Viral Video : IPL ಫೈನಲ್ ಪಂದ್ಯದಲ್ಲಿ ಕ್ಯಾಮೆರಾಮ್ಯಾನ್ ಆಗಿ ಗಮನ ಸೆಳೆದ ನಟ ಸೋನು ಸೂದ್

ಐಪಿಎಲ್‌ 2024ರ ಫೈನಲ್‌ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಕೋಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್‌) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (ಎಸ್‌ಆರ್‌ಹೆಚ್‌) ಮೇ26 ಭಾನುವಾರದಂದು ಕಣಕ್ಕಿಳಿದಿದ್ದು, ಮೂರನೇ ಬಾರಿಗೆ ಕೆಕೆಆರ್ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಇತ್ತ ಫೈನಲ್​ ಪಂದ್ಯದ ವೇಳೆ ಬಹುಭಾಷ ನಟ ಸೋನು ಸೂದ್​ ಅವರು ಕ್ಯಾಮೆರಾಮ್ಯಾನ್ ಆಗಿ ಮೈದಾನದಲ್ಲಿ ಕಾಣಿಸಿಕೊಂಡಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

Viral Video : IPL ಫೈನಲ್ ಪಂದ್ಯದಲ್ಲಿ ಕ್ಯಾಮೆರಾಮ್ಯಾನ್ ಆಗಿ ಗಮನ ಸೆಳೆದ ನಟ ಸೋನು ಸೂದ್
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: May 27, 2024 | 10:27 AM

ನಿನ್ನೆ ಎಂಎ ಚಿದಂಬರಂ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಭಾನುವಾರ ಕೋಲ್ಕೊತಾ ನೈಟ್ ರೈಡರ್ಸ್ ತನ್ನ ಮೂರನೇ ಇಂಡಿಯನ್ ಪ್ರೀಮಿಯರ್ ಲೀಗ್ ಕಿರೀಟವನ್ನು ಗೆದ್ದುಕೊಂಡಿದೆ. ಈ ನಡುವೆ ಬಹುಭಾಷಾ ನಟ ಸೋನು ಸೂದ್ ಅವರು ಕ್ಯಾಮೆರಾದ ಹಿಡಿದು, ವಿಡಿಯೋ ಶೂಟ್ ಮಾಡುತ್ತಿರುವ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ.

ತಮ್ಮ ಎಕ್ಸ್​ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿರುವ ನಟ ಸೋನುಸೂದ್, ಐಪಿಎಲ್​​ಗೆ ಕ್ಯಾಮೆರಾಮ್ಯಾನ್​ ಬೇಕಿದ್ರೆ ಹೇಳಿ ನಾನು ರೆಡಿಯಾಗಿದ್ದೇನೆ ಎಂದು ತಮಾಷೆಯಲ್ಲಿ ಬರೆದುಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ನಟ ಸೋನು ಸೂದ್ ಅವರು ಪಂದ್ಯವನ್ನು ಸೆರೆ ಹಿಡಿಯುವ ಕ್ಯಾಮೆರಾಮ್ಯಾನ್​ ಬಳಿ ಹೋಗಿರುವುದನ್ನು ನೋಡಬಹುದು.

ಇದನ್ನೂ ಓದಿ: ಕೊನೆಗೂ ಮೌನ ಮುರಿದ ನತಾಶ; ವಿಚ್ಛೇದನ ವದಂತಿ ಬಗ್ಗೆ ಹಾರ್ದಿಕ್‌ ಪಾಂಡ್ಯ ಪತ್ನಿ ಏನಂದ್ರು ನೋಡಿ

ವೈರಲ್​​ ವಿಡಿಯೋ

ಆ ಬಳಿಕ ಕ್ಯಾಮೆರಾಮ್ಯಾನ್ ಬಳಿ ಇದ್ದ ಕ್ಯಾಮೆರಾವನ್ನು ತೆಗೆದುಕೊಂಡು ವಿಡಿಯೋ ಮಾಡಿದ್ದಾರೆ. ಭುಜದ ಮೇಲೆ ಕ್ಯಾಮೆರಾ ಇಟ್ಟುಕೊಂಡು ಅಭಿಮಾನಿಗಳ ಕಡೆ ತಿರುಗಿ ವಿಡಿಯೋ ಮಾಡಿದ್ದಾರೆ. ಆ ವೇಳೆಯಲ್ಲಿ ನೀವೆಲ್ಲಾ ಟಿವಿಯಲ್ಲಿ ಬರುತ್ತೀರಾ ನೋಡಿ ಎಂದಿದ್ದಾರೆ. ನಟ ವಿಡಿಯೋ ಮಾಡುತ್ತಿದ್ದಂತೆ ಅಭಿಮಾನಿಗಳು ಜೋರಾಗಿ ಕೇಕೆ ಹಾಕಿ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಎರಡು ಲಕ್ಷದ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡಿದ್ದು, ಫ್ಯಾನ್ಸ್ ಫುಲ್ ಫಿದಾ ಆಗಿದ್ದು ಮೆಚ್ಚುಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ