Viral Video: ಸರ್ಕಾರಿ ಶಾಲೆಯಲ್ಲಿ ಒಂದೇ ಬೋರ್ಡ್​ ಮೇಲೆ 2 ಭಾಷೆ ಕಲಿಸುತ್ತಿರುವ ಶಿಕ್ಷಕರ ವಿಡಿಯೋ ವೈರಲ್

ಸರ್ಕಾರಿ ಶಾಲೆಯಲ್ಲಿ ಹಿಂದಿ ಮತ್ತು ಉರ್ದು ಭಾಷೆಗಳನ್ನು ಕಲಿಸಲು ಇಬ್ಬರು ಶಿಕ್ಷಕರು ಒಂದೇ ಕಪ್ಪು ಹಲಗೆಯನ್ನು (ಬ್ಲಾಕ್​ ಬೋರ್ಡ್​) ಹಂಚಿಕೊಳ್ಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ

Viral Video: ಸರ್ಕಾರಿ ಶಾಲೆಯಲ್ಲಿ ಒಂದೇ ಬೋರ್ಡ್​ ಮೇಲೆ 2 ಭಾಷೆ ಕಲಿಸುತ್ತಿರುವ ಶಿಕ್ಷಕರ ವಿಡಿಯೋ ವೈರಲ್
ಒಂದೇ ಕ್ಲಾಸ್​ರೂಂನಲ್ಲಿ ಹಿಂದಿ, ಉರ್ದು ಭಾಷೆ ಪಾಠ ಮಾಡುತ್ತಿರುವ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:May 17, 2022 | 1:41 PM

ಕತಿಹಾರ್: ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ಹೆಚ್ಚು ಒಲವು ತೋರಿಸುತ್ತಿರುವ ಪೋಷಕರು ಸರ್ಕಾರಿ ಶಾಲೆಗಳ (Government Schools) ಬಗ್ಗೆ ತಿರಸ್ಕಾರದ ಭಾವನೆ ಹೊಂದಿರುವುದು ಹೊಸ ವಿಷಯವೇನಲ್ಲ. ಮಕ್ಕಳು ಸರ್ಕಾರಿ ಶಾಲೆಗಳಿಗೆ ಬರುವುದಿಲ್ಲ ಎಂಬ ನೆಪವೊಡ್ಡಿ ಅದೆಷ್ಟೋ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಆದರೆ, ಸಾಕಷ್ಟು ಸವಾಲುಗಳ ಮಧ್ಯೆಯೂ ಕೆಲವೊಂದು ಸರ್ಕಾರಿ ಶಾಲೆಗಳು ಇನ್ನೂ ನಡೆಯುತ್ತಿವೆ. ಬಿಹಾರದ (Bihar) ಸರ್ಕಾರಿ ಶಾಲೆಯೊಂದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಸರ್ಕಾರಿ ಶಾಲೆಯಲ್ಲಿ ಎರಡು ವಿಭಿನ್ನ ಭಾಷೆಗಳನ್ನು ಕಲಿಸಲು ಇಬ್ಬರು ಶಿಕ್ಷಕರು ಒಂದೇ ಕಪ್ಪು ಹಲಗೆಯನ್ನು (ಬ್ಲಾಕ್​ ಬೋರ್ಡ್​) ಹಂಚಿಕೊಳ್ಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಿಂದಿ ಮತ್ತು ಉರ್ದು ಭಾಷೆಯನ್ನು ಕಲಿಸುವ ಇಬ್ಬರು ಟೀಚರ್​ಗಳು ಒಂದೇ ಕೊಠಡಿಯಲ್ಲಿ ತಮ್ಮ ವಿದ್ಯಾರ್ಥಿಗಳನ್ನು ಕೂರಿಸಿಕೊಂಡು, ಒಂದೇ ಬೋರ್ಡ್​ ಮೇಲೆ ಎರಡು ಭಾಗವಾಗಿ ಮಾಡಿಕೊಂಡು ತಮ್ಮ ವಿಷಯದ ಪಾಠ ಮಾಡುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಇದನ್ನೂ ಓದಿ
Image
Viral Video: ಸೌತೆಕಾಯಿ ಕಟ್ ಮಾಡಿ ಟ್ರೋಲ್ ಆದ ಮಾಡೆಲ್; ಈ ವಿಡಿಯೋ ಮಿಸ್ ಮಾಡಬೇಡಿ
Image
ಪಟಾಕಿ ಶಬ್ದಕ್ಕೆ ಬೆಚ್ಚಿ ವರನನ್ನೇ ಹೊತ್ತು ಓಡಿದ ಕುದುರೆ; ಮುಂದೇನಾಯ್ತು? ಇಲ್ಲಿದೆ ವೈರಲ್ ವಿಡಿಯೋ
Image
Viral News: ಬರೋಬ್ಬರಿ 30 ವರ್ಷ ಗಂಡಿನ ವೇಷದಲ್ಲಿ ಬದುಕಿದ ತಮಿಳುನಾಡಿನ ಮಹಿಳೆ!; ಕಾರಣವೇನು ಗೊತ್ತಾ?
Image
Viral News: 1 ವರ್ಷದೊಳಗೆ ಮೊಮ್ಮಗುವನ್ನು ಕೊಡದಿದ್ದರೆ 5 ಕೋಟಿ ಪರಿಹಾರ ಕೊಡಬೇಕು; ಮಗ-ಸೊಸೆ ವಿರುದ್ಧವೇ ದೂರು ನೀಡಿದ ದಂಪತಿ!

ಬಿಹಾರದ ಕತಿಹಾರ್‌ನ ಆದರ್ಶ್ ಮಿಡಲ್ ಸ್ಕೂಲ್‌ನ ಸದ್ಯದ ಪರಿಸ್ಥಿತಿಯನ್ನು ಈ ವಿಡಿಯೋ ಬಿಚ್ಚಿಟ್ಟಿದೆ. ಈ ವಿಡಿಯೋದಲ್ಲಿ ಇಬ್ಬರು ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಹಿಂದಿ ಮತ್ತು ಉರ್ದು ಭಾಷೆಯನ್ನು ಕಲಿಸಲು ಒಂದೇ ಕಪ್ಪು ಹಲಗೆಯನ್ನು ಬಳಸುತ್ತಿರುವುದನ್ನು ಚಿತ್ರಿಸಲಾಗಿದೆ.

ಉರ್ದು ಪ್ರಾಥಮಿಕ ಶಾಲೆಯನ್ನು ಶಿಕ್ಷಣ ಇಲಾಖೆಯು 2017ರಲ್ಲಿ ನಮ್ಮ ಶಾಲೆಗೆ ಸ್ಥಳಾಂತರಿಸಿದೆ. ನಮ್ಮ ಶಾಲೆಯಲ್ಲಿ ಸಾಕಷ್ಟು ತರಗತಿ ಕೊಠಡಿಗಳಿಲ್ಲ. ಹೀಗಾಗಿ, ಒಂದೇ ಕೊಠಡಿಯಲ್ಲಿ ನಾವು ವಿದ್ಯಾರ್ಥಿಗಳಿಗೆ ಎರಡೂ ಭಾಷೆಯನ್ನು ಕಲಿಸುತ್ತಿದ್ದೇವೆ ಎಂದು ಆದರ್ಶ ಮಧ್ಯಮ ಶಾಲೆಯ ಸಹಾಯಕ ಶಿಕ್ಷಕಿ ಕುಮಾರಿ ಪ್ರಿಯಾಂಕಾ ಹೇಳಿದ್ದಾರೆ.

ಈ ಶಾಲೆಯ ಸ್ಥಿತಿಗತಿಯ ಕುರಿತು ಪ್ರಶ್ನಿಸಿದಾಗ ಜಿಲ್ಲಾ ಶಿಕ್ಷಣಾಧಿಕಾರಿ ಕಾಮೇಶ್ವರ ಗುಪ್ತಾ, ಆದರ್ಶ ಮಾಧ್ಯಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾದರೆ ಉರ್ದು ಪ್ರಾಥಮಿಕ ಶಾಲೆಗೆ ಒಂದು ಕೊಠಡಿ ನೀಡಲಾಗುವುದು. ವಿವಿಧ ವರ್ಗದ ಮಕ್ಕಳಿಗೆ ಒಂದೇ ಕೊಠಡಿಯಲ್ಲಿ ಒಂದೇ ಕಪ್ಪು ಹಲಗೆಯ ಮೇಲೆ ಶಿಕ್ಷಣ ನೀಡುವುದು ಒಳ್ಳೆಯದಲ್ಲ ಎಂದು ಹೇಳಿದ್ದಾರೆ

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:39 pm, Tue, 17 May 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ