Viral Video: ಮಂಟಪದಲ್ಲೇ ವರನಿಗೆ ಕಪಾಳಮೋಕ್ಷ ಮಾಡಿದ ವಧು; ವಿಡಿಯೋ ವೈರಲ್

|

Updated on: Sep 21, 2024 | 4:41 PM

ವೈರಲ್​​ ಆಗಿರುವ ವಿಡಿಯೋದಲ್ಲಿ ವಧು ವರರು ಮಂಟಪದಲ್ಲಿ ಕುಳಿತಿರುವುದನ್ನು ಕಾಣಬಹುದು. ಅಷ್ಟರಲ್ಲಿ ಯುವತಿಯೊಬ್ಬಳು ವರನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದಿದ್ದಾಳೆ. ಇದನ್ನು ನೋಡಿದ ವಧು ಕೋಪಗೊಂಡು ವರನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

Viral Video: ಮಂಟಪದಲ್ಲೇ ವರನಿಗೆ ಕಪಾಳಮೋಕ್ಷ ಮಾಡಿದ ವಧು; ವಿಡಿಯೋ ವೈರಲ್
ವರನಿಗೆ ಕಪಾಳಮೋಕ್ಷ ಮಾಡಿದ ವಧು
Follow us on

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್​​ ಆಗುತ್ತಿರುತ್ತವೆ. ಕೆಲವೊಂದು ಮದುವೆಯ ಸುಂದರ ಕ್ಷಣಗಳನ್ನು ಸೆರೆಹಿಡಿದ ವಿಡಿಯೊಗಳಿದ್ದರೆ, ಇನ್ನೂ ಕೆಲವು ಮಂಟಪದಲ್ಲಿ ಜಗಳ ಹೊಡೆದಾಟದಂತಹ ವಿಡಿಯೋಗಳು ಕೂಡ ಹರಿದಾಡುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವನ್ನು ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ವಧು ವರರು ಮಂಟಪದಲ್ಲಿ ಕುಳಿತಿರುವುದನ್ನು ಕಾಣಬಹುದು. ಅಷ್ಟರಲ್ಲಿ ಯುವತಿಯೊಬ್ಬಳು ವರನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದಿದ್ದಾಳೆ. ಇದನ್ನು ನೋಡಿದ ಪಕ್ಕದಲ್ಲಿ ಕುಳಿತ ವಧು ಕೋಪಗೊಂಡು ವರನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ವಧುವಿನ ಈ ಕ್ರಮದಿಂದ ವರ ಸಂಪೂರ್ಣ ಬೆಚ್ಚಿ ಬಿದ್ದಿದ್ದು, ಯುವತಿಯೂ ಬೆಚ್ಚಿ ಬಿದ್ದಿದ್ದಾಳೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಬಡವರ ಅಕ್ಕಿ ಬಡವರಿಗೆ ಹೋಗ್ಬೇಕು ಅಷ್ಟೆ, ಅನ್ನ ಭಾಗ್ಯ ಅಕ್ಕಿ ಕಳ್ಳ ಮಾರಾಟ ಮಾಡುವಂತಿಲ್ಲ ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್​

bridal_lehenga_designn ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 90 ಸಾವಿರಲ್ಲೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ