ಅಮೆರಿಕದ ಅಟ್ಲಾಸ್ ಏರ್ ಕಂಪನಿಯ ಬೋಯಿಂಗ್ 747-8 ಸರಕು ಸಾಗಣೆ ವಿಮಾನವು ಮಿಯಾಮಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ವಿಮಾನವನ್ನು ಅದೇ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದ ಎಡ ಇಂಜಿನ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಪೈಲೆಟ್ ಸಮಯ ಪ್ರಜ್ಞೆಯಿಂದ ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಸದ್ಯ ಆಗಸದಲ್ಲೇ ವಿಮಾನದಲ್ಲಿ ಬೆಂಕಿ ಹತ್ತಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ವಿಮಾನ ಬೆಂಕಿ ಉಗುಳುತ್ತಾ ಆಕಾಶದಲ್ಲಿ ಹಾರಾಡುತ್ತಿರುವ ದೃಶ್ಯ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.
ವಿಮಾನ ಸಿಬ್ಬಂದಿ ಎಲ್ಲಾ ಪ್ರಮಾಣಿತ ಕಾರ್ಯವಿಧಾನಗಳನ್ನು ಅನುಸರಿಸಿ, ಮಿಯಾಮಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಬಂದಿಳಿದ್ದಿದ್ದಾರೆ ಎಂದು ಏರ್ಲೈನ್ ಹೇಳಿಕೆಯಲ್ಲಿ ತಿಳಿಸಿದೆ. ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸುವುದಾಗಿ ಕಂಪನಿ ಹೇಳಿದ್ದು, ಈ ವಿಮಾನದಲ್ಲಿ ಎಷ್ಟು ಸಿಬ್ಬಂದಿ ಇದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
💥#BREAKING: Atlas Air Boeing 747-8 catches fire with sparks shooting out during mid flight.#Miami | #Florida #boeing7478 #atlasair pic.twitter.com/3IO5xFvMr6
— Noorie (@Im_Noorie) January 19, 2024
ಇದನ್ನೂ ಓದಿ: ನೋಡ ನೋಡುತ್ತಲೇ ತರಗತಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ; ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ
ಈ ನಡುವೆ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಆಕಾಶದಲ್ಲಿ ಹಾರಾಡುತ್ತೊರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದರಲ್ಲಿ, ಆಕಾಶದ ಮಧ್ಯದಲ್ಲಿ ವಿಮಾನವು ಬೆಂಕಿಯಲ್ಲಿ ಉರಿಯುತ್ತಿರುವುದನ್ನು ಕಾಣಬಹುದು. ಇಂತಹ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:37 am, Sat, 20 January 24