AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ನೋಡನೋಡುತ್ತಿದ್ದಂತೆ ವಿಮಾನದಿಂದ ಕೆಳಗೆ ಬಿದ್ದ ಸಿಬ್ಬಂದಿ, ವೈರಲ್ ಆಯ್ತು ವಿಡಿಯೋ

ಕೆಲವೊಂದು ವಿಡಿಯೋಗಳನ್ನು ನೋಡುವಾಗ ಎದೆಝಲ್ ಎನ್ನುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಭಯ ಹುಟ್ಟಿಸುವಂತಹ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಸಿಬ್ಬಂದಿ‌ಯೊಬ್ಬರು ವಿಮಾನದಿಂದ ಕೆಳಗೆ ಬಿದ್ದಿದ್ದು, ಈ ವಿಡಿಯೋ ನೋಡಿದ ನೆಟ್ಟಿಗರ ಎದೆ ಒಂದು ಕ್ಷಣ ಝಲ್ ಎಂದಿದೆ.

Viral Video : ನೋಡನೋಡುತ್ತಿದ್ದಂತೆ ವಿಮಾನದಿಂದ ಕೆಳಗೆ ಬಿದ್ದ ಸಿಬ್ಬಂದಿ, ವೈರಲ್ ಆಯ್ತು ವಿಡಿಯೋ
ಸಾಯಿನಂದಾ
| Edited By: |

Updated on: May 18, 2024 | 7:12 PM

Share

ಕೆಲವೊಮ್ಮೆ ನಾವು ಮಾಡುವ ಸಣ್ಣ ಪುಟ್ಟ ಎಡವಟ್ಟುಗಳು ಇನ್ನೊಬ್ಬರ ಜೀವಕ್ಕೆ ಕಂಟಕವಾಗುತ್ತದೆ. ಗೊತ್ತೋ ಗೊತ್ತಿಲ್ಲದೇ ಮಾಡುವ ಕೆಲಸದಿಂದ ವ್ಯಕ್ತಿಯ ಪ್ರಾಣವು ಹೋಗಬಹುದು. ಹೌದು, ವಿಮಾನದಿಂದ ಕೆಳಗೆ ಇಳಿಯುತ್ತಿದ್ದ ಸಂದರ್ಭದಲ್ಲಿ ಸ್ಟೆಪ್‌ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ ಪರಿಣಾಮ ಸಿಬ್ಬಂದಿ‌ಯೊಬ್ಬರು ವಿಮಾನದಿಂದ ಕೆಳಗೆ ಬಿದ್ದಿರುವ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಘಟನೆಯು ಮೇ 16 ರಂರು ಇಂಡೋನೇಷ್ಯಾದ ಜಕಾರ್ತ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ.

ಈ ವಿಡಿಯೋವನ್ನು ನೋಡಿದಾಗ ವಿಮಾನದಿಂದ ವ್ಯಕ್ತಿ ಹೊರಬರುತ್ತಿದ್ದಂತೆಯೇ ಕೆಳಗಡೆ ಇದ್ದಂತಹ ಇಬ್ಬರು ಕಾರ್ಮಿಕರು ಸ್ಟೆಪ್‌ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ್ದು, ಈ ಘಟನೆ ನಡೆಯಲು ಕಾರಣವಾಗಿದೆ. ಆದರೆ ಅದೃಷ್ಟವಶಾತ್ ಕೆಳಗೆ ಬಿದ್ದ ಸಿಬ್ಬಂದಿಯು ಪ್ರಾಣಾಪಾಯದಿಂದಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಧಗಧಗನೆ ಹೊತ್ತಿ ಉರಿದ ಬುಲೆಟ್ ಬೈಕ್, ಬೆಂಕಿ ನಂದಿಸುವಾಗ ಪೆಟ್ರೋಲ್ ಟ್ಯಾಂಕ್ ಸ್ಫೋಟ, 10 ಮಂದಿಗೆ ಗಾಯ

ಈ ವಿಡಿಯೋವನ್ನು ದ್ರಶಶಿ ಶೇಖರ್ ಸಿಂಗ್ ಎನ್ನುವ ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಕೆಳಗಡೆಯಿದ್ದ ಕಾರ್ಮಿಕರು ಸ್ಟೆಪ್‌ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ್ದಾರೆ. ಆದರೆ ವಿಮಾನದ ಒಳಗಡೆಯಿದ್ದ ಸಿಬ್ಬಂದಿಯು ಮೆಟ್ಟಿಲುಯಿದೆ ಎಂದುಕೊಂಡು ಕಾಲಿಟ್ಟಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವಿಡಿಯೋವನ್ನು ಐದು ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ