AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಾಸ್​ಪೋರ್ಟ್ ಫೋಟೋ ಕ್ಲಿಕ್ಕಿಸಿಕೊಂಡ ಬಾಲಕ; ನಿಮ್ಮ ಬಾಲ್ಯವನ್ನು ನೆನಪಿಸುವ ವಿಡಿಯೋ ಇಲ್ಲಿದೆ ನೋಡಿ

ಪುಟ್ಟ ಬಾಲಕನೊಬ್ಬ ತನ್ನ ಪಾಸ್‌ಪೋರ್ಟ್ ಫೋಟೋ ಕ್ಲಿಕ್ಕಿಸಿಕೊಳ್ಳುಲು ನಿಲ್ಲುವ ಪೋಸ್ ಮತ್ತು ನಗು ನೆಟ್ಟಿಗರ ಮನಸ್ಸನ್ನು ಗೆದ್ದುಕೊಂಡಿದೆ. ಈ ವೈರಲ್ ವಿಡಿಯೋವನ್ನು ನೋಡಿದರೆ ನಿಮ್ಮ ಬಾಲ್ಯದ ನೆನಪನ್ನು ಮರುಕಳಿಸಬಹುದು. ವೈರಲ್ ವಿಡಿಯೋ ಇಲ್ಲಿದೆ ನೋಡಿ.

Viral Video: ಪಾಸ್​ಪೋರ್ಟ್ ಫೋಟೋ ಕ್ಲಿಕ್ಕಿಸಿಕೊಂಡ ಬಾಲಕ; ನಿಮ್ಮ ಬಾಲ್ಯವನ್ನು ನೆನಪಿಸುವ ವಿಡಿಯೋ ಇಲ್ಲಿದೆ ನೋಡಿ
ಫೋಟೋಗೆ ಪೋಸ್ ಕೊಟ್ಟ ಬಾಲಕ
TV9 Web
| Edited By: |

Updated on: Jul 22, 2022 | 3:08 PM

Share

ಸಾಮಾಜಿಕ ಜಾಲತಾಣದಲ್ಲಿ ನಮ್ಮ ಬಾಲ್ಯವನ್ನು ನೆನಪಿಸುವ ಒಂದಷ್ಟು ವಿಡಿಯೋಗಳು, ಫೋಟೋಗಳು ಲಭ್ಯವಾಗುತ್ತವೆ. ಒಂದೊಮ್ಮೆ ಇಂತಹ ವಿಡಿಯೋಗಳನ್ನು ನೋಡಿದ್ದೇ ಆದರೆ “ಈ ರೀತಿ ನನ್ನ ಬಾಲ್ಯದಲ್ಲೂ ಆಗಿದೆ” ಎಂದು ಯೋಚಿಸದೆ ಇರಲಾರರು. ಇದೀಗ ಸಣ್ಣ ಬಾಲಕನ ಮುದ್ದಾದ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ನೀವು ಬಾಲ್ಯದಲ್ಲಿ ಸ್ಟುಡಿಯೋಗೆ ಹೋಗಿ ಫೋಟೋಗೆ ಪೋಸ್ ಕೊಡುವುದನ್ನು ನೆನಪಿಸಬಹುದು. ಪುಟ್ಟ ಬಾಲಕನೊಬ್ಬ ತನ್ನ ಪಾಸ್‌ಪೋರ್ಟ್ ಫೋಟೋ ಕ್ಲಿಕ್ಕಿಸಿಕೊಳ್ಳುವುದನ್ನು ವೈರಲ್ ವಿಡಿಯೋ (Viral Video) ತೋರಿಸುತ್ತದೆ.

ವೈರಲ್ ವಿಡಿಯೋದಲ್ಲಿ ಕಾಣುವಂತೆ, ಮಹಿಳೆಯೊಬ್ಬರು ತನ್ನ ಎರಡು ಮೂರು ವರ್ಷದ ಮಗನ ಫೋಟೋ ತೆಗೆಸಿಕೊಳ್ಳಲು ಸ್ಟುಡಿಯೋಗೆ ಹೋಗುತ್ತಾರೆ. ಅಲ್ಲಿ ಕ್ಯಾಮರಾಮ್ಯಾನ್ ಹೇಳಿದಂತೆ ಆ ಬಾಲಕ ಕ್ಯಾರಮಾದ ಮುಂದೆ ನಿಂತು ತನ್ನೆಲ್ಲಾ ಹಲ್ಲುಗಳು ಕಾಣುವಂತೆ ಚೀಸ್​ ಎಂದು ಹೇಳಿ ಸ್ಮೈಲ್ ಮಾಡುತ್ತಾನೆ. ಇದಾದ ನಂತರ ಕೈ ಕಟ್ಟಿಕೊಂಡು ನಿಲ್ಲುವುದನ್ನು ನೋಡಬಹುದು.

ಈ ವಿಡಿಯೋವನ್ನು firstclassjerk ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋದಲ್ಲಿ “ನಮ್ಮ ಮಗ ಪಾಸ್​ಪೋರ್ಟ್​ ಸೈಜ್ ಫೋಟೋಗೆ ನಿಲ್ಲುವುದು” ಎಂದು ಶೀರ್ಷಿಕೆ ಬರೆಯಲಾಗಿದೆ. ಈ ವಿಡಿಯೋ ವೈರಲ್ ಪಡೆದು 18.1 ಲಕ್ಷ ವೀಕ್ಷಣೆಗಳನ್ನು ಸಂಗ್ರಹಿಸಿದ್ದು, 13 ಲಕ್ಷಕ್ಕೂ ಹೆಚ್ಚು ಲೈಕ್​ಗಳು ಪಡೆದುಕೊಂಡಿದೆ.

ವಿಡಿಯೋ ವೀಕ್ಷಣೆ ಮಾಡಿದ ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿ, “ಆದರೆ, ಅವನು ನಗುವುದನ್ನು ನಾನು ಇಷ್ಟಪಡುತ್ತೇನೆ” ಎಂದಿದ್ದಾರೆ. ಮತ್ತೊಬ್ಬರು ಕಾಮೆಂಟ್ ಮಾಡಿ, ಮೊದಲ ಫೋಟೋ ಮುದ್ದಾಗಿದೆ” ಎಂದಿದ್ದಾರೆ. ಇನ್ನೊಬ್ಬರು ಕಾಮೆಂಟ್ ಮಾಡಿ, “ಅಯ್ಯೋ, ತುಂಬಾ ಮುದ್ದಾಗಿದೆ” ಎಂದು ಹೇಳಿದ್ದಾರೆ.

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!