AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎರಡು ಹುಲಿಗಳ ನಡುವಿನ ಭೀಕರ ಕಾಳಗ ಹೇಗಿದೆ ನೋಡಿ; ವಿಡಿಯೋ ವೈರಲ್​​

ಎರಡು ಹುಲಿಗಳ ನಡುವಿನ ಭೀಕರ ಕಾದಾಟದ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಈ ಕಾದಾಟದ ವಿಡಿಯೋ ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ಸೆರೆಯಾಗಿದೆ.

Viral Video: ಎರಡು ಹುಲಿಗಳ ನಡುವಿನ ಭೀಕರ ಕಾಳಗ ಹೇಗಿದೆ ನೋಡಿ; ವಿಡಿಯೋ ವೈರಲ್​​
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 31, 2024 | 11:06 AM

Share

ಎರಡು ಹುಲಿಗಳ ನಡುವಿನ ಭೀಕರ ಕಾದಾಟದ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಈ ಕಾದಾಟದ ವಿಡಿಯೋ ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್​​ ಮೀಡಿಯಾಗಳಲ್ಲಿ ವಿಡಿಯೋ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಸಿಂಹ ಅಥವಾ ಹುಲಿ ಆಕಸ್ಮಿಕವಾಗಿ ಮತ್ತೊಂದು ಸಿಂಹ ಅಥವಾ ಹುಲಿಯ ಪ್ರದೇಶವನ್ನು ಪ್ರವೇಶಿಸಿದರೆ, ಆಗ ಅವುಗಳ ನಡುವೆ ಕಾದಾಟ ಶುರುವಾಗುತ್ತದೆ. ಪ್ರಸ್ತುತ, ಅಂತಹದ್ದೇ ಒಂದು ವೀಡಿಯೊ ಇಲ್ಲಿದೆ ನೋಡಿ.

ವೈರಲ್​​ ಆಗುತ್ತಿರುವ ಈ ಭೀಕರ ಕಾದಾಟದ ವೀಡಿಯೊವನ್ನು @crazyclipsonly ಹೆಸರಿನ ಟ್ವಿಟ್ಟರ್‌ ಬಳಕೆದಾರರು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಕ್ಯಾಮೆಮ್ಯಾನ್‌ಗೂ ತನ್ನ ಕಣ್ಣುಗಳನ್ನು ನಂಬಲಾಗಲಿಲ್ಲ’ ಎಂದು ಶೀರ್ಷಿಕೆ ಬರೆಯಲಾಗಿದೆ. ಕೇವಲ 20 ಸೆಕೆಂಡ್‌ಗಳ ಈ ವೀಡಿಯೋವನ್ನು ಇದುವರೆಗೆ 20 ಮಿಲಿಯನ್ ಅಂದರೆ 2 ಕೋಟಿಗೂ ಹೆಚ್ಚು ಬಾರಿ ವೀಕ್ಷಿಸಲಾಗಿದ್ದು, 90 ಸಾವಿರಕ್ಕೂ ಹೆಚ್ಚು ಮಂದಿ ಈ ವಿಡಿಯೋವನ್ನು ಲೈಕ್ ಮಾಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ: 

ಇದನ್ನೂ ಓದಿ: ಈ ವೆಬ್​​ ಸೈಟ್​​ಗೆ ಭೇಟಿ ನೀಡಿ, ವಾರಕೊಮ್ಮೆ ಅತ್ತು ಬಿಡಿ, ಆರೋಗ್ಯಕ್ಕೂ ಒಳ್ಳೆಯದಂತೆ!

ಅದೇ ಸಮಯದಲ್ಲಿ, ವೀಡಿಯೊವನ್ನು ನೋಡಿದ ನೆಟ್ಟಿಗರು, ಜನರು ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ‘ಅಬ್ಬಾ, ಕ್ಯಾಮೆರಾದಲ್ಲಿ ಅದ್ಭುತವಾದ ಮತ್ತು ನಂಬಲಾಗದ ಕ್ಷಣವನ್ನು ಸೆರೆಹಿಡಿದಿದ್ದಾರೆ’ ಎಂದು ನೆಟ್ಟಿಗರೊಬ್ಬರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ