Viral Post: ಭಾರತೀಯ ನೋಟುಗಳ ಮೇಲೆ ಮುದ್ರಿತವಾದ ಐತಿಹಾಸಿಕ ಸ್ಥಳಗಳ ಬಗ್ಗೆ ನಿಮಗೆಷ್ಟು ಗೊತ್ತಾ?

ಭಾರತೀಯ ಕರೆನ್ಸಿ ನೋಟುಗಳು ವಿನಿಮಯದ ಮಾಧ್ಯಮ ಮಾತ್ರವಲ್ಲದೆ ಅವುಗಳ ಮೇಲೆ ಮುದ್ರಿತವಾಗಿರುವ ಐತಿಹಾಸಿಕ ಸ್ಮಾರಕಗಳ ಮೂಲಕ ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುತ್ತವೆ. ಈ ನೋಟುಗಳ ಮೇಲಿನ ಐತಿಹಾಸಿಕ ಸ್ಥಳಗಳನ್ನು ಅನ್ವೇಷಿಸುವ ಪೋಸ್ಟ್ ಒಂದನ್ನು ಟ್ವಿಟರ್ ಬಳಕೆದಾರರೊಬ್ಬರು ಹಂಚಿಕೊಂಡಿದ್ದು, ಇದೀಗ ವೈರಲ್ ಆಗಿದೆ.

Viral Post: ಭಾರತೀಯ ನೋಟುಗಳ ಮೇಲೆ ಮುದ್ರಿತವಾದ ಐತಿಹಾಸಿಕ ಸ್ಥಳಗಳ ಬಗ್ಗೆ ನಿಮಗೆಷ್ಟು ಗೊತ್ತಾ?
ವೈರಲ್​​ ಫೋಟೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:May 01, 2023 | 6:27 PM

ಭಾರತೀಯ  ನೋಟುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ನೋಟುಗಳಲ್ಲಿ ಪ್ರದರ್ಶಿಸಲಾದ ನಮ್ಮ ದೇಶದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯ ನೋಟವನ್ನು ಕಾಣಬಹುದು. ಭಾರತೀಯ ಕರೆನ್ಸಿ ನೋಟುಗಳಲ್ಲಿ ಮುದ್ರಿಸಲಾದ ಐತಿಹಾಸಿಕ ಸ್ಥಳಗಳು ಮತ್ತು ಘಟನೆಗಳನ್ನು ಒಳಗೊಂಡಿರುವ ಟ್ವಿಟರ್ ಪೋಸ್ಟ್ ವೈರಲ್ ಆಗುತ್ತಿದೆ. 10 ರೂಪಾಯಿ ನೋಟಿನಿಂದ ಹಿಡಿದು 2000 ರೂಪಾಯಿ ನೋಟಿನ ವರೆಗೆ ಆಯಾ ನೋಟಿನಲ್ಲಿರುವ ಐತಿಹಾಸಿಕ ಸ್ಥಳಗಳಿಗೆ ಹೋಗಿ ಆಯಾ ನೋಟನ್ನು ಆ ಐತಿಹಾಸಿಕ ಸ್ಥಳಗಳ ಮುಂದೆ ಹಿಡಿದು ಕ್ಲಿಕ್ಕಿಸಿದ ಫೋಟೊಗಳನ್ನು ಹಂಚಿಕೊಳ್ಳಲಾಗಿದೆ.

ಟ್ವಿಟರ್​​ನಲ್ಲಿ ದೇಸಿ ಥಗ್ (@desi_thug1) ಎಂಬ ಖಾತೆಯಲ್ಲಿ ‘ಭಾರತೀಯ ಕರೆನ್ಸಿ ನೋಟುಗಳಲ್ಲಿ ಮುದ್ರಿತ ಐತಿಹಾಸಿಕ ಸ್ಮಾರಕಗಳು ಮತ್ತು ಘಟನೆಗಳು’ ಎಂಬ ಶೀರ್ಷಿಕೆಯಡಿಯಲ್ಲಿ ಈ ವೈರಲ್ ಪೋಸ್ಟ್ ನ್ನು ಹಂಚಿಕೊಳ್ಳಲಾಗಿದೆ.

ಈ ಪೋಸ್ಟ್ ಮೊದಲಿಗೆ ಒಡಿಶಾದ ಕೋನಾರ್ಕ್ ಸೂರ್ಯ ದೇವಾಲಯದ 10 ರೂಪಾಯಿ ನೋಟಿನ ಚಿತ್ರದೊಂದಿಗೆ ಪ್ರಾರಂಭವಾಗುತ್ತದೆ. ಕೈಲಾಸ ದೇವಾಲಯವನ್ನು ಒಳಗೊಂಡಿರುವ 20 ರೂಪಾಯಿ ನೋಟು: ಎಲ್ಲೋರಾದ 13ನೇ ಶತಮಾನದ ಈ ದೇವಾಲಯವು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ ಮತ್ತು ಈ ದೇವಾಲಯವನ್ನು ಮೇಲಿನಿಂದ ಕೆಳಗೆ ನಿರ್ಮಿಸಲಾಗಿದೆ.

ಇದನ್ನೂ ಓದಿ: Viral Video: ಮೊದಲ ಹೆಜ್ಜೆ ಇಡಲು ಹರಸಾಹಸ ಪಡುತ್ತಿರುವ ಜಿರಾಫೆ

ಹಂಪಿಯ ಕಲ್ಲಿನ ರಥದ ಚಿತ್ರವನ್ನೊಳಗೊಂಡಿರುವ 50 ರೂ: ಹಂಪಿಯು ಯುನೆಸ್ಕೋ ಪರಂಪರೆಯ ತಾಣವಾಗಿದೆ 50 ರೂಪಾಯಿ ನೋಟಿನಲ್ಲಿ ಹಂಪಿಯ ಕಲ್ಲಿನ ರಥದ ಚಿತ್ರವನ್ನು ಮುದ್ರಿಸಲಾಗಿದೆ. ರಾಣಿ ಕಿ ವಾವ್ ಚಿತ್ರವನ್ನೊಳಗೊಂಡ 100 ರೂಪಾಯಿ ನೋಟು: ಗುಜರಾತ್​​​ನಲ್ಲಿರುವ ರಾಣಿ ಕಿ ವಾವ್ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ. 100 ರೂ. ನೋಟಿನಲ್ಲಿ ಈ ಸ್ಥಳದ ಚಿತ್ರವನ್ನು ಮುದ್ರಿಸಲಾಗಿದೆ.

ಸಾಂಚಿ ಸ್ತೂಪದ ಚಿತ್ರವನ್ನೊಳಗೊಂಡ 200 ರೂ. ನೋಟು: ಟ್ವಿಟರ್ ಬಳಕೆದಾರರು ನಂತರ ಸಾಂಚಿ ಸ್ತೂಪದ ಬಳಿ ವ್ಯಕ್ತಿಯೊಬ್ಬರು ಕೈಯಲ್ಲಿ 200 ರೂ ನೋಟನ್ನು ಹಿಡಿದಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಕೆಂಪುಕೋಟೆಯ ಚಿತ್ರವನ್ನೊಳಗೊಂಡ 500 ರೂ. ನೋಟು: ದೆಹಲಿಯ ಕೆಂಪುಕೋಟೆಯ ಚಿತ್ರವನ್ನು 500ರೂ. ನೋಟಿನಲ್ಲಿ ಮುದ್ರಿಸಲಾಗಿದೆ. 2000 ರೂ ನೋಟು: ಈ ನೋಟಿನಲ್ಲಿ ಯಾವುದೇ ಸ್ಮಾರಕವಿಲ್ಲ. ಬದಲಾಗಿ ಭಾರತದ ಮೊದಲ ಯಶಸ್ವಿ ಮಂಗಳಯಾನದ ಚಿತ್ರವನ್ನು ಮುದ್ರಿಸಲಾಗಿದೆ.

ಏಪ್ರಿಲ್ 28 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 1.7 ಮಿಲಿಯನ್ ವೀಕ್ಷಣೆಗಳನ್ನು ಮತ್ತು 22 ಸಾವಿರಕ್ಕಿಂತಲೂ ಹೆಚ್ಚಿನ ಲೈಕ್ಸ್ ಪಡೆದುಕೊಂಡಿದೆ. ಅನೇಕರು ಈ ಪೋಸ್ಟ್​​ಗೆ ಕಮೆಂಟ್​​ಗಳನ್ನು ಮಾಡಿದ್ದಾರೆ. ಒಬ್ಬ ಬಳಕೆದಾರರು ‘ಎಷ್ಟು ಆಕರ್ಷಕವಾಗಿದೆಯಲ್ಲವೇ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಅತ್ಯುತ್ತಮ ಮಾಹಿತಿ’ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಚಿತ್ರಗಳನ್ನು ಸೆರೆಹಿಡಿದ ರೀತಿ ಇಷ್ಟವಾಯಿತು’ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:27 pm, Mon, 1 May 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್