AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರಿನಲ್ಲಿದೆ ನಿಮ್ಮ ಮಾಜಿ ಪ್ರೇಯಸಿಯನ್ನು ನೆನಪಿಸುವ ಚಾಟ್ ಸೆಂಟರ್; ವೈರಲ್​​​ ಬೋರ್ಡ್​​​​

ಬೆಂಗಳೂರಿನ ಚಾಟ್ಸ್​​​​ ಅಂಗಡಿಯೊಂದು ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದೆ. ಈ ಅಂಗಡಿಯ ಬೋರ್ಡ್​​​​ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. 'ಎಕ್ಸ್​​​​ ಗರ್ಲ್‌ಫ್ರೆಂಡ್ ಚಾಟ್ ಸೆಂಟರ್' ಎಂಬ ಹೆಸರಿನಿಂದಲೇ ಆಹಾರ ಪ್ರಿಯರನ್ನು ತನ್ನತ್ತ ಸೆಳೆಯುತ್ತಿದೆ ಈ ಅಂಗಡಿ. ವೈರಲ್​​​ ಪೋಸ್ಟ್​​​ ಇಲ್ಲಿದೆ ನೋಡಿ.

Viral: ಬೆಂಗಳೂರಿನಲ್ಲಿದೆ ನಿಮ್ಮ ಮಾಜಿ ಪ್ರೇಯಸಿಯನ್ನು ನೆನಪಿಸುವ ಚಾಟ್ ಸೆಂಟರ್; ವೈರಲ್​​​ ಬೋರ್ಡ್​​​​
Ex-Girlfriend Chaat CentreImage Credit source: Twitter
ಅಕ್ಷತಾ ವರ್ಕಾಡಿ
|

Updated on: Feb 01, 2024 | 5:59 PM

Share

ಇಂದಿನ ಕಾಲಮಾನದಲ್ಲಿ ಯಾವುದೇ ಬಿಸಿನೆಸ್​​​​​​ ಪ್ರಾರಂಭಿಸಿ ಲಾಭ ಗಳಿಸುವುದು ಅಷ್ಟು ಸುಲಭವಲ್ಲ. ಆಹಾರದ ಗುಣಮಟ್ಟ ಹಾಗೂ ಸ್ಥಳೀಯತೆಯನ್ನು ಹೊರತುಪಡಿಸಿ ಕ್ರಿಯಾತ್ಮಕ ಆಲೋಚನೆಗಳೊಂದಿಗೆ  ಜನರನ್ನು ತಮ್ಮತ್ತ ಸೆಳೆಯುವುದು ಅಗತ್ಯವಾಗಿರುತ್ತದೆ.  ಇದೀಗಾ ವಿಭಿನ್ನ ರೀತಿಯ ಹೆಸರಿನಿಂದಲೇ  ಬೆಂಗಳೂರಿನ ಆರ್​​ ಟಿ ನಗರದ ಸಣ್ಣ ಚಾಟ್ಸ್​​​​ ಅಂಗಡಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿಯಲ್ಲಿದೆ. ಅಂಗಡಿಗೆ ‘ಎಕ್ಸ್​​​​ ಗರ್ಲ್‌ಫ್ರೆಂಡ್ ಚಾಟ್ ಸೆಂಟರ್’ ಎಂಬ ಹೆಸರನ್ನು ಇಡಲಾಗಿದ್ದು, ಈ ಅಂಗಡಿಯ ಬೋರ್ಡ್​​​​ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಚಾಟ್ ಸೆಂಟರ್​​​ನ ಬೋರ್ಡನ್ನು @dankchikidang ಎಂಬ ಟ್ವಿಟರ್​​ ಬಳಕೆದಾರರು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದು, ಇದೀಗಾಗಲೇ ಲಕ್ಷಾಂತರ ನೆಟ್ಟಿಗರನ್ನು ತಲುಪಿದೆ. ಜನವರಿ 29ರಂದು ಪೋಸ್ಟ್ ಹಂಚಿಕೊಳ್ಳಲಾಗಿದೆ. ರೆಸ್ಟೋರೆಂಟ್‌ನ ಹೆಸರನ್ನು ಓದಿದ ನಂತರ, ಜನರು ವಿವಿಧ ರೀತಿಯ ಕಾಮೆಂಟ್‌ಗಳನ್ನು ನೀಡುವ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್

‘ಎಕ್ಸ್​​​​ ಗರ್ಲ್‌ಫ್ರೆಂಡ್ ಚಾಟ್ ಸೆಂಟರ್’ ವೈರಲ್​​ ಪೋಸ್ಟ್​​​ ಇಲ್ಲಿದೆ ನೋಡಿ:

ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಬಳಕೆದಾರರು, ‘ಯಾರೂ ತಮ್ಮ ಗೆಳತಿಯೊಂದಿಗೆ ಇಲ್ಲಿಗೆ ಹೋಗಲು ಇಷ್ಟಪಡಲ್ಲ’ ಎಂದು ಬರೆದಿದ್ದಾರೆ. ಇನ್ನೊಬ್ಬ ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬರು ‘ಈ ಬೋರ್ಡ್​​​ ನನ್ನ ಮಾಜಿ ಪ್ರೇಯಸಿಯನ್ನೇ ನೆನಪಿಸಿತು’ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು