Viral: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

ವಿಮಾನ ಪ್ರಯಾಣದ ವೇಳೆ ಪಕ್ಕದಲ್ಲಿ ಕುಳಿತ್ತಿದ್ದ ಮಹಿಳೆಯ ತಲೆ ತುಂಬಾ ಹೇನು ಹರಿದಾಡುತ್ತಿರುವುದನ್ನು ಕಂಡು ಪ್ರಯಾಣಿಕನೊಬ್ಬ ಶಾಕ್​​ ಆಗಿದ್ದಾನೆ. ಆಕೆಯ ಪಕ್ಕದಲ್ಲಿ ಕೂರಲಾಗದೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸುವಂತೆ ಹೇಳಿದ್ದಾನೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Viral: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು
Follow us
ಅಕ್ಷತಾ ವರ್ಕಾಡಿ
|

Updated on: Aug 06, 2024 | 12:56 PM

ವಾಷಿಂಗ್ಟನ್‌: ಮಹಿಳೆಯೊಬ್ಬರ ತಲೆತುಂಬ ಹೇನು ಕಾಣಿಸಿದ್ದರಿಂದ ಅಮೆರಿಕದ ವಿಮಾನವೊಂದು ತುರ್ತು ಭೂ ಸ್ಪರ್ಶ ಮಾಡಿರುವಂಥ ವಿಚಿತ್ರ ಘಟನೆ ನಡೆದಿದೆ. ಮಹಿಳೆಯ ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಮಹಿಳೆಯ ತಲೆ ತುಂಬಾ ಹರಿದಾಡುತ್ತಿರುವ ಹೇನು ಕಂಡು ಶಾಕ್​​ಗೆ ಒಳಗಾಗಿದ್ದಾರೆ. ಬಳಿಕ ಆಕೆಯ ಪಕ್ಕದಲ್ಲಿ ಕೂರಲಾಗದೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸುವಂತೆ ಹೇಳಿದ್ದಾರೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ತಲೆಯಲ್ಲಿ ಒಂದೇ ಒಂದು ಹೇನು ಸೇರಿಕೊಂಡರೂ ವಿಪರೀತ ಕೆರೆತ ಉಂಟಾಗುತ್ತದೆ. ಇದು ದಿನನಿತ್ಯದ ಕೆಲಸಕ್ಕೆ ಸಾಕಷ್ಟು ಅಡ್ಡಿಯುಂಟು ಮಾಡುತ್ತದೆ. ಅಂತದ್ರಲ್ಲಿ ತಲೆ ತುಂಬಾ ಹೇನು ಕಂಡರೆ ಒಂದು ಕ್ಷಣ ತಲೆ ಕಡೆವುದಂತೂ ಖಂಡಿತಾ. ಇದೀಗ ಮಹಿಳೆಯ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಸ್ಥಿತಿಯೂ ಹಾಗೆಯೇ ಆಗಿದ್ದು, ಆತ ಕೂರಲಾಗದೇ ವಿಮಾನವನ್ನೇ ತುರ್ತು ಭೂಸ್ಪರ್ಶ ಮಾಡಿಸಿದ್ದಾನೆ. ಲಾಸ್ ಎಂಜಲ್ಸ್‌ನಿಂದ ನ್ಯೂಯಾರ್ಕ್‌ಗೆ ಪ್ರಯಾಣಿಸುತ್ತಿದ್ದ ವಿಮಾನವನ್ನು ಫೋನಿಕ್ಸ್‌ನಲ್ಲಿ ಲ್ಯಾಂಡ್ ಮಾಡಲಾಗಿದೆ.

ಇದನ್ನೂ ಓದಿ: ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ದನನ್ನೇ ಕೊಂದ ವ್ಯಕ್ತಿ

ಈ ವಿಚಿತ್ರ ಘಟನೆಯ ಬಗ್ಗೆ ಟಿಕ್‌ಟಾಕ್ ಕ್ರಿಯೆಟರ್ ಎಥನ್ ಜುಡೆಲ್ಸನ್ ಎಂಬವರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವಿಮಾನವನ್ನೇ ತುರ್ತು ಭೂಸ್ಪರ್ಶ ಮಾಡಲು ಕಾರಣವೇನು ಎಂಬುದನ್ನು ವಿಡಿಯೋದಲ್ಲಿ ವಿವರಿಸಲಾಗಿದ್ದು, ಒಂದು ಹೇನಿನ ಸಮಸ್ಯೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ