AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Population Growth: ಈ ದೇಶದಲ್ಲಿ ಮಗು ಮಾಡಿಕೊಂಡ್ರೆ ಸರ್ಕಾರದಿಂದ ಸಿಗುತ್ತೆ ಲಕ್ಷ ಲಕ್ಷ ದುಡ್ಡು

ದಕ್ಷಿಣ ಕೊರಿಯಾ ತಮ್ಮ ದೇಶದಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಲು ದಂಪತಿಗಳಿಗೆ ಬಂಪರ್​​ ಆಫರ್​​ ನೀಡಲು ನಿರ್ಧರಿಸಿದೆ. ಇದಲ್ಲದೆ, ಮಗುವಿನ ಜನನದ ವೆಚ್ಚವನ್ನು ಸಹ ಸರ್ಕಾರ ಭರಿಸುತ್ತದೆ. ದಕ್ಷಿಣ ಕೊರಿಯಾದಲ್ಲಿ ಈ ಯೋಜನೆ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ಸುದ್ದಿಗೆ ನೆಟ್ಟಿಗರು ತಮಾಷೆಯಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

Population Growth: ಈ ದೇಶದಲ್ಲಿ ಮಗು ಮಾಡಿಕೊಂಡ್ರೆ ಸರ್ಕಾರದಿಂದ ಸಿಗುತ್ತೆ ಲಕ್ಷ ಲಕ್ಷ ದುಡ್ಡು
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 11, 2024 | 10:20 AM

Share

ಕೆಲವು ದೇಶಗಳಲ್ಲಿ ಜನನ ಪ್ರಮಾಣವು ಸಂಪೂರ್ಣವಾಗಿ ಕುಸಿದಿದೆ. ಇದರಿಂದಾಗಿ ಆಯಾ ಸರಕಾರಗಳು ದಂಪತಿಗಳಿಗೆ ಅದ್ಭುತ ಕೊಡುಗೆಗಳನ್ನು ನೀಡುತ್ತಿವೆ. ಅಷ್ಟೇ ಅಲ್ಲ ಆ ದೇಶಗಳ ಉದ್ಯೋಗಿಗಳಿಗೆ ಒಳ್ಳೆಯ ಬಂಪರ್ ಆಫರ್ ಗಳನ್ನೂ ನೀಡುತ್ತಿದ್ದಾರೆ. ಇತ್ತೀಚೆಗೆ ಚೀನಾ ಕೂಡ ಇದೇ ರೀತಿಯ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಇದೀಗ ದಕ್ಷಿಣ ಕೊರಿಯಾ. ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಕೊರಿಯಾದ ಜನಸಂಖ್ಯೆಯು ನಾಟಕೀಯವಾಗಿ ಕುಸಿದಿದೆ. ಇದರೊಂದಿಗೆ ಇತರ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಮಕ್ಕಳನ್ನು ಹೊಂದಲು ಪ್ರೋತ್ಸಾಹಿಸಲು ಈ ಸರ್ಕಾರವು ಪ್ರೋತ್ಸಾಹ ಧನ ನೀಡುತ್ತಿದೆ. ದೇಶದ ನಿರ್ಮಾಣ ಸಂಸ್ಥೆ ಬೂಯೊಂಗೊ ಕೂಡ ಈ ಬಂಪರ್ ಆಫರ್ ಘೋಷಿಸಿದೆ.

ಬೂಂಗೊ ನಿರ್ಮಾಣ ಸಂಸ್ಥೆಯು ಮಗುವಿಗೆ ಜನ್ಮ ನೀಡುವ ಉದ್ಯೋಗಿಗಳಿಗೆ 62 ಲಕ್ಷ ರೂ ಬೋನಸ್ ಆಗಿ ನೀಡುವುದಾಗಿ ಘೋಷಿಸಿದೆ. ಏತನ್ಮಧ್ಯೆ, 2021 ರಿಂದ ಇಲ್ಲಿಯವರೆಗೆ 70 ಮಕ್ಕಳಿಗೆ ಜನ್ಮ ನೀಡಿದ ಪೋಷಕರಿಗೆ 43 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಸಂಸ್ಥೆ ಬಹಿರಂಗಪಡಿಸಿದೆ. ಪ್ರತಿ ಮಗು ಹುಟ್ಟಿದಾಗಲೂ ಈ ಮೊತ್ತವನ್ನು ಪಾವತಿಸಲಾಗುವುದು ಎಂದು ಹೇಳಲಾಗಿದೆ. ಆದರೆ ಮಕ್ಕಳಾದ ಬಳಿಕ ಮಹಿಳೆಯರು ಮನೆಯಲ್ಲಿಯೇ ಇರಬೇಕಾಗುತ್ತದೆ.

ಇದನ್ನೂ ಓದಿ: ಸ್ಟೇಡಿಯಂನಲ್ಲಿ ಪ್ರಪೋಸ್ ಮಾಡಿದ ಗೆಳೆಯನಿಗೆ ಕಪಾಳ ಮೋಕ್ಷ ಮಾಡಿದ ಯುವತಿ, ಯಾಕೆ ಗೊತ್ತಾ?   

ಈ ಹಿನ್ನೆಲೆಯಲ್ಲಿ ದಕ್ಷಿಣ ಕೊರಿಯಾ ಈ ನಿರ್ಧಾರ ಕೈಗೊಂಡಿದೆ. ತಮ್ಮ ದೇಶದಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಲು ಬಂಪರ್​​ ಆಫರ್​​ ನೀಡಲು ನಿರ್ಧರಿಸಿದೆ. ಇದಲ್ಲದೆ, ಮಗುವಿನ ಜನನದ ವೆಚ್ಚವನ್ನು ಸಹ ಸರ್ಕಾರ ಭರಿಸುತ್ತದೆ. ಈ ಯೋಜನೆಯಿಂದ ದಕ್ಷಿಣ ಕೊರಿಯಾದಲ್ಲಿ ಜನಸಂಖ್ಯೆಯ ಪ್ರಮಾಣ ಹೆಚ್ಚುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಆದರೆ ಇದೀಗ ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸುದ್ದಿಗೆ ನೆಟಿಜನ್‌ಗಳು ತಮಾಷೆಯಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್