AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಓರ್ವ ಮಹಿಳೆ ಘನ ವಾಹನ ಲಾರಿಯನ್ನು ಬಿಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ

ಘನ ವಾಹನ ಲಾರಿಯನ್ನು ಮಹಿಳೆಯೊಬ್ಬರು ಚಲಾಯಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು ಅವಳ ಆತ್ಮವಿಶ್ವಾಸದ ಮಟ್ಟವು ತುಂಬಾ ಹೆಚ್ಚಾಗಿದೆ ಎಂದಿದ್ದಾರೆ. ಇನ್ನು ಕೆಲವರು ಸ್ಫೂರ್ತಿದಾಯಕ ಎಂದಿದ್ದಾರೆ.

Viral Video: ಓರ್ವ ಮಹಿಳೆ ಘನ ವಾಹನ ಲಾರಿಯನ್ನು ಬಿಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ
ಲಾರಿ ಚಲಾಯಿಸುತ್ತಿರುವ ಮಹಿಳೆ
TV9 Web
| Updated By: Rakesh Nayak Manchi|

Updated on:Jul 18, 2022 | 5:04 PM

Share

ಮಹಿಳೆ ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಳ್ಳಲು. ಕಾಲಬದಲಾಗುತ್ತಿದ್ದಂತೆ ಪುರುಷರಿಗಂತಲೇ ಸೀಮಿತವಾಗಿದ್ದ ಕ್ಷೇತ್ರಗಳಲ್ಲೆಲ್ಲಾ ಮಹಿಳೆಯರು ಬಂದು ಸಾಧನೆ ಮಾಡಲು ತೊಡಗಿದ್ದಾರೆ. ಮಹಿಳೆಯರು ಬೈಕ್, ಆಟೋವನ್ನು ಮಹಿಳೆಯರು ಬಿಡುವುದು ಸದ್ಯದ ಮಟ್ಟಿಗೆ ಸಾಮಾನ್ಯವಾಗಿವೆ. ಅದಾಗ್ಯೂ ರೈಲು, ಮೆಟ್ರೋ ರೈಲು, ಬಸ್ ಬಿಡುತ್ತಿರುವ, ವಿಮಾನ ಹಾರಾಟ ನಡೆಸಿದ ನಿದರ್ಶನಗಳು ನಮ್ಮ ಕಣ್ಣಮುಂದೆಯೇ ಇದೆ. ಇಷ್ಟು ಮಾತ್ರವಲ್ಲ, ಇದೀಗ ಘನ ವಾಹನ ಲಾರಿಯೊಂದನ್ನು ಮಹಿಳೆಯೊಬ್ಬಳು ಚಲಾಯಿಸುವ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ ಇರುವಂತೆ, ಟ್ರಕ್​ವೊಂದರಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು, ಹಿಂಬಂದಿಯಿಂದ ಬರುತ್ತಿದ್ದ ಘನ ಲಾರಿಯೊಂದರ ವಿಡಿಯೋ ಮಾಡಿದ್ದಾರೆ. ಈ ಲಾರಿಯಲ್ಲಿ ಚಾಲಕಿಯಾಗಿರುವುದು ಓರ್ವ ಮಹಿಳೆ ಎಂಬುದು ವಿಶೇಷ. ವಿಡಿಯೋ ಮಾಡುತ್ತಿರುವುದನ್ನ ನೋಡಿದ ಮಹಿಳಾ ಚಾಲಕಿ ನಗಾಡಿದ್ದಾರೆ. ಲಾರಿ ಚಾಲಿಸುತ್ತಿರುವಾಗ ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಏನೋ ಮಾತನಾಡಿದ್ದು ಅದಕ್ಕೆ ಮಹಿಳಾ ಚಾಲಕಿ ಅದಿನ್ನೇನೂ ಉತ್ತರವನ್ನು ನೀಡಿದ್ದಾರೆ. ವಿಡಿಯೋ ಕ್ಲಿಪ್​ಗೆ ಮ್ಯೂಸಿಕ್ ಹಾಕಿರುವುದರಿಂದ ಅವರ ಸಂಭಾಷಣೆ ಕೇಳಿಸುವುದಿಲ್ಲ.

ಭಾರತೀಯ ಆಡಳಿತ ಸೇವೆಗಳ (IAS) ಅಧಿಕಾರಿ ಅವನೀಶ್ ಶರಣ್ ಅವರು ಈ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಹೃದಯಸ್ಪರ್ಶಿ ವಿಡಿಯೋ ಇಂಟರ್ನೆಟ್​ನಲ್ಲಿ ವಿಸ್ಮಯ ಮೂಡಿಸಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬರು ಘನ ವಾಹನ ಚಲಾಯಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದು, ಅವನೀಶ್ ಹಂಚಿಕೊಂಡಿರುವ ವಿಡಿಯೋ 3.55 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ ಹಾಗೂ 18 ಸಾವಿರಕ್ಕೂ ಹೆಚ್ಚು ಲೈಕ್​ಗಳು ಮತ್ತು ಒಂದೂವರೆ ಸಾವಿರಕ್ಕೂ ಅಧಿಕ ರೀಟ್ವೀಟ್​ಗಳು ಆಗಿವೆ.

ವಿಡಿಯೋ ನೋಡಿದ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದು, ಬಳಕೆದಾರರೊಬ್ಬರು ಪ್ರತಿಕ್ರಿಯಿಸಿ, “ಅವಳ ಬಗ್ಗೆ ಹೆಮ್ಮೆಯಿದೆ… ಅತ್ಯುತ್ತಮವಾಗಿದೆ” ಎಂದು ಹೇಳಿದ್ದಾರೆ. ಮತ್ತೊಬ್ಬ ನೆಟ್ಟಿಗರು ಕಾಮೆಂಟ್ ಮಾಡಿ, “ಆ ನಗು… ಅದ್ಭುತ!” ಎಂದರೆ, ಮಗದೊಬ್ಬರು, “ಸ್ಫೂರ್ತಿದಾಯಕ” ಎಂದು ಹೇಳಿಕೊಂಡಿದ್ದಾರೆ. ಮಗದೊಬ್ಬರು ಪ್ರತಿಕ್ರಿಯಿಸಿ, “ಅವಳ ಆತ್ಮವಿಶ್ವಾಸದ ಮಟ್ಟವು ತುಂಬಾ ಹೆಚ್ಚಾಗಿದೆ. ಹ್ಯಾಟ್ಸ್ ಆಫ್” ಎಂದಿದ್ದಾರೆ.

Published On - 5:01 pm, Mon, 18 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ