ನಾನು ಮನೆಗೆ ವಾಪಸ್ಸು ಬರಬೇಕೆಂದರೆ ಪ್ರತಿದಿನ ನೀನು ಗುಂಡು – ತುಂಡು ತರಬೇಕು ಎಂದ ಪತ್ನಿ, ಮುಂದೇನಾಯ್ತು?

ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯ ಕುಶಾಲ್ ಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಪತಿಯೊಬ್ಬ ತನ್ನ ಪತ್ನಿಯ ವಿಚಿತ್ರ ಬೇಡಿಕೆಯನ್ನು ಈಡೇರಿಸಲಾಗದೇ ಪತ್ನಿಯ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ.

ನಾನು ಮನೆಗೆ ವಾಪಸ್ಸು ಬರಬೇಕೆಂದರೆ ಪ್ರತಿದಿನ ನೀನು ಗುಂಡು - ತುಂಡು ತರಬೇಕು ಎಂದ ಪತ್ನಿ, ಮುಂದೇನಾಯ್ತು?
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 23, 2024 | 6:02 PM

ಪತ್ನಿಯು ಗಂಡನ ಮುಂದೆ ಬೇಡಿಕೆ ಇಡುವುದು ಸಹಜ. ಹೀಗಾಗಿ ತನ್ನ ಮಡದಿ ಆಸೆಯನ್ನು ಈಡೇರಿಸುವ ಮೂಲಕ ಆಕೆಯ ಮುಖದಲ್ಲಿ ನಗು ತರಿಸುವುದನ್ನು ಕೆಲಸವನ್ನು ಪತಿಯಾದವನು ಮಾಡುತ್ತಾನೆ. ಕೆಲವೊಮ್ಮೆ ಪತ್ನಿಯ ಬೇಡಿಕೆಯನ್ನು ಪತಿಗೆ ಈಡೇರಿಸಲು ಸಾಧ್ಯವಾಗದೇ ಹೋಗಬಹುದು. ಆದರೆ ಇದೀಗ ರಾಜಸ್ಥಾನದ ಬನ್ಸ್ವಾರಾದಲ್ಲಿ ಪತ್ನಿಯ ವಿಚಿತ್ರ ಬೇಡಿಕೆಯಿಂದ ಚಿರಾಗ್ ಎಂಬ ವ್ಯಕ್ತಿಯು ಪತ್ನಿಯ ವಿರುದ್ಧ ದೂರು ದಾಖಲಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ..

ಹೌದು, ಆಲ್ಕೋಹಾಲ್ ಮತ್ತು ನಾನ್ ವೆಜ್ ಬೇಡಿಕೆಗಳನ್ನು ಈಡೇರಿಸದ ಕಾರಣ ನೇಹಾಳು ಗಂಡನ ಮನೆಗೆ ಬರಲು ನಿರಾಕರಿಸಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 2023ರ ಜೂನ್‌ನಲ್ಲಿ ಗುರು ಹಿರಿಯರ ನಿಶ್ಚಯದ ಮೇರೆಗೆ ಈ ಜೋಡಿಯು ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ಮದುವೆ ಮಾತುಕತೆಯ ವೇಳೆ ಎರಡು ಲಕ್ಷ ರೂಪಾಯಿ ನೀಡಬೇಕೆಂದು ನೇಹಾ ಮನೆಯವರು ಬೇಡಿಕೆಯಿಟ್ಟಿದ್ದಾರೆ. ಅದರಂತೆ ಚಿರಾಗ್ ಮನೆಯವರು ನೇಹಾ ಮನೆಯವರಿಗೆ 2 ಲಕ್ಷ ರೂಪಾಯಿ ವರದಕ್ಷಿಣೆ ನೀಡಿದ್ದಾರೆ.

ಆದರೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ನೇಹಾ ಅವರ ನಡವಳಿಕೆಯಲ್ಲಿ ಬದಲಾವಣೆಯಾಗಿದೆ. ಪ್ರತಿ ದಿನ ಗಂಟೆಗಟ್ಟಲೇ ಫೋನ್ ನಲ್ಲಿ ಮಾತನಾಡುತ್ತಿರುವುದಲ್ಲದೇ, ಮನೆಯಲ್ಲಿಯೇ ಮದ್ಯಪಾನ ಮಾಡಲು ಪ್ರಾರಂಭಿಸಿದ್ದಾಳೆ. ಅದಲ್ಲದೇ, 2022 ರಲ್ಲಿ ರಕ್ಷಾಬಂಧನಕ್ಕೆ ತಾಯಿಗೆ ಮನೆಗೆ ಹೋದ ನೇಹಾ ಮತ್ತೆ ಗಂಡನ ಮನೆಗೆ ಮರಳಲೇ ಇಲ್ಲ. ಅಷ್ಟೇ ಅಲ್ಲದೇ ತಾನು ಮನೆಗೆ ವಾಪಸ್ಸು ಬರಬೇಕಾದರೆ ಪ್ರತಿದಿನ ಆಲ್ಕೋಹಾಲ್ ಹಾಗೂ ನಾನ್ ವೆಜ್ ತಂದು ಕೊಡಬೇಕು ಎಂದು ಪತಿಯ ಮುಂದೆ ಬೇಡಿಕೆಯಿಟ್ಟಿದ್ದಾಳೆ. ನೇಹಾಳನ್ನು ಚಿರಾಗ್ ಹಾಗೂ ಆತನ ಕುಟುಂಬದಿಂದ ಎಷ್ಟು ವಿನಂತಿಸಿಕೊಂಡರೂ ಆಕೆಯ ನಿರ್ಧಾರವನ್ನು ಬದಲಾಯಿಸಲೇ ಇಲ್ಲ.

ಇದನ್ನೂ ಓದಿ: ಇದು ಹೋಳಿ ಕುಣಿತ, ರಾಮಾಯಣದ ಹಾಡುಗಳನ್ನು ಹಾಡಿ ಹಾರೈಸುವ ಸುಂದರ ಆಚರಣೆ

ಕೊನೆಗೆ ಬೇಸೆತ್ತ ಚಿರಾಗ್ ಪತ್ನಿಯ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಪತ್ನಿ ನೇಹಾಳ ಬೇಡಿಕೆಯಿಂದಾಗಿ ಆಕೆಯ ವಿರುದ್ಧ ಚಿರಾಗ್ ಎಫ್ಐಆರ್ ದಾಖಲಿಸಿದ್ದಾರೆ. ಕುಶಾಲಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ತನಿಖೆ ನಡೆಯುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನೇಹಾ ಮತ್ತು ಅವರ ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸಲಾಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್