AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ

ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ.ಕೂಡಲೇ ಎಚ್ಚೆತ್ತ ಮಹಿಳೆ ತನ್ನ ಸಹ ಕಾರ್ಮಿಕರೊಂದಿಗೆ ಸೇರಿ ಹಾವನ್ನು ಹೊಡೆದು ಸಾಯಿಸಿದ್ದಾರೆ. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳುವ ವೇಳೆ ಕೊಂದ ಹಾವನ್ನು ಡಬ್ಬಿಯೊಂದರಲ್ಲಿ ಹಾಕಿಕೊಂಡು ಹೋಗಿದ್ದಾಳೆ.

Viral News: ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ
ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Apr 18, 2024 | 10:21 AM

Share

ತೆಲಂಗಾಣ: ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ. ತಕ್ಷಣ ಮಹಿಳೆ ಹಾವನ್ನು ಹೊಡೆದು ಕೊಂದಿದ್ದು, ಬಳಿಕ ಸತ್ತ ಹಾವನ್ನು ಡಬ್ಬಿಯಲ್ಲಿ ಹಾಕಿ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾರೆ. ಈಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯ ಕೈಯಲ್ಲಿ ಹಾವು ಇದ್ದುದನ್ನು ಕಂಡು ವೈದ್ಯಕೀಯ ಸಿಬ್ಬಂದಿ ಗಾಬರಿಗೊಂಡಿದ್ದಾರೆ.

ಮುಳುಗು ಜಿಲ್ಲೆಯ ವೆಂಕಟಾಪುರಂ ಮಂಡಲದ ಮುಕುನೂರುಪಾಲೆಂ ಗ್ರಾಮದ ಶಾಂತಾ ಎಂಬ ಮಹಿಳೆ ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ.ಕೂಡಲೇ ಎಚ್ಚೆತ್ತ ಮಹಿಳೆ ತನ್ನ ಸಹ ಕಾರ್ಮಿಕರೊಂದಿಗೆ ಸೇರಿ ಹಾವನ್ನು ಹೊಡೆದು ಸಾಯಿಸಿದ್ದಾರೆ. ಅಲ್ಲಿಂದ ಕೂಡಲೇ ವೆಂಕಟಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದಾರೆ. ಆದರೆ ಹೊರಡುವಾಗ ಆಕೆಗೆ ಅನುಮಾನವೊಂದು ಹುಟ್ಟಿಕೊಂಡಿದೆ. ಆಸ್ಪತ್ರೆಗೆ ಹೋದರೆ ಯಾವ ಹಾವು ಕಚ್ಚಿದೆ ಎಂದು ವೈದ್ಯರು ಕೇಳಿದರೆ ಏನು ಮಾಡಲಿ ಎಂದು ತಿಳಿಯದೇ ಮಹಿಳೆ ಕೊಂದ ಹಾವನ್ನು ಡಬ್ಬಿಯೊಂದರಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಹೋಗಿದ್ದಾಳೆ.

ಇದನ್ನೂ ಓದಿ: Bengaluru: ಇದು ಬೇಜವಾಬ್ದಾರಿತನದ ಪರಮಾವಧಿ, ಫೂಟ್ ರೆಸ್ಟ್ ಮೇಲೆ ಮಗುವನ್ನು ನಿಲ್ಲಿಸಿಕೊಂಡು ದಂಪತಿಗಳ ಸ್ಕೂಟರ್ ಸವಾರಿ 

ತಬ್ಬಿಬ್ಬಾದ ವೈದ್ಯಕೀಯ ಸಿಬ್ಬಂದಿ ಮಹಿಳೆಯ ಕೈಯಲ್ಲಿ ಸತ್ತ ಹಾವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಕ್ಷಣವೇ ವೈದ್ಯಕೀಯ ಸೇವೆ ಒದಗಿಸಲಾಗಿದೆ. ಸದ್ಯ ಶಾಂತಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?