Viral News: ‘ಉಡುಗೊರೆ ಬೇಡ, ಮೋದಿಗೆ ಮತ ಹಾಕಿ’ ಆಮಂತ್ರಣ ಪತ್ರಿಕೆಯಲ್ಲಿ ವರನ ತಂದೆಯಿಂದ ವಿಶೇಷ ಮನವಿ

ಮದುವೆಯ ಪತ್ರಿಕೆಗಳಲ್ಲಿ ಆಶೀರ್ವಾದವೇ ಉಡುಗೊರೆ ಎಂದು ಬರೆದಿರುವುದನ್ನು ನಾವೆಲ್ಲರೂ ನೋಡಿರುತ್ತೇವೆ. ಆದರೆ ಇಲ್ಲೊಂದು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಗೆ ಮತ ಹಾಕಿ ಅದುವೇ ಉಡುಗೊರೆ ಎಂದು ಬರೆಯಲಾಗಿದೆ. ವರನ ತಂದೆಯೊಬ್ಬರು ಮಗನ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಈ ರೀತಿಯಾಗಿ ಮುದ್ರಿಸಿದ್ದು, ಈ ಅಪರೂಪದ ಮದುವೆ ಕಾರ್ಡ್​​ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

Viral News: 'ಉಡುಗೊರೆ ಬೇಡ, ಮೋದಿಗೆ ಮತ ಹಾಕಿ' ಆಮಂತ್ರಣ ಪತ್ರಿಕೆಯಲ್ಲಿ ವರನ ತಂದೆಯಿಂದ ವಿಶೇಷ ಮನವಿ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 26, 2024 | 2:18 PM

ಪ್ರತಿಯೊಬ್ಬರು ಕೂಡ ತಮ್ಮ ಮದುವೆಯ ವಿಶೇಷವಾಗಿರಬೇಕು ಎಂದುಕೊಳ್ಳುತ್ತಾರೆ. ತಮ್ಮ ಮದುವೆಯ ಬಗ್ಗೆ ನಾಲ್ಕು ಜನರು ಮಾತನಾಡಿಕೊಳ್ಳಲಿ ಎಂದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬರು ತನ್ನ ಮಗನ ಮದುವೆಯ ಕಾರ್ಡ್ ನಲ್ಲಿ ಮೋದಿ ಪರ ಪ್ರಚಾರ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಹೌದು, ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ವರನ ತಂದೆಯೊಬ್ಬರು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ‘ಉಡುಗೊರೆ ಬೇಡ, ಅದರ ಬದಲಿಗೆ ಮೋದಿಗೆ ಮತ ಹಾಕಿ’ ಎಂದು ಮನವಿ ಮಾಡಿಕೊಂಡಿದ್ದಾರೆ.

ಸದ್ಯಕ್ಕೆ ವೈರಲ್ ಆಗಿರುವ ಈ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯವರ ಭಾವಚಿತ್ರದೊಂದಿಗೆ ‘ನರೇಂದ್ರ ಮೋದಿಗೆ ಮತ ನೀಡುವುದು ನೀವು ನೀಡಬಹುದಾದ ಅತ್ಯುತ್ತಮ ಕೊಡುಗೆಯಾಗಿದೆ’ ಎಂದು ಬರೆಯುವ ಮೂಲಕ ಮೋದಿ ಮೇಲಿನ ವಿಶೇಷ ಅಭಿಮಾನವನ್ನು ತೋರಿಸಿದ್ದಾರೆ. ಹೌದು, ನಂದಿಕಾಂತಿ ನರಸಿಂಲು ಮತ್ತು ಅವರ ಪತ್ನಿ ನಂದಿಕಾಂತಿ ನಿರ್ಮಲಾ ಅವರು ತಮ್ಮ ಮಗನ ಆಮಂತ್ರಣ ಪತ್ರಿಕೆಯಲ್ಲಿ ಮನವಿ ಮಾಡಿಕೊಂಡವರು ಎನ್ನಲಾಗಿದೆ. ಮುಂದಿನ ತಿಂಗಳು ಏಪ್ರಿಲ್‌ 4ರಂದು ಸಂಗರೆಡ್ಡಿ ಜಿಲ್ಲೆಯ ಅರುಟ್ಲಾ ಎಂಬ ಗ್ರಾಮದಲ್ಲಿ ಮದುವೆ ನಡೆಯಲಿದೆ.

ಇದನ್ನೂ ಓದಿ: ಮದುವೆ ಹೊಸ್ತಿಲಲ್ಲಿ ತಮ್ಮ ಸಂಬಂಧಕ್ಕೆ ಅಂತ್ಯ ಹಾಡಿದ ಭಾರತ-ಪಾಕ್​​​​​ ಸಲಿಂಗ ಜೋಡಿ

ಈ ಬಗ್ಗೆ ವರನ ತಂದೆ ನಂದಿಕಾಂತಿ ನರಸಿಂಹುಲು ಅವರು ಪ್ರತಿಕ್ರಿಯಿಸಿದ್ದು, ‘ಮೊದಲು ಕುಟುಂಬಸ್ಥರ ಬಳಿ ಇಂತಹದ್ದೊಂದು ಪ್ರಸ್ತಾಪವನ್ನು ಇಟ್ಟೆನು. ನರೇಂದ್ರ ಮೋದಿ ಪರವಾಗಿ ಪ್ರಚಾರ ಮಾಡಲು, ಆಮಂತ್ರಣ ಪತ್ರಿಕೆ ಮೂಲಕವೂ ಜನರ ಮನವೊಲಿಸಲು ನನ್ನ ಕುಟುಂಬಸ್ಥರು ಕೂಡ ಒಪ್ಪಿಗೆಯನ್ನು ಸೂಚಿಸಿದರು. ಕೊನೆಹೆ ಮೋದಿ ಅವರಿಗೆ ಮತ ನೀಡಿ ಎಂಬುದಾಗಿ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆವು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ದೇಶದ ಪ್ರಧಾನಿ ಮೋದಿಯವರಿಗೆ ಗೌರವ ಸೂಚಿಸಲು ಈ ರೀತಿಯ ನಿರ್ಧಾರ ಕೈಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ