Viral Video: ಕ್ಲಾಸ್​ರೂಂನಲ್ಲೇ ಮಲಗಿ ಗೊರಕೆ ಹೊಡೆಯುತ್ತಿದ್ದ ಟೀಚರ್​​ಗೆ ಗಾಳಿ ಬೀಸಿದ ವಿದ್ಯಾರ್ಥಿ; ವಿಡಿಯೋ ವೈರಲ್

ಶಿಕ್ಷಕಿ ತನ್ನ ಕುರ್ಚಿಯ ಮೇಲೆ ಆರಾಮವಾಗಿ ಕುಳಿತು, ಗಾಢ ನಿದ್ದೆಯಲ್ಲಿದ್ದಾರೆ. ಆಗ ಶಾಲಾ ಬಾಲಕಿಯೊಬ್ಬಳು ಅವರ ಪಕ್ಕದಲ್ಲಿ ನಿಂತಿದ್ದಾಳೆ. ಅವರು ನಿದ್ರಿಸುತ್ತಿರುವಾಗ ಆಕೆ ತನ್ನ ಟೀಚರ್​ಗೆ ಗಾಳಿ ಬೀಸುತ್ತಿದ್ದಾಳೆ.

Viral Video: ಕ್ಲಾಸ್​ರೂಂನಲ್ಲೇ ಮಲಗಿ ಗೊರಕೆ ಹೊಡೆಯುತ್ತಿದ್ದ ಟೀಚರ್​​ಗೆ ಗಾಳಿ ಬೀಸಿದ ವಿದ್ಯಾರ್ಥಿ; ವಿಡಿಯೋ ವೈರಲ್
ಕ್ಲಾಸ್​ರೂಂನಲ್ಲಿ ನಿದ್ರೆ ಮಾಡಿದ ಟೀಚರ್​ಗೆ ಗಾಳಿ ಬೀಸಿದ ವಿದ್ಯಾರ್ಥಿImage Credit source: Money Control
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 07, 2022 | 3:36 PM

ಬಿಹಾರ: ಕ್ಲಾಸ್​ರೂಂನಲ್ಲಿ ಚೇರ್​ನಲ್ಲೇ ಮಲಗಿ ನಿದ್ರೆ ಮಾಡುತ್ತಿದ್ದ ಶಿಕ್ಷಕಿಗೆ ವಿದ್ಯಾರ್ಥಿನಿಯೊಬ್ಬಳು ಗಾಳಿ ಬೀಸುತ್ತಿರುವ ವಿಡಿಯೋವೊಂದು ವೈರಲ್ (Video Viral) ಆಗಿದೆ. ತರಗತಿಯಲ್ಲಿ ಶಿಕ್ಷಕರು ನಿದ್ರಿಸುತ್ತಿರುವಾಗ ಉಳಿದ ವಿದ್ಯಾರ್ಥಿಗಳು ಸುಮ್ಮನೆ ಕುಳಿತಿದ್ದಾರೆ. ಈ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋವನ್ನು ಬಿಹಾರದ ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಈ ಸಣ್ಣ ವಿಡಿಯೋ ಕ್ಲಿಪ್‌ನಲ್ಲಿ ಶಿಕ್ಷಕಿ ತನ್ನ ಕುರ್ಚಿಯ ಮೇಲೆ ಆರಾಮವಾಗಿ ಕುಳಿತು, ಗಾಢ ನಿದ್ದೆಯಲ್ಲಿದ್ದಾರೆ. ಆಗ ಶಾಲಾ ಬಾಲಕಿಯೊಬ್ಬಳು ಅವರ ಪಕ್ಕದಲ್ಲಿ ನಿಂತಿದ್ದಾಳೆ. ಅವರು ನಿದ್ರಿಸುತ್ತಿರುವಾಗ ಅವರಿಗೆ ಗಾಳಿ ಬೀಸುತ್ತಿದ್ದಾಳೆ. ತರಗತಿಯ ನೆಲದ ಮೇಲೆ ಇತರ ವಿದ್ಯಾರ್ಥಿಗಳು ಕುಳಿತಿದ್ದಾರೆ.

View this post on Instagram

A post shared by Baat Bihar Ki (@baatbiharki)

ನವಭಾರತ್ ಟೈಮ್ಸ್ ವರದಿ ಪ್ರಕಾರ, ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಾಹಿ ಪುರೈನಾ ಗ್ರಾಮದ ಕಟರ್ವಾ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ದೃಶ್ಯಾವಳಿಗಳು ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Viral Video: ಅಬ್ಬಬ್ಬಾ ಎಂಥಾ ಬಿಸಿಲು!; ಸ್ಕೂಟಿ ಸೀಟ್ ಮೇಲೆ ಬಿಸಿ ಬಿಸಿ ದೋಸೆ ಬೇಯಿಸಿದ ಯುವಕ

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಕೆಲಸದ ಸಮಯದಲ್ಲಿ ನಿದ್ದೆ ಮಾಡುವುದಕ್ಕಾಗಿ ಶಿಕ್ಷಕರನ್ನು ದೂಷಿಸಿದ್ದಾರೆ. “ಅಂತಹ ಶಿಕ್ಷಕರನ್ನು ಅಮಾನತುಗೊಳಿಸಬೇಕು” ಎಂದು ಒಬ್ಬರು ಕಮೆಂಟ್ ಮಾಡಿದ್ದರೆ, ಇನ್ನೊಬ್ಬರು “ಬಿಹಾರದಲ್ಲಿ ಶಿಕ್ಷಣದ ಸ್ಥಿತಿಯು ಎಂದಿಗೂ ಸುಧಾರಿಸುವುದಿಲ್ಲ ಎಂದು ಅನಿಸುತ್ತಿದೆ” ಎಂದು ಕಮೆಂಟ್ ಮಾಡಿದ್ದಾರೆ.

ಈ ವೀಡಿಯೊದಲ್ಲಿರುವ ಶಿಕ್ಷಕಿಯನ್ನು ಬಬಿತಾ ಕುಮಾರಿ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಏಕೆ ನಿದ್ದೆ ಮಾಡುತ್ತಿದ್ದೀರಿ? ಎಂದು ಕೇಳಿದಾಗ, ಬಬಿತಾ ಕುಮಾರಿ ಅವರು ತನಗೆ ಹುಷಾರಿಲ್ಲದ ಕಾರಣ ತರಗತಿಯ ಕುರ್ಚಿಯ ಮೇಲೆ ಮಲಗಿದ್ದೆ ಎಂದು ಹೇಳಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ