Viral Video: ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ 21ವರ್ಷದ ಯುವಕ ಕುಸಿದು ಬಿದ್ದು ಸಾವು

|

Updated on: Sep 17, 2023 | 4:53 PM

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಯುವಕನೊಬ್ಬ ಜಿಮ್‌ನ ಟ್ರೆಡ್‌ಮಿಲ್‌ನಲ್ಲಿ ವಾಕಿಂಗ್​​​ ಮಾಡುತ್ತಿರುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಫಟನೆ ನಡೆದಿದೆ. ಯುವಕ ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Viral Video: ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ 21ವರ್ಷದ ಯುವಕ ಕುಸಿದು ಬಿದ್ದು ಸಾವು
Viral Video
Follow us on

ಉತ್ತರ ಪ್ರದೇಶ: ಯುವಕನೊರ್ವ ಯುವಕನೊಬ್ಬ ಜಿಮ್‌ನ ಟ್ರೆಡ್‌ಮಿಲ್‌ನಲ್ಲಿ ವಾಕಿಂಗ್​​​ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಆಘಾತಕಾರಿ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಈ ಸಿಸಿಟಿವಿ ದೃಶ್ಯಾವಳಿಗಳು ನೆಟ್ಟಿಗರಲ್ಲಿ ನಡುಕ ಉಂಟಾಗಿಸಿದೆ. ಸರಸ್ವತಿ ವಿಹಾರದಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಮೃತ ಯುವಕ ಸಿದ್ಧಾರ್ಥ್ ಕುಮಾರ್ ಸಿಂಗ್(21) ಎಂದು ತಿಳಿದುಬಂದಿದೆ. ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ವರದಿಯಾಗುತ್ತಿದೆ. ಇತ್ತೀಚೆಗಷ್ಟೇ ಪ್ರಾಪರ್ಟಿ ಡೀಲರ್ ಕಚೇರಿಯಲ್ಲಿ ಕಾಯುತ್ತಿರುವಾಗ ಒಬ್ಬರು ಸಾವನ್ನಪ್ಪಿದ ಹಾಗೂ ಇನ್ನೊಬ್ಬರು ಮದುವೆಯಲ್ಲಿ ನೃತ್ಯ ಮಾಡುವಾಗ ಕುಸಿದುಬಿದ್ದು ಮೃತಪಟ್ಟಿದ್ದರು.

ಇದನ್ನೂ ಓದಿ: ಮುತ್ತು ಕೊಡಲು ಬಂದ ಯುವಕನ ತುಟಿ ಕಚ್ಚಿದ ನಾಗರಹಾವು!

ಸಿದ್ಧಾರ್ಥ್ ಕುಮಾರ್ ಜಿಮ್‌ನಲ್ಲಿ ಕುಸಿದುಬಿದ್ದ ಕೂಡಲೇ ಇಬ್ಬರು ಆತನ ಸಹಾಯಕ್ಕೆ ಧಾವಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ಆದರೆ ದುರದೃಷ್ಟವಶಾತ್,ಯುವಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಸಿದ್ಧಾರ್ಥ್ ನೋಯ್ಡಾದ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು, ತಮ್ಮ ತಂದೆಯೊಂದಿಗೆ ನೋಯ್ಡಾದಲ್ಲಿ ವಾಸಿಸುತ್ತಿದ್ದರು. ಯುವಕನ ತಾಯಿ ಬಿಹಾರದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ. ದುರಂತ ಘಟನೆಗೆ 10 ನಿಮಿಷಗಳ ಮೊದಲು ಸಿಂಗ್ ತನ್ನ ತಾಯಿಯೊಂದಿಗೆ ಮಾತನಾಡಿದ್ದರು ಎಂದು ತಿಳಿದುಬಂದಿದೆ. ಮೃತದೇಹವನ್ನು ಬಿಹಾರದ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: