Viral Video: ವೇಗವಾಗಿ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವರದಿಗಳ ಪ್ರಕಾರ, ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಬುಲೆಟ್ ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕ ರಘುರಾಜ್ ಮತ್ತು ಅಭಿಷಾ ಎಂಬ ಮಹಿಳೆ ಗಾಯಗೊಂಡಿದ್ದಾರೆ. ಬುಲೆಟ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯಪ್ರದೇಶ: ಅತಿವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಬುಲೆಟ್ ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿರುವ ಘಟನೆ ಸೆಪ್ಟೆಂಬರ್ 26 ರಂದು ಮಧ್ಯಪ್ರದೇಶದ ರಾಜ್‌ಗಢ್‌ನ ಖಿಲ್ಚಿಪುರ್ ಚೆಕ್‌ಪೋಸ್ಟ್ ಬಳಿ ನಡೆದಿದೆ. ಕಾರಿನ ಚಾಲಕ ಮತ್ತು ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಬೈಕ್ ಸವಾರ ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ರಸ್ತೆ ಬದಿಯ ತರಕಾರಿ ಅಂಗಡಿಯ ಮುಂದೆ ಜನರು ತರಕಾರಿ ಖರೀದಿಸುತ್ತಿರುವುದನ್ನು ಕಾಣಬಹುದು. ಇದ್ದಕ್ಕಿದ್ದಂತೆ ವೇಗವಾಗಿ ಬಂದ ಕಾರು ಬುಲೆಟ್ ಬೈಕ್‌ಗೆ ಡಿಕ್ಕಿ ಹೊಡೆದು ಸ್ವಲ್ಪ ದೂರದಲ್ಲಿ ಸಂಪೂರ್ಣವಾಗಿ ಪಲ್ಟಿಯಾಗಿದೆ. ತಕ್ಷಣವೇ ಸ್ಥಳೀಯರು ಪಲ್ಟಿಯಾದ ಕಾರಿನತ್ತ ಧಾವಿಸಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
Car Rolled out on Road after Hitting the Classic Bullet pic.twitter.com/5JuBD6jIJj
— Ghar Ke Kalesh (@gharkekalesh) September 28, 2024
ಇದನ್ನೂ ಓದಿ: 12549555000 ಕೋಟಿ ರೂ. ವೆಚ್ಚದ ಮಾನವ ನಿರ್ಮಿತ ವಿಶ್ವದ ಅತ್ಯಂತ ದುಬಾರಿ ವಸ್ತುವಿದು
ವರದಿಗಳ ಪ್ರಕಾರ, ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಬುಲೆಟ್ ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕ ರಘುರಾಜ್ ಮತ್ತು ಅಭಿಷಾ ಎಂಬ ಮಹಿಳೆ ಗಾಯಗೊಂಡಿದ್ದಾರೆ. ಬುಲೆಟ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
@gharkekalesh ಎಂಬ ಟ್ಟಟರ್ ಖಾತೆಯಲ್ಲಿ ಸೆ. 28ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 6ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.
ಮತ್ತಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ