ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆದ ಇಬ್ಬರು ಯುವಕರು

ನೋಯ್ಡಾದ ಕಾರ್ ಶೋರೂಂಗೆ ಇಬ್ಬರು ವ್ಯಕ್ತಿಗಳು ಗುರುವಾರ ಭೇಟಿ ನೀಡಿದ್ದು,ಎಸ್ ಯುವಿ ಖರೀದಿಸುವುದಾಗಿ ಹೇಳಿದ್ದರು. ಆದರಂತೆ ಮಾಲೀಕ ತನ್ನ ಸಿಬ್ಬಂದಿಯೊಬ್ಬನ ಜೊತೆ ಕಾರನ್ನು ಟೆಸ್ಟ್ ಡ್ರೈವ್‌ಗೆ ಕಳುಹಿಸಿದ್ದಾನೆ. ಆದರೆ ಸ್ವಲ್ಪ ದೂರ ಹೋದ ಈ ಕಿರಾತಕರು ಶೋರೂಂ ಉದ್ಯೋಗಿಯನ್ನು ಕಾರಿನಿಂದ ಹೊರಗೆ ತಳ್ಳಿ ಕಾರಿನೊಂದಿಗೆ ಎಸ್ಕೇಪ್ ಆಗಿದ್ದಾರೆ.

ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆದ ಇಬ್ಬರು ಯುವಕರು
Follow us
ಅಕ್ಷತಾ ವರ್ಕಾಡಿ
|

Updated on: Sep 27, 2024 | 10:15 AM

ಉತ್ತರ ಪ್ರದೇಶ: ಕಾರು ಖರೀದಿಸುವ ಮುನ್ನ ಟೆಸ್ಟ್‌ ಡ್ರೈವ್‌ ಅನ್ನೊದು ಬಹಳ ಮುಖ್ಯವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆಗುವ ಕಿರಾತಕರ ಸಂಖ್ಯೆ ಜಾಸ್ತಿಯಾಗಿದೆ. ಇದೀಗ ಅಂತದ್ದೇ ಘಟನೆ ಗುರುವಾರ (ಸೆ. 26) ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಇಲ್ಲಿ ಯುವಕರಿಬ್ಬರು ಟೆಸ್ಟ್ ಡ್ರೈವ್​​ಗೆಂದು ಕೇಳಿ ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಎಷ್ಟೇ ಹೊತ್ತಾದರೂ ಬಾರದೇ ಇದ್ದಿದ್ದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ.

ಗ್ರೇಟರ್ ನೋಯ್ಡಾದಲ್ಲಿರುವ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಂಗೆ ಇಬ್ಬರು ವ್ಯಕ್ತಿಗಳು ಗುರುವಾರ ಭೇಟಿ ನೀಡಿದ್ದರು. ಇಡೀ ಶೋರೂಮ್ ಪರಿಶೀಲಿಸಿ ಎಸ್ ಯುವಿ ಖರೀದಿಸುವುದಾಗಿ ಹೇಳಿದ್ದರು. ಆದರಂತೆ ಮಾಲೀಕನ ಬಳಿ ಟೆಸ್ಟ್ ಡ್ರೈವ್ ಕೇಳಿದ್ದರು. ಅವರು ತಮ್ಮ ಸಿಬ್ಬಂದಿಯನ್ನು ಯಾರನ್ನಾದರೂ ಕರೆದುಕೊಂಡು ಹೋಗುವಂತೆ ಹೇಳಿ ಕಾರನ್ನು ಟೆಸ್ಟ್ ಡ್ರೈವ್‌ಗೆ ನೀಡಿದ್ದರು.

ಆದರೆ ಈ ಕಿರಾತಕರು ಸ್ವಲ್ಪ ದೂರ ಹೋದ ನಂತರ ಶೋರೂಂ ಉದ್ಯೋಗಿಯನ್ನು ಕಾರಿನಿಂದ ಕೆಳಕ್ಕೆ ತಳ್ಳಿ ಇಬ್ಬರು ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಕಾರು ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ಶೋರೂಂನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಕಾರನ್ನು ಹೊರಗೆ ತೆಗೆದುಕೊಂಡು ಹೋದವರು ವಾಪಸ್ ಬರದ ಕಾರಣ ಶೋರೂಂ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Mysterious Necklace: ಹರಾಜಾಗಲಿದೆ ಭಾರತೀಯ ನಂಟು ಹೊಂದಿರುವ 500 ವಜ್ರಗಳ ಈ ನಿಗೂಢ ನೆಕ್ಲೇಸ್

ಮಾಹಿತಿ ಪಡೆದ ನಾಲೆಡ್ಜ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೆ, ಕಾರು ಮಾಲೀಕರು ಮತ್ತು ಖರೀದಿಸಲು ಬಂದವರ ನಡುವೆ ಏನಾದರೂ ವಿವಾದ ಉಂಟಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಆದರೆ, ಕಾರನ್ನು ಹಸ್ತಾಂತರಿಸುವ ಮುನ್ನ ಖರೀದಿದಾರರ ವಿವರ ತನಗೆ ತಿಳಿದಿಲ್ಲ ಎಂದು ಮಾಲೀಕ ಹೇಳಿದ್ದರಿಂದ ದಾಳಿಕೋರರ ಗುರುತು ಪತ್ತೆ ಹಚ್ಚುವುದು ಸವಾಲಾಗಿ ಪರಿಣಮಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ