AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕ್ಯಾನ್ಸರ್ ಗಡ್ಡೆ ಇದೆ ಎಂದು ಗುಪ್ತಾಂಗವನ್ನೇ ಕತ್ತರಿಸಿ ಆಮೇಲೆ ಏನೂ ಇಲ್ಲ ಎಂದ ವೈದ್ಯರು

ವೈದ್ಯೋ ನಾರಾಯಣೋ ಹರಿಃ ಅಂತಾರೆ, ವೈದ್ಯರನ್ನು ದೇವರಂತೆ ಕಾಣಲಾಗುತ್ತದೆ, ಆದರೆ ವೈದ್ಯರು ಮಾಡುವ ತಪ್ಪಿನಿಂದ ರೋಗಿಯು ಜೀವನಪೂರ್ತಿ ನರಳುವಂತಾದರೆ, ಆಸ್ಪತ್ರೆಗೆ ಹೋಗಲು ರೋಗಿಗೆ ಧೈರ್ಯ ಬರುವುದೇ? ಗಡ್ಡೆ ಇದೆ ಎಂದು ಹೇಳಿ ಗುಪ್ತಾಂಗವನ್ನೇ ಕತ್ತರಿಸಿ ಬಳಿಕ ಕ್ಯಾನ್ಸರ್ ಇಲ್ಲ ಎಂದು ಹೇಳಿರುವ ಘಟನೆ ಇಟಲಿಯಲ್ಲಿ ನಡೆದಿದೆ.

Viral News: ಕ್ಯಾನ್ಸರ್ ಗಡ್ಡೆ ಇದೆ ಎಂದು ಗುಪ್ತಾಂಗವನ್ನೇ ಕತ್ತರಿಸಿ ಆಮೇಲೆ ಏನೂ ಇಲ್ಲ ಎಂದ ವೈದ್ಯರು
ಶಸ್ತ್ರಚಿಕಿತ್ಸೆ
ನಯನಾ ರಾಜೀವ್
|

Updated on: Mar 06, 2023 | 11:20 AM

Share

ವೈದ್ಯೋ ನಾರಾಯಣೋ ಹರಿಃ ಅಂತಾರೆ, ವೈದ್ಯರನ್ನು ದೇವರಂತೆ ಕಾಣಲಾಗುತ್ತದೆ, ಆದರೆ ವೈದ್ಯರು ಮಾಡುವ ತಪ್ಪಿನಿಂದ ರೋಗಿಯು ಜೀವನಪೂರ್ತಿ ನರಳುವಂತಾದರೆ, ಆಸ್ಪತ್ರೆಗೆ ಹೋಗಲು ರೋಗಿಗೆ ಧೈರ್ಯ ಬರುವುದೇ? ಗಡ್ಡೆ ಇದೆ ಎಂದು ಹೇಳಿ ಗುಪ್ತಾಂಗವನ್ನೇ ಕತ್ತರಿಸಿ ಬಳಿಕ ಕ್ಯಾನ್ಸರ್ ಇಲ್ಲ ಎಂದು ಹೇಳಿರುವ ಘಟನೆ ಇಟಲಿಯಲ್ಲಿ ನಡೆದಿದೆ. ವೈದ್ಯರು ನೀಡಿರುವ ಸಲಹೆಯಂತೆ, ಟ್ಯೂಮರ್ ಇರುವ ಶಂಕೆ ಮೇರೆಗೆ ರೋಗಿಯು ಗುಪ್ತಾಂಗದ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಒಪ್ಪಿಕೊಂಡಿದ್ದ.

ಶಸ್ತ್ರ ಚಿಕಿತ್ಸೆ ಬಳಿಕ ಗಡ್ಡೆಯಿಲ್ಲವೆಂದು ತಿಳಿದಾಗ ಶಾಕ್ ಆಗಿದ್ದಾನೆ. ಇಟಲಿಯ ವ್ಯಕ್ತಿಗೆ ಕೆಲ ದಿನಗಳಿಂದ ಗುಪ್ತಾಂಗದಲ್ಲಿ ನೋವು ಕಾಣಿಸಿಕೊಳ್ಳುತ್ತಿತ್ತು. ವೈದ್ಯರು ಹಲವು ಪರೀಕ್ಷೆಗಳನ್ನು ಮಾಡಿದ ಬಳಿಕ ಗುಪ್ತಾಂಗದಲ್ಲಿ ಗಡ್ಡೆ ಬೆಳೆದಿದೆ ಶಸ್ತ್ರ ಚಿಕಿತ್ಸೆ ಮಾಡಿಯೇ ತೆಗೆಯಬೇಕು ಎಂದು ನಂಬಿಸಿದ್ದರು. ಅದಕ್ಕೊಪ್ಪಿ ಶಸ್ತ್ರಚಿಕಿತ್ಸೆಗೆ ಒಳಗಾದರೆ ಗಡ್ಡೆಯೇ ಇರಲಿಲ್ಲ ಎನ್ನುವ ಸಂಗತಿ ತಿಳಿದುಬಂದಿತ್ತು.

ಮತ್ತಷ್ಟು ಓದಿ: ಏಕಾಏಕಿ ಅಂಗಡಿಯೊಳಗೆ ನುಗ್ಗಿದ ಟ್ರಾಕ್ಟರ್, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಇಲ್ಲಿದೆ ನೋಡಿ

60 ವರ್ಷದ ವ್ಯಕ್ತಿಗೆ ಸಿಫಿಲಿಸ್ ಇತ್ತು ಅದನ್ನು ಔಷಧಿಗಳಿಂದ ಗುಣಪಡಿಸಬಹುದಿತ್ತು, ಆದರೆ ಗುಪ್ತಾಂಗವನ್ನೇ ಕಳೆದುಕೊಳ್ಳಬೇಕಾಯಿತು. ಇಟಲಿಯ ಆರೋಗ್ಯ ಇಲಾಖೆಯು ವೈದ್ಯರ ವಿರುದ್ಧ ತನಿಖೆ ಆರಂಭಿಸಿದೆ. ಮಾರ್ಚ್​ 9 ರಂದು ಪ್ರಕರಣದ ವಿಚಾರಣೆ ನಡೆಯಲಿದೆ.

ಕಳೆದ ವರ್ಷ ಯುರೋಪ್​ನಲ್ಲಿ ಇಂಥದ್ದೇ ಘಟನೆ ನಡೆದಿತ್ತು, ವೈದ್ಯರ ನಿರ್ಲಕ್ಷ್ಯದಿಂದ ಶಸ್ತ್ರ ಚಿಕಿತ್ಸೆಯಲ್ಲಿ ರೋಗಿಯ ಜನನಾಂಗವನ್ನೇ ತೆಗೆದುಹಾಕಲಾಯಿತು. ರೋಗಿಯು ಕೋರ್ಟ್​ ಮೆಟ್ಟಿಲೇರಿದಾಗ ವ್ಯಕ್ತಿಗೆ 62,000 ಯೂರೋ ಪರಿಹಾರವನ್ನು ಪಾವತಿಸಲು ಆದೇಶಿಸಿತು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!