AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಡಿಎನ್‌ಎ ಪರೀಕ್ಷೆಯಿಂದ ಮುರಿದುಬಿತ್ತು 18 ವರ್ಷದ ದಾಂಪತ್ಯ ಜೀವನ

'ನಾನು ನನ್ನ ಹೆಂಡತಿಯನ್ನು ಸುಮಾರು ಇಪ್ಪತ್ತು ವರ್ಷಗಳಿಂದ ತಿಳಿದಿದ್ದೇನೆ. ನಮಗೆ ಇಬ್ಬರು ಅವಳಿ ಮಕ್ಕಳಿದ್ದಾರೆ ಮತ್ತು ಆಕೆಯನ್ನು ನಾನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತೇನೆ. ಆದರೆ ಇತ್ತೀಚಿಗಷ್ಟೇ ನಾನು ನನ್ನ ಮಕ್ಕಳ ಡಿಎನ್‌ಎ ಪರೀಕ್ಷೆಯನ್ನು ಮಾಡಿಸಿದಾಗ ಆಘಾತಕೊಳ್ಳಗಾದೆ' ಎಂದು ರೆಡ್ಡಿಟ್‌ನಲ್ಲಿ ಬರೆದುಕೊಂಡಿದ್ದಾನೆ.

Viral News: ಡಿಎನ್‌ಎ ಪರೀಕ್ಷೆಯಿಂದ ಮುರಿದುಬಿತ್ತು 18 ವರ್ಷದ ದಾಂಪತ್ಯ ಜೀವನ
DNA test breaks 18 year marriage
ಅಕ್ಷತಾ ವರ್ಕಾಡಿ
|

Updated on:Jun 05, 2024 | 1:03 PM

Share

ಯಾವುದೇ ಸಂಬಂಧದಲ್ಲಿ ಪರಸ್ಪರ ನಂಬಿಕೆ ತಳಹದಿಯಾಗಿರುತ್ತದೆ. ಒಂದು ಸಲ ನಂಬಿಕೆ ಒಡೆದುಹೋದರೆ ಆ ಸಂಬಂಧವು ಕೂಡ ಮುರಿದು ಬೀಳುತ್ತದೆ. ಇದೀಗ ಅಂತದ್ದೇ ಘಟನೆಯೊಂದು ನಡೆದಿದೆ. ಡಿಎನ್‌ಎ ಪರೀಕ್ಷೆಯ ನಂತರ 18 ವರ್ಷದ ಸಂಬಂಧ ಸಂಪೂರ್ಣವಾಗಿ ಮರಿದುಬಿದ್ದಿದೆ. ಪತ್ನಿಯಿಂದ ಮೋಸಕ್ಕೆ ಒಳಗಾದ ಪತಿ ಆಕೆಯೊಂದಿಗಿನ ಸಂಬಂಧವನ್ನು ಮುರಿದುಕೊಂಡಿದ್ದಾನೆ. ಈ ಕಥೆಯನ್ನು ಸ್ವತಃ ಆ ವ್ಯಕ್ತಿ ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾನೆ.

‘ನಾನು ನನ್ನ ಹೆಂಡತಿಯನ್ನು ಸುಮಾರು ಇಪ್ಪತ್ತು ವರ್ಷಗಳಿಂದ ತಿಳಿದಿದ್ದೇನೆ. ನಮಗೆ ಇಬ್ಬರು ಅವಳಿ ಮಕ್ಕಳಿದ್ದಾರೆ ಮತ್ತು ನಾನು ನನ್ನ ಹೆಂಡತಿಯನ್ನು ತುಂಬಾ ಪ್ರೀತಿಸುತ್ತೇನೆ. ಆದರೆ, ಈ ಪ್ರೀತಿಯನ್ನು ಪರೀಕ್ಷಿಸಲು ನಾನು ನನ್ನ ಮಕ್ಕಳ ಡಿಎನ್‌ಎ ಪರೀಕ್ಷೆಯನ್ನು ಮಾಡಿದಾಗ, ನನಗೆ ತುಂಬಾ ಆಶ್ಚರ್ಯವಾಯಿತು ಏಕೆಂದರೆ ವರದಿಯಲ್ಲಿ ಏನಾಯಿತು ಎಂದು ತಿಳಿದ ನಂತರ, ನಾನು ಆಘಾತಕೊಳ್ಳಗಾದೆ’ ಎಂದು ಬರೆದುಕೊಂಡಿದ್ದಾನೆ.

ವಾಸ್ತವವಾಗಿ, ವರದಿಯಲ್ಲಿ ಬಂದಿರುವ ಪ್ರಕಾರ, ನನ್ನ ಮಕ್ಕಳ ನಿಜವಾದ ತಂದೆ ನಾನಲ್ಲ, ಅವರ ತಂದೆ ಬೇರೆಯವರು. ಈ ಸತ್ಯ ತಿಳಿದ ನಂತರ ನನಗೆ ತುಂಬಾ ಆಘಾತವಾಯಿತು. ಎಷ್ಟೋ ದಿನಗಳಿಂದ ಹೆಂಡತಿಯಿಂದ ಅಂತರ ಕಾಯ್ದುಕೊಂಡಿದ್ದ ನಾನು ಒಂದು ದಿನ ಈ ವಿಚಾರವನ್ನು ಕೇಳಿದೆ, ಹೌದು ಈ ಮಕ್ಕಳು ನಿನ್ನದಲ್ಲ ಎಂದು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಪ್ರಪಾತಕ್ಕೆ ಉರುಳಿದ ಕಾರು; ಪ್ರಾಣಾಪಾಯದಿಂದ ಪಾರಾದ ಚಾಲಕ

ಇದನ್ನು ತಿಳಿದ ನಂತರ ನಾನು ನಮ್ಮ ಸಂಬಂಧವನ್ನು ಸಂಪೂರ್ಣವಾಗಿ ಕೊನೆಗೊಳಿಸಿದೆ ಎಂದು ಪತಿ ರೆಡ್ಡಿಟ್‌ನಲ್ಲಿ ಬರೆದಿದ್ದಾನೆ. ಈ ಸ್ಟೋರಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಒಬ್ಬ ಬಳಕೆದಾರ, “ಗಂಡ ಹೆಂಡತಿಯ ನಡುವಿನ ಸಂಬಂಧವು ನಂಬಿಕೆಯ ತಳಹದಿಯ ಮೇಲೆ ನಿಂತಿದೆ” ಎಂದು ಬರೆದಿದ್ದಾರೆ. ಮತ್ತೊಬ್ಬರು, “ಜೀವನದ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸದಿರುವುದೇ ಉತ್ತಮ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:11 pm, Wed, 5 June 24

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ