ಪ್ರಿಯತಮೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡಿ ಪಿಂಡ ಬಿಟ್ಟ ಪತಿರಾಯ

ಪವನ್ ಪಟೇಲ್ ಎಂಬಾತ ತನ್ನ ಮೊದಲ ಪತ್ನಿ ಜೀವಂತವಾಗಿರುವಾಗಲೇ ಆಕೆಯ ಶ್ರಾದ್ಧ ಮಾಡಿ, ಮತ್ತೊಬ್ಬಳನ್ನು ಮದುವೆಯಾಗಿದ್ದಾನೆ. ಪತ್ನಿ ತವರಿಗೆ ಹೋದಾಗ ಈ ಕೃತ್ಯ ಎಸಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪವನ್ ಪರಾರಿಯಾಗಿದ್ದಾನೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಪ್ರಿಯತಮೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡಿ ಪಿಂಡ ಬಿಟ್ಟ ಪತಿರಾಯ
Follow us
ಅಕ್ಷತಾ ವರ್ಕಾಡಿ
|

Updated on: Oct 25, 2024 | 6:12 PM

ಉತ್ತರಪ್ರದೇಶ: ಪುರುಷನೊಬ್ಬ ತನ್ನ ಮೊದಲ ಪತ್ನಿ ಜೀವಂತವಾಗಿರುವಾಗಲೇ ಆಕೆಗೆ ಶ್ರಾದ್ಧ ಮಾಡಿದ್ದಾನೆ. ಬಳಿಕ ತನ್ನ ಪ್ರಿಯತಮೆಗೆ ತನ್ನ ಪತ್ನಿ ಸತ್ತಿರುವುದಾಗಿ ಹೇಳಿ ಮದುವೆಯಾಗಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಆತನ ಮೊದಲ ಪತ್ನಿ ತನ್ನ ತವರು ಮನೆಯಿಂದ ಓಡೋಡಿ ಬಂದು ತಾಳಗ್ರಾಮ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದಾನೆ. ಈ ಘಟನೆ ಉತ್ತರಪ್ರದೇಶದ ಕನೌಜ್‌ನಲ್ಲಿ ನಡೆದಿದೆ.

ಪತ್ನಿ ಬದುಕಿರುವಾಗಲೇ ಶ್ರಾದ್ಧ ಕಾರ್ಯಕ್ರಮ ಮಾಡಿರುವ ವ್ಯಕ್ತಿಯನ್ನು ಪವನ್ ಪಟೇಲ್ ಎಂದು ಗುರುತಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಪವನ್ ಪಟೇಲ್ ಬಂಧನಕ್ಕೆ ಸಜ್ಜಾಗಿದ್ದಾರೆ. ಇತ್ತ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆ ಪವನ್ ಪಟೇಲ್ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಈ ಊರಿನಲ್ಲಿ ಒಂದೇ ಮನೆಯ ಅಣ್ಣ-ತಮ್ಮಂದಿರು ಒಬ್ಬಳೇ ಯುವತಿಯನ್ನು ಮದುವೆಯಾಗಬೇಕು!

ಮದುವೆಯಾದ ಮೇಲೂ ಬೇರೆ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪವನ್ ಪಟೇಲ್,ಸಾಕಷ್ಟು ದಿನಗಳಿಂದ ಪತ್ನಿಗೆ ಚಿತ್ರಹಿಂಸೆ ನೀಡುತ್ತಿದ್ದ. ಇದಲ್ಲದೇ ಇಬ್ಬರು ಮಕ್ಕಳನ್ನು ಆಕೆಯಿಂದ ದೂರ ಮಾಡಿದ್ದ. ಇದರಿಂದ ನೊಂದಿದ್ದ ಪತ್ನಿ ತವರು ಮನೆಗೆ ಹೋಗಿದ್ದಾಳೆ. ಇದನ್ನೇ ಒಳ್ಳೆ ಸಮಯ ಎಂದುಕೊಂಡು ಆಕೆ ಬದುಕಿರುವಾಗಲೇ ಶ್ರಾದ್ಧ ಕಾರ್ಯಕ್ರಮ ಮಾಡಿ ಇನ್ನೊಬ್ಬಳನ್ನು ಮದುವೆಯಾಗಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ