
ದೆಹಲಿಯ ಮೆಟ್ರೋ ಒಂದರಲ್ಲಿ ದಂಪತಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇತ್ತೀಚೆಗೆ ಮೆಟ್ರೋದಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುವುದು ಹೆಚ್ಚಾಗಿ ಬಿಟ್ಟಿದೆ. ಇಂತಹ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುತ್ತದೆ. ಇತ್ತೀಚೆಗಷ್ಟೇ ಮಹಿಳೆಯೊಬ್ಬಳು ದೆಹಲಿನ ಮೆಟ್ರೋ ಸ್ಟೇಷನ್ನಲ್ಲಿ ಭೋಜ್ಪುರಿ ಹಾಡಿಗೆ ಸ್ಟೆಪ್ ಹಾಕಿದ್ದು ಭಾರೀ ಸುದ್ದಿಯಾಗಿತ್ತು. ಜೊತೆಗೆ ಯುವತಿಯೊಬ್ಬಳು ತುಂಡುಡುಗೆ ತೊಟ್ಟು ದೆಹಲಿ ಮೆಟ್ರೋ ಹತ್ತಿದ್ದಾಳೆ, ಹುಡುಗಿ ಇತರ ಮಹಿಳಾ ಪ್ರಯಾಣಿಕರೊಂದಿಗೆ ಚಿಕ್ಕ ಬಟ್ಟೆಯಲ್ಲಿ ಮೆಟ್ರೋ ಕೋಚ್ನಲ್ಲಿ ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.
ಇದೀಗಾ ದಂಪತಿಗಳು ತಮ್ಮದೇ ಗುಂಗಿನಲ್ಲಿ ಪರಸ್ಪರ ಮೆಟ್ರೋದಲ್ಲಿ ಚುಂಬಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ಟ್ವಿಟರ್ನಲ್ಲಿ ವೈರಲ್ ಆಗುತ್ತಿದ್ದಂತೆ ಸಾಕಷ್ಟು ಟೀಕೆಗೆ ಕಾರಣವಾಗಿದೆ. ಜೋಡಿಗಳ ಚುಂಬಿಸುತ್ತಿರುವ ವೈರಲ್ ವಿಡಿಯೋ ಇಲ್ಲಿದೆ ನೋಡಿ.
ಈ ವಿಡಿಯೋ ಟ್ವಿಟರ್ನಲ್ಲಿ ವೈರಲ್ ಆಗುತ್ತಿದ್ದಂತೆ ಸಾಕಷ್ಟು ಬಳಕೆದಾರರು ಕಾಮೆಂಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಅವರಿಗೆ ತಿಳಿಸಿಕೊಡಿ ಎಂದು ಬಳಕೆದಾರರೊಬ್ಬರು ಕಾಮೆಂಟ್ ಮಾಡಿದ್ದಾರೆ. ಇದಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಇನ್ನೊಬ್ಬ ಬಳಕೆದಾರರು ಬರೆದುಕೊಂಡಿದ್ದಾರೆ. ಇದರ ಜೊತೆಗೆ ದಂಪತಿಗಳ ಖಾಸಗಿ ವಿಡಿಯೋವನ್ನು ಹೇಗೆ ಶೇರ್ ಮಾಡಿದ್ದೀರಿ ಎಂದು ಇನ್ನೊಬ್ಬ ಬಳಕೆದಾರ ಪ್ರಶ್ನೆ ಮಾಡಿದ್ದಾನೆ. ಇದೀಗಾ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.
ಮತ್ತಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: