AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 4.1 ಕೆಜಿ ಚಿನ್ನದಿಂದ ವಿನ್ಯಾಸಗೊಳಿಸಲಾದ ವಿಶ್ವದ ಅತ್ಯಂತ ದುಬಾರಿ ಶರ್ಟ್

ನೀವು ಎಂದಾದರೂ ಕೋಟಿ ಬೆಲೆ ಬಾಳುವ ಶರ್ಟ್​​​​ ನೋಡಿದ್ದೀರಾ? ಈ ಶರ್ಟ್​​​ ಅನ್ನು ಸಂಪೂರ್ಣವಾಗಿ 4.1 ಕೆಜಿ ಚಿನ್ನದಿಂದ ವಿನ್ಯಾಸಗೊಳಿಸಲಾಗಿದೆ. ಜೊತೆಗೆ ಈ ದುಬಾರಿ ಶರ್ಟ್​​​ 2016 ರಲ್ಲಿ ಗಿನ್ನೆಸ್ ವಿಶ್ವ ದಾಖಲೆಯ ಪುಟವನ್ನು ಸೇರಿದೆ. 'ದಿ ಮ್ಯಾನ್ ವಿತ್ ದಿ ಗೋಲ್ಡನ್ ಶರ್ಟ್' ಎಂಬ ಖ್ಯಾತಿ ಗಳಿಸಿಕೊಂಡಿರುವ ವ್ಯಕ್ತಿಯ ಬಗ್ಗೆ ಇಲ್ಲಿದೆ ಮಾಹಿತಿ.

Viral News: 4.1 ಕೆಜಿ  ಚಿನ್ನದಿಂದ ವಿನ್ಯಾಸಗೊಳಿಸಲಾದ ವಿಶ್ವದ ಅತ್ಯಂತ ದುಬಾರಿ ಶರ್ಟ್
Guinness record for man with golden shirImage Credit source: instagram
ಅಕ್ಷತಾ ವರ್ಕಾಡಿ
|

Updated on:Feb 20, 2024 | 11:00 AM

Share

ಮಹಾರಾಷ್ಟ್ರ ಮೂಲದ ಪ್ರಸಿದ್ಧ ಉದ್ಯಮಿ ಮತ್ತು ರಾಜಕಾರಣಿ ಪಂಕಜ್ ಪರಾಖ್ ಅವರು 4.1 ಕೆಜಿ ಚಿನ್ನದಿಂದ ವಿನ್ಯಾಸಗೊಳಿಸಲಾದ ವಿಶ್ವದ ಅತ್ಯಂತ ದುಬಾರಿ ಶರ್ಟ್ ಹೊಂದಿರುವ ವ್ಯಕ್ತಿ. ಇವರ ಈ ದುಬಾರಿ ಶರ್ಟ್​​​ನಿಂದಲೇ 2016 ರಲ್ಲಿ ಗಿನ್ನೆಸ್ ವಿಶ್ವ ದಾಖಲೆ ಮಾಡಿದ್ದರು. 4.10 ಕೆಜಿ ತೂಕದ ಗೋಲ್ಡನ್ ಶರ್ಟ್ ಈಗ 1,78,00,000 ಕೋಟಿ ರೂ. ಮೌಲ್ಯದ್ದಾಗಿದೆ ಮತ್ತು ಪರಾಖ್ ಅವರ ಶ್ರೀಮಂತ ಸಂಗ್ರಹದ ಒಂದು ಭಾಗವಾಗಿದೆ. ಇದರಲ್ಲಿ ಚಿನ್ನದ ಗಡಿಯಾರ, ಹಲವಾರು ಚಿನ್ನದ ಸರಗಳು, ದೊಡ್ಡ ಚಿನ್ನದ ಉಂಗುರಗಳು, ಚಿನ್ನದ ಮೊಬೈಲ್ ಕವರ್ ಮತ್ತು ಚಿನ್ನದ ಚೌಕಟ್ಟಿನ ಕನ್ನಡಕಗಳು ಸೇರಿವೆ.

2014 ರಲ್ಲಿ ಪಂಕಜ್ ಪರಾಖ್ ಅವರ 45 ನೇ ಹುಟ್ಟುಹಬ್ಬಕ್ಕೆ ಈ ದುಬಾರಿ ಶರ್ಟ್ ಅನ್ನು ನಾಸಿಕ್‌ನ ಬಫ್ನಾ ಜ್ಯುವೆಲ್ಲರ್ಸ್‌ನಿಂದ ವಿನ್ಯಾಸಗೊಳಿಸಲಾಗಿತ್ತು. 20 ಆಯ್ದ ಕುಶಲಕರ್ಮಿಗಳ ತಂಡವು ಎರಡು ತಿಂಗಳುಗಳಲ್ಲಿ 3,200 ಗಂಟೆಗಳ ಕಾಲ ಶ್ರಮ ವಹಿಸಿ ಈ ಶರ್ಟ್​​​​ ಅನ್ನು ವಿನ್ಯಾಸಗೊಳಿಸಲಾಗಿದೆ. 4.1 ಕೆಜಿ ಚಿನ್ನದಿಂದ ವಿನ್ಯಾಸಗೊಳಿಸಲಾದ ಈ ಶರ್ಟನ್ನು ಒಳಭಾಗದಿಂದ ಆರಾಮದಾಯಕ ಮತ್ತು ದೇಹಕ್ಕೆ ಹಾನಿಯಾಗದಂತೆ ವಿನ್ಯಾಸಗೊಳಿಸಲಾಗಿದೆ. ಒಳಭಾಗದಲ್ಲಿ ಬಟ್ಟೆಯನ್ನು ಹೊಂದಿದ್ದು, ಹೊರಭಾಗದಲ್ಲಿ ಚಿನ್ನದಿಂದ ವಿನ್ಯಾಸಗೊಳಿಸಲಾಗಿದೆ. ಇದರ ಹೊರತಾಗಿ ಈ ಶರ್ಟ್ ಅನ್ನು ವಾಶ್​​​ ಮಾಡಬಹುದಾಗಿದೆ.

ಇದನ್ನೂ ಓದಿ: ಇದು ಸಿಂಗಲ್ಸ್ ಕಷ್ಟ, ಗರ್ಲ್ ಫ್ರೆಂಡ್ ಇಲ್ಲ ಅದಕ್ಕೆ ಬಟ್ಟೆ ಅಂಗಡಿಯ ಗೊಂಬೆ ಜೊತೆ ಬೈಕ್ ರೈಡ್​​ 

ಮುಂಬೈನಿಂದ ಸುಮಾರು 260 ಕಿಮೀ ದೂರದಲ್ಲಿರುವ ಯೋಲಾ ಪಟ್ಟಣದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಉಪ ಮೇಯರ್ ಆಗಿ ಗುರುತಿಸಿಕೊಂಡಿರುವ ಪಂಕಜ್ ಪರಾಖ್. ದುಬಾರಿ ಶರ್ಟ್​​ನಿಂದಲೇ’ದಿ ಮ್ಯಾನ್ ವಿತ್ ದಿ ಗೋಲ್ಡನ್ ಶರ್ಟ್’ ಎಂಬ ಖ್ಯಾತಿಯನ್ನು ಗಳಿಸಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Tue, 20 February 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ