AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ

"ಇತ್ತೀಚೆಗಷ್ಟೇ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ವ್ಯಕ್ತಿಯೊಬ್ಬ ಈ ಡೆಂಟಲ್​​ ಕ್ಲಿನಿಕ್​​​ನಲ್ಲಿ ಸಾವನ್ನಪ್ಪಿರುವ ಘಟನೆ ಅಘಾತವನ್ನುಂಟು ಮಾಡಿದೆ. ಆದರೆ ಇಲ್ಲಿನ ದಂತ ವೈದ್ಯರ ನಿರ್ಲಕ್ಷ್ಯಗಳು ಇದೇ ಮೊದಲೇನಲ್ಲಾ ಈ ಹಿಂದೆಯೂ ಕೂಡ ಇಂತದ್ದೇ ಘಟನೆ ನಡೆದಿದೆ " ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

Viral Post: ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ
ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯImage Credit source: Twitter
ಅಕ್ಷತಾ ವರ್ಕಾಡಿ
|

Updated on: Feb 23, 2024 | 6:12 PM

Share

ಹೈದರಾಬಾದ್‌: ಕೆಲ ದಿನಗಳ ಹಿಂದೆಯಷ್ಟೇ ಜುಬಿಲಿ ಹಿಲ್ಸ್‌ನಲ್ಲಿರುವ ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿಯೊರ್ವನಿಗೆ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ನೀಡಲಾಗಿದ್ದ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ವೈರಲ್​​ ಆಗಿತ್ತು. ಇದೀಗಾ ಇದಕ್ಕೆ ಪೂರಕ ಎಂಬಂತೆ ಇದೇ ಡೆಂಟಲ್​​​ ಆಸ್ಪತ್ರೆಯಲ್ಲಿ ನಡೆದಿದ್ದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯರೊಬ್ಬರು ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿ ಕಳುಹಿಸಿದ್ದಾರೆ. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಇದೀಗಾ @sowmya_sangam ಎಂಬ ಟ್ವಿಟರ್​​ ಬಳಕೆದಾರರು ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ತನ್ನ ಗೆಳತಿಗಾದ ಅನ್ಯಾಯವನ್ನು ಪೋಸ್ಟ್​ ಮೂಲಕ ಹಂಚಿಕೊಂಡಿದ್ದಾರೆ. “ಇತ್ತೀಚೆಗಷ್ಟೇ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ವ್ಯಕ್ತಿಯೊಬ್ಬ ಈ ಡೆಂಟಲ್​​ ಕ್ಲಿನಿಕ್​​​ನಲ್ಲಿ ಸಾವನ್ನಪ್ಪಿರುವ ಘಟನೆ ಅಘಾತವನ್ನುಂಟು ಮಾಡಿದೆ. ಆದರೆ ಇಲ್ಲಿನ ದಂತ ವೈದ್ಯರ ನಿರ್ಲಕ್ಷ್ಯಗಳು ಇದೇ ಮೊದಲೇನಲ್ಲಾ ಈ ಹಿಂದೆಯೂ ಕೂಡ ಇಂತದ್ದೇ ಘಟನೆ ನಡೆದಿದೆ. ತನ್ನ ಗೆಳತಿಯೊಬ್ಬರು ಇಲ್ಲಿ ಹಲ್ಲಿನ ಚಿಕಿತ್ಸೆಗೆಂದು ಹೋದಾಗ ಚಿಕಿತ್ಸೆಯ ಸಮಯದಲ್ಲಿ ಡೆಂಟಲ್​​​ ಬ್ಲೆಡ್​ನಿಂದ ಆಕೆಯ ತುಟಿಗಳನ್ನೇ ಕತ್ತರಿಸಿದ್ದಾರೆ” ಎಂದು ಪೋಸ್ಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​​​ ಇಲ್ಲಿದೆ ನೋಡಿ:

ಇದನ್ನೂ ಓದಿ: ‘Smile Designing’ Surgery: ಹಲ್ಲಿನ ಚಂದ ಹೆಚ್ಚಿಸಲು ಹೋಗಿ ಸಾವನ್ನಪ್ಪಿದ ಮದುಮಗ

ಈ ಪೋಸ್ಟ್​​​ ವೈರಲ್​​ ಆಗುತ್ತಿದ್ದು, ಸಾಕಷ್ಟು ನೆಟ್ಟಿಗರು ಕ್ಲಿನಿಕ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಿಮಗಾದ ಅನ್ಯಾಯದ ವಿರುದ್ಧ ಆ ಡೆಂಟಲ್​ ಕ್ಲಿನಿಕ್​​ ವಿರುದ್ಧ ಕೋರ್ಟ್​​ನಲ್ಲಿ ಕೇಸು ದಾಖಲಿಸಿ” ಎಂದು ಸಾಕಷ್ಟು ನೆಟ್ಟಿಗರು ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ