AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana: ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ ಹಸು

ಹರಿಯಾಣದ ಶಕೀರಾ ಎಂಬ ಹಸು 24ಗಂಟೆಗಳಲ್ಲಿ 80 ಲೀಟರ್​​​ ಹಾಲು ನೀಡಿ ದಾಖಲೆಯನ್ನು ಸೃಷ್ಟಿಸಿದೆ. ಈ ಮೂಲಕ ಏಷ್ಯಾದಲ್ಲೇ ಅತಿ ಹೆಚ್ಚು ಹಾಲು ನೀಡಿದ ಹಸು ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ.

Haryana: ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ  ಹಸು
ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ ಹಸು
ಅಕ್ಷತಾ ವರ್ಕಾಡಿ
|

Updated on:Jan 16, 2024 | 5:03 PM

Share

ಹರಿಯಾಣದ ಹಸುವೊಂದು ಒಂದೇ ದಿನದಲ್ಲಿ 80 ಲೀಟರ್​​ಗೂ ಹೆಚ್ಚು ಹಾಲು ನೀಡುವ ಮೂಲಕ ಎಲ್ಲರ ಗಮನಸೆಳೆದಿದೆ.  ಗ್ರಾಮೀಣ ಸೊಗಡಿನ ಹಾಲು ಕರೆಯುವ ಸ್ಪರ್ಧೆಯನ್ನು ಹರಿಯಾಣದಲ್ಲಿ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ‘ಶಕೀರಾ’ ಎಂಬ ಹಸು 24ಗಂಟೆಗಳಲ್ಲಿ 80 ಲೀಟರ್​​​ ಹಾಲು ನೀಡಿ ದಾಖಲೆಯನ್ನು ಸೃಷ್ಟಿಸಿದೆ. ಈ ಮೂಲಕ ಏಷ್ಯಾದಲ್ಲೇ ಅತಿ ಹೆಚ್ಚು ಹಾಲು ನೀಡಿದ ಹಸು ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಸ್ಪರ್ಧೆಯ ಅಂಗವಾಗಿ ಹಸುವಿಗೆ 8 ಗಂಟೆಗಳ ವಿರಾಮ ನೀಡಿ ದಿನಕ್ಕೆ ಮೂರು ಬಾರಿ ಹಾಲು ಕರೆಯಲಾಗಿತ್ತು.

ಕರ್ನಾಲ್​​ ಜಿಲ್ಲೆಯ ಸುನಿಲ್​​ ಹಾಗೂ ಶಾಂಕಿ ಎಂಬವರು ಈ ಹಸುವನ್ನು ಸಾಕುತ್ತಿದ್ದು, ಸ್ಪರ್ಧೆಯಲ್ಲಿ ಬುಲೆಟ್​​​ ಬೈಕು ಗೆದ್ದಿದ್ದಾರೆ. ಹರಿಯಾಣದ ಡಿಎಫ್ಐ ಎಂಬ ಸಂಘದ ಆಶ್ರಯದಲ್ಲಿ ಈ ಸ್ಪರ್ಧೆ ನಡೆದಿದ್ದು, ಹರಿಯಾಣ, ಪಂಜಾಬ್ ಸೇರಿದಂತೆ ವಿವಿಧ ಊರುಗಳಿಂದ ಹಸುಗಳನ್ನು ತರಿಸಲಾಗುತ್ತು. ಡಿಎಫ್ಐ ಇದುವರೆಗೆ ಐದು ಬಾರಿ ಸ್ಪರ್ಧೆ ಆಯೋಜಿಸಿದ್ದು, ಪ್ರತೀ ಬಾರಿಯೂ ಈ ಶಕೀರಾ ಹಸುವೇ ಗೆದ್ದುಕೊಂಡಿದೆ.

ಇದನ್ನೂ ಓದಿ: ಮೊಸಳೆಗಳ ಗುಂಪಿನ ಮಧ್ಯೆ ಧೈರ್ಯದಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಜೀಬ್ರಾ; ವಿಡಿಯೋ ಇಲ್ಲಿದೆ ನೋಡಿ ​​​ ಸುನಿಲ್​​ ಹಾಗೂ ಶಾಂಕಿ ಕಳೆದ ಹನ್ನೆರಡು ವರ್ಷಗಳಿಂದ ಹೈನುಗಾರಿಕೆಯನ್ನು ನಡೆಸಿಕೊಂಡು ಬಂದಿದ್ದಾರೆ. ಶಕೀರಾಗೆ ಈಗ ಆರೂವರೆ ವರ್ಷವಾಗಿದ್ದು, ಈ ಹಸು 145ಸೆಂ.ಮೀ ಎತ್ತರ ಹಾಗೂ 165ಸೆಂ.ಮೀ ಉದ್ದವಿದೆ ಎಂದು ಸುನಿಲ್​​ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:02 pm, Tue, 16 January 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್