Viral Photo: ಕೈಗಾಡಿಯಲ್ಲಿ ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ವೃದ್ಧ; ಚಿಕಿತ್ಸೆ ವೇಳೆ ವೃದ್ಧೆ ಸಾವು

ಚಿಲ್ಖರ್ ಬ್ಲಾಕ್‌ನ ಗ್ರಾಮದ ನಿವಾಸಿ 58 ವರ್ಷದ ಸಕುಲ್ ಪ್ರಜಾಪತಿ ತನ್ನ ಅನಾರೋಗ್ಯದಿಂದ ಬಳಲುತ್ತಿರುವ 55 ವರ್ಷದ ಪತ್ನಿ ಜೋಗ್ನಿಯನ್ನು ಕೈಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆ ಫೋಟೋ ಭಾರೀ ವೈರಲ್ ಆಗಿದೆ.

Viral Photo: ಕೈಗಾಡಿಯಲ್ಲಿ ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ವೃದ್ಧ; ಚಿಕಿತ್ಸೆ ವೇಳೆ ವೃದ್ಧೆ ಸಾವು
ಹೆಂಡತಿಯನ್ನು ಕೈಗಾಡಿಯಲ್ಲಿ ಎಳೆದೊಯ್ಯುತ್ತಿರುವ ವೃದ್ಧ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 06, 2022 | 5:17 PM

ಬಲ್ಲಿಯಾ: ಉತ್ತರ ಪ್ರದೇಶದ (Uttar Pradesh) ಬಲ್ಲಿಯಾ ಜಿಲ್ಲೆಯಲ್ಲಿ ವೃದ್ಧರೊಬ್ಬರು ಅನಾರೋಗ್ಯಕ್ಕೊಳಗಾಗಿದ್ದ ಹೆಂಡತಿಯನ್ನು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಎಳೆದುಕೊಂಡು ಹೋಗುತ್ತಿರುವ ಹೃದಯವಿದ್ರಾವಕ ಫೋಟೋ ವೈರಲ್ (Viral Photo) ಆಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಸೂಚಿಸಿದ್ದಾರೆ. ಬಲ್ಲಿಯಾ ಜಿಲ್ಲೆಯ ಅಂದೂರು ಗ್ರಾಮದಲ್ಲಿ ಮಾರ್ಚ್ 28ರಂದು ಈ ಘಟನೆ ನಡೆದಿದೆ. ಆರೋಗ್ಯ ಸಚಿವಾಲಯದ ಖಾತೆಯನ್ನು ಹೊಂದಿರುವ ಬ್ರಜೇಶ್ ಪಾಠಕ್ ಅವರು ಟ್ವೀಟ್ ಮಾಡಿದ್ದಾರೆ. ಬಲ್ಲಿಯಾದಲ್ಲಿ ವೃದ್ಧರೊಬ್ಬರು ರೋಗಿಯನ್ನು ಕೈಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದನ್ನು ನೋಡಬಹುದು. ಈ ಬಗ್ಗೆ ಮಾಹಿತಿ ಪಡೆದ ನಂತರ ವೈರಲ್ ಆಗಿರುವ ವಿಡಿಯೋದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಮಹಾನಿರ್ದೇಶಕರನ್ನು ಕೇಳಲಾಗಿದೆ ಎಂದಿದ್ದಾರೆ.

ಈ ಫೋಟೋದಲ್ಲಿ ಚಿಲ್ಖರ್ ಬ್ಲಾಕ್‌ನ ಗ್ರಾಮದ ನಿವಾಸಿ 58 ವರ್ಷದ ಸಕುಲ್ ಪ್ರಜಾಪತಿ ತನ್ನ ಅನಾರೋಗ್ಯದಿಂದ ಬಳಲುತ್ತಿರುವ 55 ವರ್ಷದ ಪತ್ನಿ ಜೋಗ್ನಿಯನ್ನು ಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಸಕುಲ್ ಪ್ರಜಾಪತಿ ತನ್ನ ಹೆಂಡತಿಯನ್ನು ತನ್ನ ಮನೆಯಿಂದ 3 ಕಿ.ಮೀ ದೂರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕೈಗಾಡಿಯಲ್ಲಿ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿನ ವೈದ್ಯರು ಕೆಲವು ಔಷಧಿಗಳನ್ನು ನೀಡಿ ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಹೇಳಿದ್ದಾರೆ. ನಂತರ ಆ ವೃದ್ಧ ಕೈಗಾಡಿಯಲ್ಲಿಯೇ ತನ್ನ ಹೆಂಡತಿಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಅವರ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ 11 ಗಂಟೆ ಸುಮಾರಿಗೆ ಸಾವು ಸಂಭವಿಸಿದೆ ಎಂದು ಪ್ರಜಾಪತಿ ಹೇಳಿದ್ದಾರೆ. ಆ ಶವವನ್ನು ವೃದ್ಧನ ಮನೆಗೆ ಕೊಂಡೊಯ್ಯಲು ಆಸ್ಪ್ರೆಯಲ್ಲಿ ನಿರಾಕರಿಸಲಾಯಿತು. ನಂತರ 1,100 ರೂ.ಗೆ ಖಾಸಗಿ ಆಂಬ್ಯುಲೆನ್ಸ್ ಬಾಡಿಗೆಗೆ ಪಡೆದು, ಶವವನ್ನು ತೆಗೆದುಕೊಂಡು ಹೋಗಲಾಯಿತು. ಈ ಬಗ್ಗೆ ತನಿಖೆ ನಡೆಸುವಂತೆ ವೈದ್ಯಕೀಯ ಮತ್ತು ಆರೋಗ್ಯ ಮಹಾನಿರ್ದೇಶಕರಿಗೆ ಉಪಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ನೀರಜ್ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: Viral Photo: ರಾಜಸ್ಥಾನ ಹಿಂಸಾಚಾರ; ಸುಡುವ ಕಟ್ಟಡದಿಂದ ಜೀವದ ಹಂಗು ತೊರೆದು ಮಗುವನ್ನು ಕಾಪಾಡಿದ ಪೊಲೀಸ್

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್