AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋನ್‌ಗೆಂದು ಹೋಗಿ ಬ್ಯಾಂಕ್ ಸಿಇಒನನ್ನೇ ತನ್ನ ಬಲೆಗೆ ಬೀಳಿಸಿ 4 ಕೋಟಿ ರೂ. ದೋಚಿದ ಮಹಿಳೆ

ವರದಿಯ ಪ್ರಕಾರ, ಮಹಿಳೆ ಆರಂಭದಲ್ಲಿ ಹಣಕಾಸಿನ ತೊಂದರೆಯಿಂದಾಗಿ ಸಾಲದ ಅಗತ್ಯವಿದೆ ಎಂದು ಬ್ಯಾಂಕ್ ಸಿಇಒ ಅವರನ್ನು ಸಂಪರ್ಕಿಸಿದ್ದಾಳೆ. ಸಾಲ ಪ್ರಕ್ರಿಯೆಯ ಸಮಯದಲ್ಲಿ, ಸಿಇಒ ಆಕೆಯ ಮನೆಯ ಸಮೀಕ್ಷೆಗೆ ಹೋಗಿದ್ದಾನೆ. ಈ ವೇಳೆ ಮಹಿಳೆ ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದುವಂತೆ ಒತ್ತಾಯಿಸಿದ್ದು, ಬಳಿಕ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ ಎಂದು ಸಿಇಒ ನೀಡಿದ ದೂರಿನಲ್ಲಿ ದಾಖಲಾಗಿದೆ.

ಲೋನ್‌ಗೆಂದು ಹೋಗಿ ಬ್ಯಾಂಕ್ ಸಿಇಒನನ್ನೇ ತನ್ನ ಬಲೆಗೆ ಬೀಳಿಸಿ 4 ಕೋಟಿ ರೂ. ದೋಚಿದ ಮಹಿಳೆ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:Jun 22, 2024 | 2:34 PM

Share

ಮುಂಬೈ: ಸಹಕಾರಿ ಬ್ಯಾಂಕ್‌ನ ನಿವೃತ್ತ ಸಿಇಒಗೆ ಮಾನಹಾನಿ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಅವರಿಂದ 4.39 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಥಾಣೆಯ 45 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ದೂರುದಾರರಾದ ಬ್ಯಾಂಕ್ ಸಿಇಒ ಹೇಳುವಂತೆ , 2016 ರಲ್ಲಿ ತನ್ನ ಬ್ಯಾಂಕ್‌ನ ವಡಾಲಾ ಶಾಖೆಗೆ ಮಹಿಳೆಯೊಬ್ಬಳು ಲೋನ್​​ಗಾಗಿ ಬ್ಯಾಂಕ್​ಗೆ ಬಂದಿದ್ದಾರೆ. ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಪರಸ್ಪರ ಸಂಪರ್ಕದ ಬೆಳೆದಿದೆ” ಎಂದು ಹೇಳಿದ್ದಾರೆ.

ಥಾಣೆ ನಗರ ಪೊಲೀಸರು ಉಲ್ಲೇಖಿಸಿದ ವರದಿಯ ಪ್ರಕಾರ, ಮಹಿಳೆ ಆರಂಭದಲ್ಲಿ ಹಣಕಾಸಿನ ತೊಂದರೆಯಿಂದಾಗಿ ಸಾಲದ ಅಗತ್ಯವಿದೆ ಎಂದು ನಿವೃತ್ತ ಸಿಇಒ ಅವರನ್ನು ಸಂಪರ್ಕಿಸಿದ್ದಾರೆ. ಸಾಲ ಪ್ರಕ್ರಿಯೆಯ ಸಮಯದಲ್ಲಿ, ಆಕೆಯ ಮನೆಯ ಸಮೀಕ್ಷೆಯ ಅಗತ್ಯವಿತ್ತು. ಫೆಬ್ರವರಿ 2017 ರಲ್ಲಿ, ಸಿಇಒ ದಾಖಲೆಗಳನ್ನು ಪರಿಶೀಲಿಸಲು ಅವರ ಮನೆಗೆ ಭೇಟಿ ನೀಡಿದಾಗ, ಮಹಿಳೆ ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದುವಂತೆ ಒತ್ತಾಯಿಸಿದಳು ಎಂದು ಎಫ್‌ಐಆರ್ ಉಲ್ಲೇಖಿಸಿಲಾಗಿದೆ. ನಂತರ ಮಾಸಿಕ 7,300 ರೂ.ಗಳ ಇಎಂಐ ಸಹಿತ 3 ಲಕ್ಷ ರೂ.ಸಾಲ ಮಂಜೂರಾಗಿದೆ.

ಒಂದು ತಿಂಗಳ ನಂತರ, ಮಹಿಳೆ 8 ಕೋಟಿ ರೂಪಾಯಿ ಪಾವತಿಸದಿದ್ದರೆ, ನಿನ್ನ ಕುಟುಂಬ ಮತ್ತು ಸಹೋದ್ಯೋಗಿಗಳಿಗೆ ವಾಟ್ಸಾಪ್‌ನಲ್ಲಿ ನಿನ್ನ ನಗ್ನ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುತ್ತಾ ವ್ಯಕ್ತಿಯನ್ನು ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದ್ದಾಳೆ. ಆರಂಭದಲ್ಲಿ ಒತ್ತಡಕ್ಕೆ ಮಣಿದು ಸಿಇಒ ಆಕೆಗೆ 5 ಲಕ್ಷ ರೂ ಪಾವತಿಸದ್ದಾನೆ. 2017 ರಿಂದ 2023 ರ ನಡುವೆ ಅವರು 108 ಕಂತುಗಳಲ್ಲಿ ಒಟ್ಟು 4.39 ಕೋಟಿ ರೂ.ಗಳನ್ನು ಪಾವತಿಸಿದ್ದಾನೆ.

ಇದನ್ನೂ ಓದಿ: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಬಹು ಮಹಡಿಯ ಕಟ್ಟಡದ ಮೇಲೆ ಯುವತಿಯ ಸ್ಟಂಟ್​​

ಇಷ್ಟು ದೊಡ್ಡ ಮೊತ್ತವನ್ನು ಪಡೆದರೂ, ಮಹಿಳೆ ತನ್ನ ಬೇಡಿಕೆಗಳನ್ನು ಮುಂದುವರೆಸಿದ್ದಳು. ಇದರಿಂದ ಬೇಸತ್ತ ಆತ ಪೊಲೀಸ್​​ ಠಾಣೆಯಲ್ಲಿ ಮಹಿಳೆಯ ವಿರುದ್ದ ಕೇಸು ದಾಖಲಿಸಿದ್ದಾನೆ. ಬಲೆ ಬೀಸಿದ ಪೊಲೀಸರು ಮಂಗಳವಾರ ಆಕೆಯನ್ನು ಬಂಧಿಸಿದ್ದಾರೆ.

ಸುಲಿಗೆ ಮಾಡಿದ ಹಣವನ್ನು ಎಲ್ಲಿ ಹೂಡಿಕೆ ಮಾಡಲಾಗಿದೆ ಅಥವಾ ಮಹಿಳೆ ಯಾವುದೇ ಆಸ್ತಿಯನ್ನು ಖರೀದಿಸಿದ್ದಾರೆಯೇ ಎಂಬುದನ್ನು ನಿರ್ಧರಿಸಲು ಹಣದ ಜಾಡು ಹಿಡಿಯುವುದು ಸೇರಿದಂತೆ ಪೊಲೀಸರು ಈಗ ವಿವರವಾದ ತನಿಖೆ ನಡೆಸುತ್ತಿದ್ದಾರೆ. ಸುಲಿಗೆ ಯೋಜನೆಯಲ್ಲಿ ಬೇರೆ ಯಾರಾದರೂ ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆಯೂ ಶೋಧ ನಡೆಸುತ್ತಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Sat, 22 June 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು