ ಆರೋಗ್ಯ ಸಂಬಂಧಿ ವಿಷಯಗಳು ಯಾವಾಗಲೂ ಸವಾಲೇ. ಇನ್ನು ಅದೆಷ್ಟೋ ಪ್ರಸಿದ್ಧ ಸಾರ್ವಜನಿಕ ತಾಣಗಳು ವಿಶೇಷ ಚೇತನರಿಗೆ ಅನಾನುಕೂಲಕರವಾಗಿಯೇ ಇವೆ ಎಂದು ಇನ್ನೊಬ್ಬರು ಹೇಳಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 6:31 pm, Tue, 31 January 23

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ