AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಗಸದಲ್ಲೇ ವಿಮಾನದಲ್ಲಿ ಬೆಂಕಿ; ತುರ್ತು ಭೂಸ್ಪರ್ಶದ ಭಯಾನಕ ದೃಶ್ಯ ವೈರಲ್

ಪೈಲೆಟ್​​​ ಸಮಯ ಪ್ರಜ್ಞೆಯಿಂದ ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಸದ್ಯ ಆಗಸದಲ್ಲೇ ವಿಮಾನದಲ್ಲಿ ಬೆಂಕಿ ಹತ್ತಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

Viral Video: ಆಗಸದಲ್ಲೇ ವಿಮಾನದಲ್ಲಿ ಬೆಂಕಿ; ತುರ್ತು ಭೂಸ್ಪರ್ಶದ ಭಯಾನಕ ದೃಶ್ಯ ವೈರಲ್
Viral Video
ಅಕ್ಷತಾ ವರ್ಕಾಡಿ
|

Updated on:Jan 20, 2024 | 11:37 AM

Share

ಅಮೆರಿಕದ ಅಟ್ಲಾಸ್ ಏರ್ ಕಂಪನಿಯ ಬೋಯಿಂಗ್ 747-8 ಸರಕು ಸಾಗಣೆ ವಿಮಾನವು ಮಿಯಾಮಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.  ಇದರಿಂದಾಗಿ ವಿಮಾನವನ್ನು ಅದೇ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದ ಎಡ ಇಂಜಿನ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಪೈಲೆಟ್​​​ ಸಮಯ ಪ್ರಜ್ಞೆಯಿಂದ ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಸದ್ಯ ಆಗಸದಲ್ಲೇ ವಿಮಾನದಲ್ಲಿ ಬೆಂಕಿ ಹತ್ತಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು,  ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ವಿಮಾನ ಬೆಂಕಿ ಉಗುಳುತ್ತಾ ಆಕಾಶದಲ್ಲಿ ಹಾರಾಡುತ್ತಿರುವ ದೃಶ್ಯ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ವಿಮಾನ ಸಿಬ್ಬಂದಿ ಎಲ್ಲಾ ಪ್ರಮಾಣಿತ ಕಾರ್ಯವಿಧಾನಗಳನ್ನು ಅನುಸರಿಸಿ, ಮಿಯಾಮಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಬಂದಿಳಿದ್ದಿದ್ದಾರೆ ಎಂದು ಏರ್ಲೈನ್ ​​ಹೇಳಿಕೆಯಲ್ಲಿ ತಿಳಿಸಿದೆ. ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸುವುದಾಗಿ ಕಂಪನಿ ಹೇಳಿದ್ದು, ಈ ವಿಮಾನದಲ್ಲಿ ಎಷ್ಟು ಸಿಬ್ಬಂದಿ ಇದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ನೋಡ ನೋಡುತ್ತಲೇ ತರಗತಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ; ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ

ಈ ನಡುವೆ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಆಕಾಶದಲ್ಲಿ ಹಾರಾಡುತ್ತೊರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದರಲ್ಲಿ, ಆಕಾಶದ ಮಧ್ಯದಲ್ಲಿ ವಿಮಾನವು ಬೆಂಕಿಯಲ್ಲಿ ಉರಿಯುತ್ತಿರುವುದನ್ನು ಕಾಣಬಹುದು. ಇಂತಹ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:37 am, Sat, 20 January 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್