Video: ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ ನವ ದಂಪತಿ ವಿರುದ್ಧ ಎಫ್‌ಐಆರ್ ದಾಖಲು

|

Updated on: Mar 23, 2024 | 6:01 PM

ವಿಡಿಯೋದಲ್ಲಿ ವಧು ಕೈಯಲ್ಲಿ ಪಿಸ್ತೂಲ್ ಹಿಡಿದು ಹಲವಾರು ಬಾರಿ ಗಾಳಿಯಲ್ಲಿ ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 290, 336 ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಂಪತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಉತ್ತರ ಪ್ರದೇಶ: ಮದುವೆಯಾದ ನಂತರ, ಜೋಡಿಯನ್ನು ಮಂಟಪದಿಂದ ಹೊರಾಂಗಣಕ್ಕೆ ಕರೆದುಕೊಂಡು ಹೋಗಿ ಅರುಂಧತಿ ನಕ್ಷತ್ರವನ್ನು ಕಂಡುಹಿಡಿಯಲು ಅವರಿಗೆ ಸೂಚನೆಗಳನ್ನು ನೀಡಲಾಗುತ್ತದೆ. ಆದರೆ ಇತ್ತೀಚೆಗಷ್ಟೇ ಮದುವೆಯಾದ ದಂಪತಿಗಳು ಮಂಟಪದಿಂದ ಹೊರಗೆ ಬಂದು ಅರುಂಧತಿ ನಕ್ಷತ್ರದ ಬದಲಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಪರಿಣಾಮ ನವ ದಂಪತಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಈ ಘಟನೆ ನಡೆದಿದೆ.

ವಿಡಿಯೋದಲ್ಲಿ ವಧು ಕೈಯಲ್ಲಿ ಪಿಸ್ತೂಲ್ ಹಿಡಿದು ಹಲವಾರು ಬಾರಿ ಗಾಳಿಯಲ್ಲಿ ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 290 (ಸಾರ್ವಜನಿಕ ತೊಂದರೆ ಉಂಟುಮಾಡುವ ಕೃತ್ಯ), ಸೆಕ್ಷನ್ 336 ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಂಪತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Sat, 23 March 24