Viral Video : ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ನೀರು ಕುಡಿಯಲು ನೆರವಾದ ಆನೆ

ಸ್ವಾರ್ಥ ಮನುಷ್ಯನ ಪ್ರೀತಿಗಿಂತ ಮೂಕ ಪ್ರಾಣಿಗಳ ಪ್ರೀತಿಯೇ ಮೇಲು ಎನ್ನುವ ಮಾತಿದೆ. ಈ ಮೂಕ ಪ್ರಾಣಿಗಳು ತನ್ನನ್ನು ಸಾಕಿದ ಮಾಲೀಕನಿಗೆ ಜೀವನ ಪರ್ಯಂತ ಋಣಿಯಾಗಿರುತ್ತವೆ. ಆದರೆ ಇದೀಗ ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ನೀರು ಕುಡಿಯಲು ನೆರವಾದ ಆನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ಆನೆಯ ನಿಸ್ವಾರ್ಥ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Viral Video : ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ನೀರು ಕುಡಿಯಲು ನೆರವಾದ ಆನೆ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: May 04, 2024 | 5:12 PM

ಪ್ರಾಣಿಗಳ ಪ್ರೀತಿಯೆ ಹಾಗೆ ನಿಷ್ಕಲ್ಮಷವಾದದ್ದು. ತಮ್ಮನ್ನು ಸಾಕಿದ ಮಾಲೀಕರಿಗೆ ಪ್ರೀತಿಯನ್ನು ತೋರಿಸುತ್ತ ಜೀವನಪರ್ಯಂತ ಜೊತೆಗೆ ಇರುತ್ತವೆ. ಕೇವಲ ಶ್ವಾನಗಳಷ್ಟೇ ಅಲ್ಲ ಝೆಡ್ ಆನೆಗಳು ಸಹ ತಮ್ಮ ಮಾಲೀಕರಿಗೆ ವಿಧೇಯರಾಗಿರುತ್ತವೆ. ಮಾಲೀಕನ ನೋವಿಗೆ ಮಿಡಿಯುವ ಈ ಆನೆಗಳು ಸದಾ ಜೊತೆಯಿರುತ್ತವೆ. ಇದೀಗ ನೀರು ಕುಡಿಯಲು ಮಾಲೀಕನಿಗೆ ಸಹಾಯ ಮಾಡಿದ ಆನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಲ್ಲೇ ಇದೆ. ಬಿಸಿಲಿನಿಂದ ಜನರು ಮಾತ್ರವಲ್ಲದೆ ಪ್ರಾಣಿಗಳು ತತ್ತರಿಸಿ ಹೋಗಿವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ಆನೆಯೊಂದು ನೀರು ಕುಡಿಯಲು ನೆರವಾದ ದೃಶ್ಯವೊಂದು ಎಲ್ಲರ ಗಮನ ಸೆಳೆಯುತ್ತಿವೆ. ಬೆಂಕಿ ಟಿವಿ ಟಿ ನರಸೀಪುರ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ತಡವಾಗಿ ಬಂದ ಶಿಕ್ಷಕಿಯ ಬಟ್ಟೆ ಹಿಡಿದೆಳೆದು ಥಳಿಸಿದ ಪ್ರಿನ್ಸ್ ಪಾಲ್

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋದಲ್ಲಿ ಬೋರ್ ವೆಲ್ ನಲ್ಲಿ ಮಾಲೀಕನು ನೀರು ಕುಡಿಯುತ್ತಿದ್ದು, ಆನೆಯು ಮಾಲೀಕನಿಗೆ ನೆರವಾಗುತ್ತಿರುವುದನ್ನು ಕಾಣಬಹುದು. ಈ ವಿಡಿಯೋವು ನಲವತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಹಾಗೂ ಲೈಕ್ಸ್ ಪಡೆದುಕೊಂಡಿದ್ದು, ಕೆಲವರು ಆನೆಯ ಗುಣವನ್ನು ಕೊಂಡಾಡಿದ್ದಾರೆ. ಇನ್ನು ಕೆಲವರು ಸೂಪರ್ ಎಂದರೆ, ಹಲವರು ಹೃದಯದ ಸಿಂಬಲ್ ಕಳುಹಿಸುವ ಮೂಲಕ ಮೆಚ್ಚುಗೆಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ