
ಕತಿಹಾರ್: ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ಹೆಚ್ಚು ಒಲವು ತೋರಿಸುತ್ತಿರುವ ಪೋಷಕರು ಸರ್ಕಾರಿ ಶಾಲೆಗಳ (Government Schools) ಬಗ್ಗೆ ತಿರಸ್ಕಾರದ ಭಾವನೆ ಹೊಂದಿರುವುದು ಹೊಸ ವಿಷಯವೇನಲ್ಲ. ಮಕ್ಕಳು ಸರ್ಕಾರಿ ಶಾಲೆಗಳಿಗೆ ಬರುವುದಿಲ್ಲ ಎಂಬ ನೆಪವೊಡ್ಡಿ ಅದೆಷ್ಟೋ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಆದರೆ, ಸಾಕಷ್ಟು ಸವಾಲುಗಳ ಮಧ್ಯೆಯೂ ಕೆಲವೊಂದು ಸರ್ಕಾರಿ ಶಾಲೆಗಳು ಇನ್ನೂ ನಡೆಯುತ್ತಿವೆ. ಬಿಹಾರದ (Bihar) ಸರ್ಕಾರಿ ಶಾಲೆಯೊಂದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಸರ್ಕಾರಿ ಶಾಲೆಯಲ್ಲಿ ಎರಡು ವಿಭಿನ್ನ ಭಾಷೆಗಳನ್ನು ಕಲಿಸಲು ಇಬ್ಬರು ಶಿಕ್ಷಕರು ಒಂದೇ ಕಪ್ಪು ಹಲಗೆಯನ್ನು (ಬ್ಲಾಕ್ ಬೋರ್ಡ್) ಹಂಚಿಕೊಳ್ಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಿಂದಿ ಮತ್ತು ಉರ್ದು ಭಾಷೆಯನ್ನು ಕಲಿಸುವ ಇಬ್ಬರು ಟೀಚರ್ಗಳು ಒಂದೇ ಕೊಠಡಿಯಲ್ಲಿ ತಮ್ಮ ವಿದ್ಯಾರ್ಥಿಗಳನ್ನು ಕೂರಿಸಿಕೊಂಡು, ಒಂದೇ ಬೋರ್ಡ್ ಮೇಲೆ ಎರಡು ಭಾಗವಾಗಿ ಮಾಡಿಕೊಂಡು ತಮ್ಮ ವಿಷಯದ ಪಾಠ ಮಾಡುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಬಿಹಾರದ ಕತಿಹಾರ್ನ ಆದರ್ಶ್ ಮಿಡಲ್ ಸ್ಕೂಲ್ನ ಸದ್ಯದ ಪರಿಸ್ಥಿತಿಯನ್ನು ಈ ವಿಡಿಯೋ ಬಿಚ್ಚಿಟ್ಟಿದೆ. ಈ ವಿಡಿಯೋದಲ್ಲಿ ಇಬ್ಬರು ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಹಿಂದಿ ಮತ್ತು ಉರ್ದು ಭಾಷೆಯನ್ನು ಕಲಿಸಲು ಒಂದೇ ಕಪ್ಪು ಹಲಗೆಯನ್ನು ಬಳಸುತ್ತಿರುವುದನ್ನು ಚಿತ್ರಿಸಲಾಗಿದೆ.
ಉರ್ದು ಪ್ರಾಥಮಿಕ ಶಾಲೆಯನ್ನು ಶಿಕ್ಷಣ ಇಲಾಖೆಯು 2017ರಲ್ಲಿ ನಮ್ಮ ಶಾಲೆಗೆ ಸ್ಥಳಾಂತರಿಸಿದೆ. ನಮ್ಮ ಶಾಲೆಯಲ್ಲಿ ಸಾಕಷ್ಟು ತರಗತಿ ಕೊಠಡಿಗಳಿಲ್ಲ. ಹೀಗಾಗಿ, ಒಂದೇ ಕೊಠಡಿಯಲ್ಲಿ ನಾವು ವಿದ್ಯಾರ್ಥಿಗಳಿಗೆ ಎರಡೂ ಭಾಷೆಯನ್ನು ಕಲಿಸುತ್ತಿದ್ದೇವೆ ಎಂದು ಆದರ್ಶ ಮಧ್ಯಮ ಶಾಲೆಯ ಸಹಾಯಕ ಶಿಕ್ಷಕಿ ಕುಮಾರಿ ಪ್ರಿಯಾಂಕಾ ಹೇಳಿದ್ದಾರೆ.
ಈ ಶಾಲೆಯ ಸ್ಥಿತಿಗತಿಯ ಕುರಿತು ಪ್ರಶ್ನಿಸಿದಾಗ ಜಿಲ್ಲಾ ಶಿಕ್ಷಣಾಧಿಕಾರಿ ಕಾಮೇಶ್ವರ ಗುಪ್ತಾ, ಆದರ್ಶ ಮಾಧ್ಯಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾದರೆ ಉರ್ದು ಪ್ರಾಥಮಿಕ ಶಾಲೆಗೆ ಒಂದು ಕೊಠಡಿ ನೀಡಲಾಗುವುದು. ವಿವಿಧ ವರ್ಗದ ಮಕ್ಕಳಿಗೆ ಒಂದೇ ಕೊಠಡಿಯಲ್ಲಿ ಒಂದೇ ಕಪ್ಪು ಹಲಗೆಯ ಮೇಲೆ ಶಿಕ್ಷಣ ನೀಡುವುದು ಒಳ್ಳೆಯದಲ್ಲ ಎಂದು ಹೇಳಿದ್ದಾರೆ
ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:39 pm, Tue, 17 May 22