Viral Video: ನವಿಲಿಗೆ ಕೈಯಾರೆ ಕಾಳು ತಿನ್ನಿಸಿದ ತರಕಾರಿ ಮಾರುವ ಮಹಿಳೆ; ವೈರಲ್ ವಿಡಿಯೋಗೆ ಭಾರೀ ಮೆಚ್ಚುಗೆ

ಆನಂದ್ ಮಹೀಂದ್ರಾ ಶೇರ್ ಮಾಡಿರುವ ಈ ವಿಡಿಯೋ ಈಗಾಗಲೇ 10 ಲಕ್ಷಕ್ಕೂ ಹೆಚ್ಚು ಜನರಿಂದ ವೀಕ್ಷಿಸಲ್ಪಟ್ಟಿದೆ. 56 ಸೆಕೆಂಡ್​ಗಳ ಈ ವಿಡಿಯೋದಲ್ಲಿ ತರಕಾರಿಗಳ ಮಧ್ಯೆ ಕುಳಿತಿರುವ ಹೆಂಗಸು ತನ್ನ ಬಳಿ ನಡೆದುಕೊಂಡು ಬರುವ ನವಿಲಿಗೆ ಕಾಳು ತಿನ್ನಿಸತೊಡಗುತ್ತಾಳೆ.

Viral Video: ನವಿಲಿಗೆ ಕೈಯಾರೆ ಕಾಳು ತಿನ್ನಿಸಿದ ತರಕಾರಿ ಮಾರುವ ಮಹಿಳೆ; ವೈರಲ್ ವಿಡಿಯೋಗೆ ಭಾರೀ ಮೆಚ್ಚುಗೆ
ನವಿಲಿಗೆ ಕಾಳು ತಿನ್ನಿಸುತ್ತಿರುವ ಮಹಿಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 11, 2021 | 5:45 PM

ಸಾಮಾಜಿಕ ಜಾಲತಾಣಗಳಲ್ಲಿ ಬಹಳ ಆ್ಯಕ್ಟಿವ್ ಆಗಿರುವ ಆನಂದ್ ಮಹೀಂದ್ರಾ ಆಗಾಗ ತಮಗೆ ಬಹಳ ಇಷ್ಟವಾದ, ಪ್ರೇರಣೆ ನೀಡುವಂತಹ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆನಂದ್ ಮಹೀಂದ್ರಾ ಹಂಚಿಕೊಂಡಿರುವ ಭಾವನಾತ್ಮಕವಾದ ಹೊಸ ವಿಡಿಯೋ ಟ್ವಿಟ್ಟಿಗರ ಮನ ಗೆದ್ದಿದೆ. ತರಕಾರಿ ಮಾರುವ ಹೆಂಗಸೊಬ್ಬರು ತಾನೇ ಕೈಯಾರೆ ನವಿಲಿಗೆ ಕಾಳು ತಿನ್ನಿಸುತ್ತಿರುವ ಈ ವಿಡಿಯೋ ನೋಡಿ ಖುಷಿಯಾಗಿರುವ ಆನಂದ್ ಮಹೀಂದ್ರಾ ಆ ವಿಡಿಯೋವನ್ನು ತಮ್ಮ ಪೇಜಿನಲ್ಲಿ ಹಂಚಿಕೊಂಡಿದ್ದಾರೆ.

ಪ್ರತಿದಿನವೂ ನವಿಲಿಗೆ ಕಾಳು ತಿನ್ನಿಸುವ ತರಕಾರಿ ಮಾರುವ ಹೆಂಗಸಿನ ಮಾತೃಹೃದಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆನಂದ್ ಮಹೀಂದ್ರಾ ಶೇರ್ ಮಾಡಿರುವ ಈ ವಿಡಿಯೋ ಈಗಾಗಲೇ 10 ಲಕ್ಷಕ್ಕೂ ಹೆಚ್ಚು ಜನರಿಂದ ವೀಕ್ಷಿಸಲ್ಪಟ್ಟಿದೆ. 56 ಸೆಕೆಂಡ್​ಗಳ ಈ ವಿಡಿಯೋದಲ್ಲಿ ತರಕಾರಿಗಳ ಮಧ್ಯೆ ಕುಳಿತಿರುವ ಹೆಂಗಸು ತನ್ನ ಬಳಿ ನಡೆದುಕೊಂಡು ಬರುವ ನವಿಲಿಗೆ ಕಾಳು ತಿನ್ನಿಸತೊಡಗುತ್ತಾಳೆ. ಆ ಮಹಿಳೆಯೊಂದಿಗೆ ಬಹಳ ಆತ್ಮೀಯತೆ ಹೊಂದಿರುವ ಆ ನವಿಲು ಯಾವುದೇ ಭಯವಿಲ್ಲದೆ, ಹಿಂಜರಿಕೆಯಿಲ್ಲದೆ ಧೈರ್ಯವಾಗಿ ಆಕೆಯ ಪಕ್ಕದಲ್ಲಿ ನಿಂತು ಕಾಳು ತಿನ್ನುತ್ತದೆ. ಪ್ರತಿದಿನವೂ ಆ ಜಾಗಕ್ಕೆ ಬರುವ ನವಿಲಿಗೆ ಆ ಹೆಂಗಸು ಕಾಳು ತಿನ್ನಿಸುತ್ತಾಳೆ ಎಂಬುದನ್ನು ಆಕೆ ಹೇಳಿಕೊಂಡಿದ್ದಾಳೆ.

ಮಾನವೀಯತೆ ಇನ್ನೂ ಉಳಿದಿದೆ ಎಂದು ತೋರಿಸಲೆಂದೇ ಕೆಲವೊಮ್ಮೆ ನಮ್ಮ ನಡುವೆ ಇಂತಹ ದೃಶ್ಯಗಳು ಕಣ್ಮುಂದೆ ಬರುತ್ತವೆ ಎಂದು ಆನಂದ್ ಮಹೀಂದ್ರಾ ಖುಷಿಯಿಂದ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಭಾರತದ ರಾಷ್ಟ್ರಪಕ್ಷಿಗೆ ಭಾರತಮಾತೆ ಊಟ ಮಾಡಿಸುತ್ತಿದ್ದಾಳೆ ಎಂದು ಕೆಲವರು ಟ್ವಿಟ್ಟರ್​ನಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲೇ ಯೋಗಾಸನ ಮಾಡಿದ ಯುವತಿ; ಶಾಕಿಂಗ್ ವಿಡಿಯೋ ಇಲ್ಲಿದೆ

Shocking News: ಮನುಷ್ಯರ ಮೂತ್ರದಿಂದ ತಯಾರಾದ ಬಿಯರ್​ಗೆ ಭಾರೀ ಬೇಡಿಕೆ; ಏನಿದು ವಿಚಿತ್ರ ಸುದ್ದಿ?

( Anand Mahindra shares viral video of woman vegetable vendor feeding a peacock by Hand)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ