Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯ ಗೋಡೆ ಕುಸಿತ; ಸಿಸಿಟಿವಿಯಲ್ಲಿ ಸೆರೆ

ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯೊಂದರ ಗೋಡೆ ಕುಸಿದಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ಪರಿಣಾಮ ಓರ್ವ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣ ಹತ್ತಿರದ ಆಸ್ಪತ್​ರೆಯಲ್ಲಿ ದಾಖಲಿಸಲಾಗಿದೆ. ತರಗತಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ಸೆರೆಯಾಗಿದೆ.

Viral Video: ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯ ಗೋಡೆ ಕುಸಿತ; ಸಿಸಿಟಿವಿಯಲ್ಲಿ ಸೆರೆ
Follow us
ಅಕ್ಷತಾ ವರ್ಕಾಡಿ
|

Updated on: Jul 20, 2024 | 11:55 AM

ಗುಜರಾತ್‌:  ಖಾಸಗಿ ಶಾಲೆಯೊಂದರ ಗೋಡೆ ಕುಸಿದು ಬಿದ್ದಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. ಗೋಡೆ ಕುಸಿದ ಪರಿಣಾಮ ಓರ್ವ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್​ರೆಯಲ್ಲಿ ದಾಖಲಿಸಲಾಗಿದೆ. ವಡೋದರದ ವಘೋಡಿಯಾ ರಸ್ತೆ ಸಮೀಪದ ಶ್ರೀ ನಾರಾಯಣ ಖಾಸಗಿ ಶಾಲೆಯ ಮೊದಲ ಮಹಡಿಯಲ್ಲಿದ್ದ ತರಗತಿಯ ಗೋಡೆ ಕುಸಿದಿದ್ದು, ಮಧ್ಯಾಹ್ನ 12:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

“ಮಧ್ಯಾಹ್ನ 12:30 ರ ಸುಮಾರಿಗೆ ಘಟನೆ ಸಂಭವಿಸಿದೆ. ದೊಡ್ಡ ಧ್ವನಿ ಬಂದಿತು, ನಂತರ ನಾವು ಸ್ಥಳಕ್ಕೆ ಧಾವಿಸಿದೆವು. ಒಬ್ಬ ವಿದ್ಯಾರ್ಥಿಗೆ ತಲೆಗೆ ಗಾಯವಾಯಿದೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ” ಎಂದು ಶಾಲಾ ಪ್ರಾಂಶುಪಾಲ ರೂಪಲ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಜಿಮ್ ಟ್ರೈನರ್​​ನಿಂದಲೇ ಯುವಕನ ಮೇಲೆ ಹಲ್ಲೆ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ತರಗತಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ಸೆರೆಯಾಗಿದೆ. @GagandeepNews ಟ್ವಿಟರ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಶಾಲಾ ಆಡಳಿತ ಮಂಡಳಿಯ ಬೇಜಾವಬ್ದಾರಿಯ ಬಗ್ಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು