Viral Video: ಆಟೋಗೆ ಬಲೂನ್ ಕಟ್ಟಿ ಮಗಳ ಹುಟ್ಟುಹಬ್ಬ ಸಂಭ್ರಮಿಸಿದ ತಂದೆ

ಅಪ್ಪ ಎಂದರೆ ಆಕಾಶ. ತನ್ನ ಜೀವಮಾನವಿಡೀ ತನ್ನ ಹೆಂಡತಿ ಮಕ್ಕಳ ಸಂತೋಷಕ್ಕಾಗಿ ಮೀಸಲಿಡುತ್ತಾನೆ. ತನ್ನ ಕಷ್ಟವನ್ನು ಬದಿಗಿಟ್ಟು ಮಕ್ಕಳ ಮುಖದಲ್ಲಿ ನಗು ಮೂಡಿಸಲು ಪ್ರಯತ್ನಿಸುತ್ತಾನೆ. ಅಪ್ಪ ಎನ್ನುವ ಅದ್ಭುತ ವ್ಯಕ್ತಿಯು ಮಕ್ಕಳನ್ನು ಸದಾ ಕಾಪಾಡುತ್ತಾನೆ. ಹೀಗೆ ಸದಾ ಬೆನ್ನ ಹಿಂದೆ ನಿಂತು ತಂದೆಯ ಪ್ರೀತಿ, ಕಾಳಜಿಯನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಇದೀಗ ಇಲ್ಲೊಬ್ಬ ತಂದೆಯು ತನ್ನ ಮಗಳ ಹುಟ್ಟುಹಬ್ಬಕ್ಕೆ ಆಟೋವನ್ನು ಬಲೂನ್ ನಿಂದ ಅಲಂಕರಿಸಿದ್ದು, ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

Viral Video: ಆಟೋಗೆ ಬಲೂನ್ ಕಟ್ಟಿ ಮಗಳ ಹುಟ್ಟುಹಬ್ಬ ಸಂಭ್ರಮಿಸಿದ ತಂದೆ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: May 11, 2024 | 12:42 PM

ಯಾವುದೇ ಮಕ್ಕಳಲ್ಲಿ ಕೇಳಿದರೂ ಕೂಡ  ತಂದೆಯೇ ಸೂಪರ್ ಹೀರೋ ಎಂದು ಹೇಳುವುದನ್ನು ಕೇಳಿರುತ್ತೇವೆ. ತಾಯಿಯು ಮಗುವನ್ನು ಒಂಬತ್ತು ತಿಂಗಳು ಗರ್ಭದಲ್ಲಿಟ್ಟುಕೊಂಡರೆ, ತಂದೆ ಮಾತ್ರ ತನ್ನ ಹೆಗಲ  ಮೇಲೆ ಕೂರಿಸಿಕೊಂಡು ಪ್ರಪಂಚವನ್ನು ತೋರಿಸುತ್ತಾನೆನೆ. ಅದರಲ್ಲಿ ಹೆಣ್ಣು ಮಕ್ಕಳಿಗೆ ತಂದೆಯೆಂದರೆ ಅಚ್ಚು ಮೆಚ್ಚು. ತಂದೆಗೂ ಕೂಡ ಹೆಣ್ಣು ಮಕ್ಕಳೆಂದರೆ ಪ್ರಾಣಕ್ಕಿಂತ ಹೆಚ್ಚು. ಮಕ್ಕಳಿಗಾಗಿ ಏನು ಬೇಕಾದರೂ ಮಾಡಲು ಸಿದ್ಧವಿರುವ ಅಪ್ಪನನ್ನು ನಾವೆಲ್ಲರೂ ನೋಡಿರುತ್ತೇವೆ. ಇಲ್ಲೊಬ್ಬ ತಂದೆಯು ಮಗಳ ಹುಟ್ಟುಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಿಸಿದ್ದಾನೆ. ಈ ಘಟನೆಯು ಬೆಂಗಳೂರಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆಟೋ ವಾಲಾ ತನ್ನ ಮಗಳ ಹುಟ್ಟುಹಬ್ಬದ ಸಂದರ್ಭದಲ್ಲಿ ತನ್ನ ಆಟೋವನ್ನು ಗುಲಾಬಿ ಬಣ್ಣದ ಬಲೂನ್‌ಗಳಿಂದ ಅಲಂಕರಿಸಿದ್ದಾನೆ.  ಈ ವಿಡಿಯೋವನ್ನು ‘ಸುಮೇಧಉಪ್ಪಲ್’ ಹೆಸರಿನ ಬಳಕೆದಾರರ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ವಾಹನದಲ್ಲಿ ಪ್ರಯಾಣಿಸುತ್ತಿದ್ದ ನಗರದ ನಿವಾಸಿಯೊಬ್ಬರು ಸೆರೆ ಹಿಡಿದಿದ್ದಾರೆ. ಈ ವಿಡಿಯೋ 2.6 ಲಕ್ಷಕ್ಕೂ ಹೆಚ್ಚು  ವೀಕ್ಷಣೆ ಕಂಡಿದ್ದು ಲೈಕ್‌ಗಳೊಂದಿಗೆ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಹಲವು ನೆಟ್ಟಿಗರು ಮಗಳ ಮೇಲಿನ ತಂದೆಯ ಪ್ರೀತಿಗೆ ಬೆಚ್ಚಿ ಬಿದ್ದಿದ್ದಾರೆ.

ಇದನ್ನೂ ಓದಿ: ಡೆಡ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸರಾಗವಾಗಿ 50 ಕೆಜಿ ಎತ್ತಿದ 82ರ ಅಜ್ಜಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಬಳಕೆದಾರರೊಬ್ಬರು  ‘ಇದು ತುಂಬಾ ಸುಂದರವಾಗಿದೆ. ಚಿಕ್ಕ ಸಮಾರಂಭವನ್ನು ತಮ್ಮದೇ ಆದ ರೀತಿಯಲ್ಲಿ ಆಚರಿಸುತ್ತಿದ್ದಾರೆ. ಅವರು ನಿಜಕ್ಕೂ ಗ್ರೇಟ್ ಫಾದರ್” ಎಂದಿದ್ದಾರೆ. ಮತ್ತೊಬ್ಬರು, ‘ಇವತ್ತಿನ ಬ್ಯುಸಿ ಲೈಫ್ ನಲ್ಲಿ ಮಗಳ ಹುಟ್ಟುಹಬ್ಬವನ್ನು ಇಷ್ಟು ಮುದ್ದಾಗಿ ಆಚರಿಸಿರುವುದು ಅಚ್ಚರಿ ಮೂಡಿಸಿದೆ’ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಇನ್ನೊಬ್ಬರು, ‘ಇಂತಹ ಸಣ್ಣ ಕೆಲಸಗಳು ಯಾವುದೇ ದೊಡ್ಡ ಸಂಭ್ರಮಾಚರಣೆಗಿಂತ ಹೆಚ್ಚು ಪರಿಣಾಮಕಾರಿ’ ಎಂದಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್