Viral Video: ಕೋಕ್​ ಸ್ಟುಡಿಯೋದ ‘ಖಲಾಸಿ’ಗೆ ಬೆಡಗಿಯ ಬೆಲ್ಲಿ ಡ್ಯಾನ್ಸ್​; ವಾಹ್​ ಎಂದ ನೆಟ್ಟಿಗರು

Dance: ಬೆಲ್ಲಿ ಡ್ಯಾನ್ಸ್​ ಆಸ್ವಾದಿಸಲು ಎಷ್ಟು ಛಂದವೋ ಅದನ್ನು ಮಾಡುವುದು ಅಷ್ಟೇ ಕಷ್ಟ. ಕಠಿಣ ಪರಿಶ್ರಮ, ಸತತ ಅಭ್ಯಾಸ ಬೇಕಾಗುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ದಿಯಾ ಭಟ್​ ಎಂಬ ಬೆಲ್ಲಿ ಡ್ಯಾನ್ಸ್​ ಕಲಾವಿದೆ ಕೋಕ್​ಸ್ಟುಡಿಯೋದ ಖಲಾಸಿ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಮಿಲಿಯನ್​ಗಟ್ಟಲೆ ಜನರು ಈ ವಿಡಿಯೋ ನೋಡಿದ್ದಾರೆ. ಅನೇಕರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

Viral Video: ಕೋಕ್​ ಸ್ಟುಡಿಯೋದ 'ಖಲಾಸಿ'ಗೆ ಬೆಡಗಿಯ ಬೆಲ್ಲಿ ಡ್ಯಾನ್ಸ್​; ವಾಹ್​ ಎಂದ ನೆಟ್ಟಿಗರು
ಖಲಾಸಿ ಹಾಡಿಗೆ ಬೆಲ್ಲಿ ಡ್ಯಾನ್ಸ್ ಮಾಡುತ್ತಿರುವ ದಿಯಾ ಭಟ್
Follow us
ಶ್ರೀದೇವಿ ಕಳಸದ
|

Updated on:Nov 04, 2023 | 10:57 AM

Belly Dance: ಯುವತಿಯೊಬ್ಬಳು ಕೋಕ್​ಸ್ಟುಡಿಯೋದ (Coke Studio) ಖಲಾಸಿ ಹಾಡಿಗೆ ಬೆಲ್ಲಿ ಡ್ಯಾನ್ಸ್ ಮಾಡಿದ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಇನ್​ಸ್ಟಾಗ್ರಾಮಿಗರು ವಾರಾಂತ್ಯದಲ್ಲಿ ಈ ವಿಡಿಯೋ ನೋಡಿ ಉಲ್ಲಸಿತರಾಗಿದ್ದಾರೆ. ಅಚಿಂತ್ ಮತ್ತು ಆದಿತ್ಯ ಗಧ್ವಿ ಹಾಡಿರುವ ಈ ಹಾಡು ಟ್ರೆಂಡಿಂಗ್​ನಲ್ಲಿದ್ದು ಅನೇಕರು ಈ ಹಾಡಿಗೆ ತಮ್ಮ ಕಲ್ಪನೆಯಲ್ಲಿ ನೃತ್ಯ ಸಂಯೋಜಿಸಿ ರೀಲ್ ಮಾಡುತ್ತಿದ್ದಾರೆ. ಆ ಪೈಕಿ ದಿಯಾ ಭಟ್​ ಎಂಬ ಬೆಲ್ಲಿ ಡ್ಯಾನ್ಸರ್​ ವಿಡಿಯೋ ಗಮನ ಸೆಳೆಯುತ್ತಿದೆ. ನಿಜಕ್ಕೂ ಈ ನೃತ್ಯ ಆಹ್ಲಾದಕಾರಿಯಾಗಿದೆ, ನಿಮ್ಮ ಡ್ಯಾನ್ಸ್​ ಅನ್ನು ಮತ್ತೆ ಮತ್ತೆ ನೋಡುತ್ತಿದ್ದೇವ ಎನ್ನುತ್ತಿದ್ದಾರೆ ನೆಟ್ಟಿಗರು.

ಇದನ್ನೂ ಓದಿ : Viral: ಹೆಂಡತಿಯಲ್ಲಿ ತಾಯಿಯನ್ನು ಕಾಣಬೇಕೆಂದುಕೊಂಡಿರುವ ಹುಡುಗರೇ ಇದನ್ನು ಓದಿ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಅಕ್ಟೋಬರ್ 24 ರಂದು ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈತನಕ ಸುಮಾರು 3 ಮಿಲಿಯನ್​ಗಿಂತಲೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ. 2.6 ಲಕ್ಷ ಜನರು ಲೈಕ್ ಮಾಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಇದು ನಿಜಕ್ಕೂ ಅದ್ಭುತವಾಗಿತ್ತು ಎಂದಿದ್ದಾರೆ ಹಲವಾರು ಜನ.

ದಿಯಾ ಭಟ್ ಬೆಲ್ಲಿ ಡ್ಯಾನ್ಸ್​

ನಿಜಕ್ಕೂ ನೀವು ಈ ಹಾಡಿಗೆ ತುಂಬಾ ಚೆನ್ನಾಗಿ ನೃತ್ಯ ಸಂಯೋಜನೆ ಮಾಡಿದ್ದಿರಿ ಎಂದಿದ್ದಾರೆ ಒಬ್ಬರು. ನಯನಮನೋಹರವಾಗಿದೆ ಎಂದಿದ್ದಾರೆ ಇನ್ನೊಬ್ಬರು. ಅದ್ಭುತವಾಗಿದೆ ನಿಮ್ಮ ನೃತ್ಯ ಎಂದು ಮತ್ತೊಬ್ಬರು. ಅಕ್ಷರಶಃ ನನಗಿದು ಇಷ್ಟವಾಯಿತು ಎಂದಿದ್ದಾರೆ ಮಗದೊಬ್ಬರು.

ಇದನ್ನೂ ಓದಿ : Viral: ಮುಂಬೈ; ಕಳೆದುಕೊಂಡ ‘ಶಾಂತಿ’ ಹುಡುಕಲು ಪೊಲೀಸರ ಬಳಿ ಹೋಗುತ್ತಿದ್ದೇನೆ ಎಂದ ಮಹಿಳೆ; ಪೊಲೀಸರ ಉತ್ತರ ಇಲ್ಲಿದೆ 

ಬೆಲ್ಲಿ ಡ್ಯಾನ್ಸ್ ರೀಲ್​ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ, ಮಹಿಳೆಯೊಬ್ಬರು ಸನ್​ ಸನಾನಾ ಹಾಡಿನ ರೀಮಿಕ್ಸ್‌ಗೆ ಡ್ಯಾನ್ಸ್ ಮಾಡಿದ್ದು ವೈರಲ್ ಆಗಿತ್ತು. ಅನೇಕರು ಈ ರೀಲಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗ ಕಲಾವಿದೆ ದಿಯಾ ಭಟ್ ಮಾಡಿರುವ ಬೆಲ್ಲಿ ಡ್ಯಾನ್ಸ್​ ನೋಡಿ ನಿಮಗೆ ಏನೆನ್ನಿಸಿತು? ಪ್ರತಿಕ್ರಿಯೆಗಳ ಮೂಲಕ ತಿಳಿಸಿ. ಮತ್ತೆ ಮತ್ತೆ ಈ ರೀಲ್ ನೋಡಬೇಕು ಎನ್ನಿಸುತ್ತಿದೆಯೇ? ಹ್ಯಾಪ್ಪಿ ವೀಕೆಂಡ್​.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:55 am, Sat, 4 November 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ