AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಅದ್ದೂರಿಯಾಗಿ ಕರುವಿನ ನಾಮಕರಣ ಮಾಡಿ ಸಂಭ್ರಮಿಸಿದ ಕುಟುಂಬ

ಕರೀಂನಗರದ ಗೌರಿಶೆಟ್ಟಿ ಮುನೀಂದರ್ ಮತ್ತು ಅನುರಾಧ ದಂಪತಿಗೆ ಹಸುಗಳೆಂದರೆ ಬಹಳ ಪ್ರೀತಿ. ಇತ್ತೀಚೆಗೆ ಅವರು ಸಾಕಿದ್ದ ಹಸು ಕರುವಿಗೆ ಜನ್ಮ ನೀಡಿದೆ. ಇದೀಗ ಕರು ಹುಟ್ಟಿದ 21 ದಿನಗಳ ನಂತರ ಅದ್ಧೂರಿಯಾಗಿ ನಾಮಕರಣ ಕಾರ್ಯಕ್ರಮ ನೆರವೇರಿಸಿದ್ದಾರೆ.

Viral News: ಅದ್ದೂರಿಯಾಗಿ ಕರುವಿನ ನಾಮಕರಣ ಮಾಡಿ ಸಂಭ್ರಮಿಸಿದ ಕುಟುಂಬ
ಕರುವಿನ ನಾಮಕರಣ ಕಾರ್ಯಕ್ರಮ
Follow us
ಅಕ್ಷತಾ ವರ್ಕಾಡಿ
|

Updated on: Mar 28, 2024 | 3:13 PM

ತೆಲಂಗಾಣ:  ಕರೀಂನಗರ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಅದ್ದೂರಿಯಾಗಿ ನಾಮಕರಣ ಕಾರ್ಯಕ್ರಮವೊಂದು ನೆರವೇರಿದೆ. ಆದ್ರೆ ನಾಮಕರಣ ಕಾರ್ಯಕ್ರಮ ಸುದ್ದಿಯಾಗುವಷ್ಟು ವಿಶೇಷತೆ ಏನಿದೆ ಅಂತಾ ನೀವು ಅಂದುಕೊಂಡಿರಬಹುದು. ಹೌದು ಈ ಕಾರ್ಯಕ್ರಮದಲ್ಲಿ ವಿಶೇಷತೆಯಿದೆ. ಯಾಕೆಂದರೆ ಕುಟುಂಬವೊಂದು ತಮ್ಮ ಮನೆಯಲ್ಲಿ ಜನಿಸಿದ ಕರುವೊಂದರ ನಾಮಕರಣ ಕಾರ್ಯಕ್ರಮವನ್ನು ತಮ್ಮ ಮನೆಯ ಮಗುವಿನ ನಾಮಕರಣದಂತೆ ಅದ್ದೂರಿಯಾಗಿ ಮಾಡಿದ್ದಾರೆ.

ಕರೀಂನಗರದ ಗೌರಿಶೆಟ್ಟಿ ಮುನೀಂದರ್ ಮತ್ತು ಅನುರಾಧ ದಂಪತಿಗೆ ಹಸುಗಳೆಂದರೆ ಬಹಳ ಪ್ರೀತಿ. ಇತ್ತೀಚೆಗೆ ಅವರು ಸಾಕಿದ್ದ ಹಸು ಕರುವಿಗೆ ಜನ್ಮ ನೀಡಿದೆ. ಇದೀಗ ಕರು ಹುಟ್ಟಿದ 21 ದಿನಗಳ ನಂತರ ಅದ್ಧೂರಿಯಾಗಿ ನಾಮಕರಣ ಕಾರ್ಯಕ್ರಮ ನೆರವೇರಿಸಿದ್ದಾರೆ.

ನಾಮಕರಣ ಕಾರ್ಯಕ್ರಮದಲ್ಲಿ ಸುಮಾರು 500 ಜನರು ಭಾಗಿಯಾಗಿದ್ದು, ಕರುವನ್ನು ಸುಂದರವಾಗಿ ಅಲಂಕರಿಸಿದ ತೊಟ್ಟಿಲಲ್ಲಿ ಕೂರಿಸಿ ದೇವರ ಹಾಡುಗಳನ್ನು ಹಾಡುತ್ತಾ ಸಂಭ್ರಮಿಸಲಾಗಿದೆ. ಇದಲ್ಲದೇ ಅತಿಥಿಗಳಿಗೆ ಭರ್ಜರಿ ಔತಣ ಕೂಟವನ್ನು ಆಯೋಜಿಸಲಾಗಿತ್ತು.ಕರುವಿನ ನಾಮಕರಣ ಕಾರ್ಯಕ್ರಮವನ್ನು ಕಂಡು ಸ್ಥಳೀಯರು ಆಶ್ಚರ್ಯಚಕಿತರಾಗಿದ್ದಾರೆ.

ಇದನ್ನೂ ಓದಿ: ಶಾಲೆಗೆ ಕುಡಿದು ಬಂದ ಶಿಕ್ಷಕನನ್ನು ಚಪ್ಪಲಿಯಲ್ಲಿ ಹೊಡೆದು ಓಡಿಸಿದ ವಿದ್ಯಾರ್ಥಿಗಳು

ಕರುವಿಗೆ ರಾಧಾರಾಣಿ ಎಂದು ನಾಮಕರಣ ಮಾಡಿದ್ದು,ಗೋ ಮಾತೆಯನ್ನು ಕೂಡ ಹೊಸ ಬಟ್ಟೆ ಹಾಗೂ ಅರಿಶಿನ ಕುಂಕುಮವಿಟ್ಟು ಅಲಂಕರಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅತಿಥಿಗಳಿಗೆ ತುಳಸಿ ಗಿಡಗಳನ್ನು ಉಡುಗೊರೆಯಾಗಿ ನೀಡಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!